ETV Bharat / state

1,300 ಕಿಮೀ ಪ್ರಮುಖ ರಸ್ತೆಗಳ ಅಭಿವೃದ್ಧಿಗೆ 4,000 ಕೋಟಿ ರೂ. ಅನುದಾನ ಘೋಷಣೆ

15ನೇ 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ ಸಿಎಂ ಸಿದ್ದರಾಮಯ್ಯ, ಲೋಕೋಪಯೋಗಿ ಇಲಾಖೆಯ ವಿವಿಧ ಕೊಡುಗೆಗಳನ್ನು ನೀಡಿದ್ದಾರೆ.

author img

By ETV Bharat Karnataka Team

Published : Feb 16, 2024, 1:34 PM IST

Etv Bharat
Etv Bharat

ಬೆಂಗಳೂರು: 15ನೇ 2024-25ನೇ ಸಾಲಿನ ರಾಜ್ಯ ಬಜೆಟ್ ಮಂಡಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಲೋಕೋಪಯೋಗಿ ಇಲಾಖೆಗೆ ವಿಶೇಷ ಆದ್ಯತೆ ನೀಡಿದ್ದಾರೆ. ವಿವಿಧ ಯೋಜನೆಗಳಿಗೆ ಎಷ್ಟು ಅನುದಾನ ಕೊಡಲಾಗಿದೆ ಎಂಬುದರ ವಿವರ ಇಲ್ಲಿದೆ.

  • ಪ್ರಸಕ್ತ ಸಾಲಿನಲ್ಲಿ ಕೆಶಿಪ್ - 4 ಯೋಜನೆಯನ್ನು ಜಾರಿಗೊಳಿಸಲಾಗುವುದು. ಈ ಯೋಜನೆಯಡಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ 875 ಕಿ.ಮೀ ಉದ್ದದ ರಾಜ್ಯ ಹೆದ್ದಾರಿಯನ್ನು ಬಾಹ್ಯ ಹಣಕಾಸು ಸಂಸ್ಥೆಯ ನೆರವಿನೊಂದಿಗೆ 5,736 ಕೋಟಿ ರೂ. ಮೊತ್ತದಲ್ಲಿ ಅಭಿವೃದ್ಧಿಪಡಿಸಲಾಗುವುದು.
  • ರಾಜ್ಯದಲ್ಲಿನ 1,300 ಕಿ.ಮೀ. ಉದ್ದದ ಪ್ರಮುಖ ರಸ್ತೆಗಳನ್ನು 4,000 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸಲು ಪ್ರಸಕ್ತ ಸಾಲಿನಲ್ಲಿ ರಾಜ್ಯ ಹೆದ್ದಾರಿ ಅಭಿವೃದ್ಧಿ ಯೋಜನೆಯ (SHDP) ಹಂತ-5ನ್ನು ಪ್ರಾರಂಭಿಸಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
  • ಬೆಳಗಾವಿ ನಗರ ಪರಿಮಿತಿಯಲ್ಲಿ ವಾಹನ ದಟ್ಟಣೆ ಹಾಗೂ ಸಂಚಾರ ದಟ್ಟಣೆ ನಿವಾರಿಸಲು 450 ಕೋಟಿ ರೂ. ವೆಚ್ಚದಲ್ಲಿ 4.50 ಕಿ.ಮೀ. ಉದ್ದದ Elevated Corridor ನಿರ್ಮಾಣ ಕಾಮಗಾರಿಯನ್ನು ಕೇಂದ್ರ ಸರ್ಕಾರದ ಸಹಯೋಗದೊಂದಿಗೆ ಕೈಗೊಳ್ಳಲಾಗುವುದು.
  • ಬೆಂಗಳೂರು - ಮಂಡ್ಯ - ಮೈಸೂರು ರಾಷ್ಟ್ರೀಯ ಹೆದ್ದಾರಿಯ ಮೈಸೂರು ಹೊರವಲಯದಲ್ಲಿರುವ ಜಂಕ್ಷನ್‌ನಲ್ಲಿ ವಾಹನ ಸಂಚಾರ ದಟ್ಟಣೆಯನ್ನು ನೀಗಿಸಲು ಎನ್.ಹೆಚ್.ಎ.ಐ ಸಹಯೋಗದೊಂದಿಗೆ ಮೇಲುಸೇತುವೆ ನಿರ್ಮಾಣ ಮಾಡಲಾಗುವುದು.
  • ಮೈಸೂರಿನ ಕುಕ್ಕರಹಳ್ಳಿ ಬಳಿ ಹಾಗೂ ಕೆ.ಆರ್.ಎಸ್. ರಸ್ತೆ, ಶಿವಮೊಗ್ಗ- ಬೊಮ್ಮನಕಟ್ಟೆ ರಸ್ತೆ, ಗದಗ ಜಿಲ್ಲೆಯ ರೋಣದ ಮಲ್ಲಾಪುರ, ಚನ್ನಪಟ್ಟಣ- ಬೈರಾಪಟ್ಟಣ ಮಾರ್ಗ ಮತ್ತು ಚಿಕ್ಕಬಳ್ಳಾಪುರ ಸೇರಿದಂತೆ ಒಟ್ಟು 6 ರೈಲ್ವೆ ಮೇಲು ಹಾಗೂ ಕೆಳಸೇತುವೆ ನಿರ್ಮಾಣವನ್ನು 350 ಕೋಟಿ ರೂ. ಮೊತ್ತದಲ್ಲಿ ಕೈಗೊಳ್ಳಲಾಗುವುದು.

ಇದನ್ನೂ ಓದಿ: ಬಜೆಟ್​-2024: ಸಮುದ್ರ ಸಾರಿಗೆ ಹಾಗೂ ಪರಿಸರ ಪ್ರವಾಸೋದ್ಯಮಕ್ಕೆ ಒತ್ತು

ETV Bharat Logo

Copyright © 2024 Ushodaya Enterprises Pvt. Ltd., All Rights Reserved.