ಕಾರವಾರ (ಉತ್ತರ ಕನ್ನಡ): ನಟ ದರ್ಶನ್ ಒಳಿತಿಗಾಗಿ ಅವರ ಸಹೋದರಿಯ ಪತಿ ಕಾರವಾರದ ಕೈಗಾದಲ್ಲಿರುವ ಶನೇಶ್ವರ, ರಾಮಲಿಂಗೇಶ್ವರ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಕಾರವಾರ ತಾಲೂಕಿನ ಕೈಗಾದಲ್ಲಿ ಉದ್ಯೋಗಿಯಾಗಿರುವ ದರ್ಶನ್ ಅವರ ಭಾವ ಮಂಜುನಾಥ ಅವರು ನಟ ಸಂಕಷ್ಟದಿಂದ ಹೊರ ಬರುವಂತಾಗಲಿ, ಪ್ರಕರಣದಿಂದ ಮುಕ್ತರಾಗಬೇಕು ಎಂದು ದೇವರಿಗೆ ವಿಶೇಷ ಪೂಜೆ ಸಲ್ಲಿಸಿದರು.
ಕೈಗಾ ವಸತಿ ಸಂಕೀರ್ಣದಲ್ಲಿರುವ ರಾಮಲಿಂಗೇಶ್ವರ ದೇವಸ್ಥಾನದಲ್ಲಿ ದರ್ಶನ್ ಹೆಸರಿನಲ್ಲಿ ನವಗ್ರಹ ಪೂಜೆ, ಶನಿಶಾಂತಿ ಪೂಜೆ ಸಲ್ಲಿಸಿದ ಅವರು ಪ್ರಕರಣದಿಂದ ಬೇಗ ಮುಕ್ತರಾಗಿ ಹೊರಬರಲಿ ಎಂದು ದೇವರಲ್ಲಿ ಪ್ರಾರ್ಥನೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ.
ಇದನ್ನೂ ಓದಿ: ಇಂದೇ ನ್ಯಾಯಾಧೀಶರೆದುರು ದರ್ಶನ್ ಟೀಂ ಹಾಜರು?: ತನಿಖಾಧಿಕಾರಿಗಳಿಂದ ಮಾಹಿತಿ ಪಡೆದ ಪೊಲೀಸ್ ಕಮಿಷನರ್ - Darshan Team to Court
ಇಂದೇ ವಿಚಾರಣೆ ಸಾಧ್ಯತೆ: ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಆರೋಪಿ ಪಟ್ಟಿಯಲ್ಲಿರುವ ನಟ ದರ್ಶನ್ ಈಗಾಗಲೇ ಅರೆಸ್ಟ್ ಆಗಿದ್ದಾರೆ. ಬಂಧಿತರ ಸಂಖ್ಯೆ 18ಕ್ಕೇರಿದೆ. ದರ್ಶನ್ ಮತ್ತು ಪವಿತ್ರಾಗೌಡ ಸೇರಿ 13 ಆರೋಪಿಗಳನ್ನು 6 ದಿನಗಳ ಕಾಲ ನಗರದ 24ನೇ ಎಸಿಎಂಎಂ ನ್ಯಾಯಾಲಯ ಪೊಲೀಸರ ವಶಕ್ಕೆ ನೀಡಿ ಆದೇಶಿಸಿತ್ತು. ಭಾಗಶಃ ವಿಚಾರಣೆ ಪೂರ್ಣಗೊಳಿಸಿರುವ ಪೊಲೀಸರು ಇಂದು ಮಧ್ಯಾಹ್ನ ದರ್ಶನ್ ಸೇರಿ ಆರೋಪಿಗಳನ್ನು ನ್ಯಾಯಾಧೀಶರ ಎದುರು ಹಾಜರುಪಡಿಸುವ ಸಾಧ್ಯತೆಗಳಿವೆ. ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಗೆ ಕಮಿಷನರ್ ಬಿ. ದಯಾನಂದ್ ಭೇಟಿ ನೀಡಿ, ಮಾಹಿತಿ ಪಡೆದಿದ್ದಾರೆ.
ಇದನ್ನೂ ಓದಿ: ರೇಣುಕಾಸ್ವಾಮಿ ಕೊಲೆ ಪ್ರಕರಣ: ಆರೋಪಿ ತಂದೆ ಹೃದಯಾಘಾತದಿಂದ ಸಾವು - Darshan case Accused Father Death