ETV Bharat / state

ಕಾರ್ತಿಕ ಏಕಾದಶಿ ಆಚರಣೆ: ಹುಬ್ಬಳ್ಳಿ-ಪಂಢರಪುರ ನಡುವೆ ವಿಶೇಷ ರೈಲು ಸಂಚಾರ

ಕಾರ್ತಿಕ ಏಕಾದಶಿ ಉತ್ಸವ ಅಂಗವಾಗಿ ಭಕ್ತರ ಅನುಕೂಲಕ್ಕಾಗಿ ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಪಂಢರಪುರ ನಿಲ್ದಾಣಗಳ ನಡುವೆ ವಿಶೇಷ ರೈಲು ಸಂಚಾರವನ್ನು ನೈಋತ್ಯ ರೈಲ್ವೆ ಇಂದಿನಿಂದ ನಡೆಸಲಿದೆ.

ಕಾರ್ತಿಕ ಏಕಾದಶಿ ಆಚರಣೆ: ಹುಬ್ಬಳ್ಳಿ-ಪಂಢರಪುರ ನಡುವೆ ವಿಶೇಷ ರೈಲು ಸಂಚಾರ
ಕಾರ್ತಿಕ ಏಕಾದಶಿ ಆಚರಣೆ: ಹುಬ್ಬಳ್ಳಿ-ಪಂಢರಪುರ ನಡುವೆ ವಿಶೇಷ ರೈಲು ಸಂಚಾರ (ETV Bharat)
author img

By ETV Bharat Karnataka Team

Published : Nov 9, 2024, 7:02 AM IST

ಹುಬ್ಬಳ್ಳಿ: ಮಹಾರಾಷ್ಟ್ರದ ಅತ್ಯಂತ ಜನಪ್ರಿಯ ಆಚರಣೆಗಳಲ್ಲಿ ಒಂದಾದ ಕಾರ್ತಿಕ ಏಕಾದಶಿ ಉತ್ಸವದಲ್ಲಿ ಪಾಲ್ಗೊಳ್ಳುವ ಪ್ರಯಾಣಿಕರಿಗೆ ಅವಕಾಶ ಕಲ್ಪಿಸಲು ಶ್ರೀ ಸಿದ್ಧಾರೂಢ ಸ್ವಾಮೀಜಿ ಹುಬ್ಬಳ್ಳಿ ಮತ್ತು ಪಂಢರಪುರ ನಿಲ್ದಾಣಗಳ ನಡುವೆ ಆರು ಟ್ರಿಪ್​ಗಳಿಗೆ ಕಾಯ್ದಿರಿಸದ ವಿಶೇಷ ರೈಲುಗಳನ್ನು ನೈಋತ್ಯ ರೈಲ್ವೆ ಓಡಿಸಲಿದೆ.

ವಿವರಗಳು ಈ ಕೆಳಗಿನಂತಿವೆ:

ರೈಲು ಸಂಖ್ಯೆ 07313/07314 ಎಸ್ಎಸ್ಎಸ್ ಹುಬ್ಬಳ್ಳಿ-ಪಂಢರಪುರ-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ರೈಲು (6 ಟ್ರಿಪ್​ಗಳು)

ರೈಲು ಸಂಖ್ಯೆ 07313 ಎಸ್ಎಸ್ಎಸ್ ಹುಬ್ಬಳ್ಳಿ-ಪಂಢರಪುರ ವಿಶೇಷ ರೈಲು ನವೆಂಬರ್ 9 ರಿಂದ 15, 2024ರ ವರೆಗೆ (ನವೆಂಬರ್ 13 ಹೊರತುಪಡಿಸಿ) ಪ್ರತಿದಿನ ಸಂಜೆ 7:45ಕ್ಕೆ ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಹೊರಟು ಮರುದಿನ ಬೆಳಗ್ಗೆ 4:30ಕ್ಕೆ ಪಂಢರಪುರವನ್ನು ತಲುಪಲಿದೆ.

ವಾಪಸ್​ ರೈಲು ಸಂಖ್ಯೆ 07314 ಪಂಢರಪುರ-ಎಸ್ಎಸ್ಎಸ್ ಹುಬ್ಬಳ್ಳಿ ವಿಶೇಷ ರೈಲು ನವೆಂಬರ್ 10 ರಿಂದ 16, 2024ರವರೆಗೆ (ನವೆಂಬರ್ 14 ಹೊರತುಪಡಿಸಿ) ಪ್ರತಿದಿನ ಬೆಳಗ್ಗೆ 6:00 ಗಂಟೆಗೆ ಪಂಢರಪುರದಿಂದ ಹೊರಟು ಅದೇ ದಿನ ಸಂಜೆ 4:30 ಗಂಟೆಗೆ ಎಸ್ಎಸ್ಎಸ್ ಹುಬ್ಬಳ್ಳಿ ನಿಲ್ದಾಣಕ್ಕೆ ಆಗಮಿಸಲಿದೆ.

ಎರಡೂ ಮಾರ್ಗಗಳಲ್ಲಿ ಈ ರೈಲು ಧಾರವಾಡ, ಅಳ್ನಾವರ, ಲೋಂಡಾ, ಖಾನಾಪುರ, ದೇಸೂರು, ಬೆಳಗಾವಿ, ಪಚ್ಚಾಪುರ, ಗೋಕಾಕ್​ ರೋಡ್, ಘಟಪ್ರಭಾ, ಚಿಕ್ಕೋಡಿ ರೋಡ್, ರಾಯಬಾಗ, ಚಿಂಚಲಿ, ಕುಡಚಿ, ಉಗಾರ ಖುರ್ದ, ಶೇಡಬಾಳ, ವಿಜಯನಗರ, ಮೀರಜ್, ಸುಲ್ಗರೆ, ಕವಠೆ-ಮಹಾಂಕಾಲ್, ಧಲಗಾಂವ್, ಜತ್ ರೋಡ್ ಮತ್ತು ಸಂಗೋಳ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಈ ರೈಲಿನಲ್ಲಿ 10 ಸಾಮಾನ್ಯ ದ್ವಿತೀಯ ದರ್ಜೆ ಬೋಗಿಗಳು ಮತ್ತು ಎರಡು ಸೆಕೆಂಡ್ ಕ್ಲಾಸ್ ಲಗೇಜ್ ಕಮ್ ಬ್ರೇಕ್ ವ್ಯಾನ್​ಗಳು ಸೇರಿದಂತೆ ಒಟ್ಟು 12 ಬೋಗಿಗಳು ಇರಲಿವೆ.

ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ, ನಿರ್ಗಮನ ಸಮಯಕ್ಕಾಗಿ, ಪ್ರಯಾಣಿಕರು ಅಧಿಕೃತ ರೈಲ್ವೆ ವೆಬ್​​ಸೈಟ್​​ www.enquiry.indianrail.gov.in ಗೆ ಭೇಟಿ ನೀಡುವ ಮೂಲಕ, NTES ಅಪ್ಲಿಕೇಶನ್ ಬಳಸಿ ಅಥವಾ 139 ಸಹಾಯವಾಣಿ ನಂಬರ್​ಗೆ ಡಯಲ್ ಮಾಡುವ ಮೂಲಕ ಮಾಹಿತಿ ಪಡೆದುಕೊಳ್ಳಬಹುದು ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕರ ಸಂಪರ್ಕ ಅಧಿಕಾರಿ ಡಾ. ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ನಾಗಸಂದ್ರ-ಮಾದಾವರ ನಮ್ಮ ಮೆಟ್ರೋ ಆರಂಭ: ಮೊದಲ ದಿನ ಆರು ಸಾವಿರಕ್ಕೂ ಹೆಚ್ಚು ಜನರ ಪ್ರಯಾಣ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.