ETV Bharat / state

ಪ್ರಯಾಣಿಕರೇ ಗಮನಿಸಿ: ಕ್ರಿಸ್ಮಸ್, ಹೊಸ ವರ್ಷದ ಹಿನ್ನೆಲೆ ನೈರುತ್ಯ ರೈಲ್ವೆಯಿಂದ ವಿಶೇಷ ರೈಲು ಸೇವೆ - SPECIAL TRAIN SERVICE

ಕ್ರಿಸ್ಮಸ್ ಹಬ್ಬ ಮತ್ತು ಹೊಸ ವರ್ಷದ ಪ್ರಯುಕ್ತ ನೈರುತ್ಯ ರೈಲ್ವೆಯಿಂದ ವಿಶೇಷ ರೈಲುಗಳ ಸಂಚಾರ ಇರಲಿದೆ.

special train
ಸಂಗ್ರಹ ಚಿತ್ರ (ETV Bharat)
author img

By ETV Bharat Karnataka Team

Published : Dec 20, 2024, 9:27 AM IST

ಹುಬ್ಬಳ್ಳಿ: ಮುಂಬರುವ ಕ್ರಿಸ್ಮಸ್ ಹಬ್ಬ ಮತ್ತು ಹೊಸ ವರ್ಷದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿಯಂತ್ರಿಸಲು ಹುಬ್ಬಳ್ಳಿ - ಎಸ್ಎಂವಿಟಿ ಬೆಂಗಳೂರು ಮತ್ತು ವಾಸ್ಕೋ ಡ ಗಾಮಾ - ಎಸ್ಎಂವಿಟಿ ಬೆಂಗಳೂರು ನಿಲ್ದಾಣಗಳ ನಡುವೆ ವಿಶೇಷ ಎಕ್ಸ್​ಪ್ರೆಸ್ ರೈಲುಗಳನ್ನು ನೈರುತ್ಯ ರೈಲ್ವೆಯು ಓಡಿಸಲಿದೆ. ವಿಶೇಷ ರೈಲುಗಳ ವಿವರಗಳು ಈ ಕೆಳಗಿನಂತಿದೆ.

ಹುಬ್ಬಳ್ಳಿ - ಬೆಂಗಳೂರು ಒನ್-ವೇ ಎಕ್ಸ್​ಪ್ರೆಸ್ ವಿಶೇಷ ರೈಲು: ಈ ರೈಲು (07305) ಡಿಸೆಂಬರ್ 20ರಂದು ಎಸ್ಎಸ್ಎಸ್ ಹುಬ್ಬಳ್ಳಿಯಿಂದ ಬೆಳಗ್ಗೆ 8 ಗಂಟೆಗೆ ಹೊರಟು, ಅದೇ ದಿನ ಎಸ್ಎಂವಿಟಿ ಬೆಂಗಳೂರಿಗೆ ಸಂಜೆ 4:15ಕ್ಕೆ ತಲುಪಲಿದೆ. ಈ ರೈಲು ದಾವಣಗೆರೆ, ಬೀರೂರು, ಅರಸೀಕೆರೆ ಮತ್ತು ತುಮಕೂರು ನಿಲ್ದಾಣಗಳಲ್ಲಿ ನಿಲುಗಡೆಗೊಳ್ಳಲಿದೆ.

ಎಸ್ಎಂವಿಟಿ ಬೆಂಗಳೂರು - ವಾಸ್ಕೋ ಡ ಗಾಮಾ ನಡುವೆ ಎರಡು ಟ್ರಿಪ್ ವಿಶೇಷ (07306/07307) ರೈಲು: ರೈಲು ಸಂಖ್ಯೆ 07306 ಎಸ್ಎಂವಿಟಿ ಬೆಂಗಳೂರು - ವಾಸ್ಕೋ ಡ ಗಾಮಾ ವಿಶೇಷ ಎಕ್ಸ್​ಪ್ರೆಸ್ ರೈಲು ಡಿಸೆಂಬರ್ 20 ಮತ್ತು 22ರಂದು ಎಸ್ಎಂವಿಟಿ ಬೆಂಗಳೂರಿನಿಂದ ಸಂಜೆ 6:15ಕ್ಕೆ ಹೊರಟು, ಮರುದಿನ ವಾಸ್ಕೋ ಡ ಗಾಮಾ ನಿಲ್ದಾಣವನ್ನು ಬೆಳಗ್ಗೆ 8:45ಕ್ಕೆ ತಲುಪಲಿದೆ.

ಮರಳಿ ಇದೇ ರೈಲು (07307) ಡಿಸೆಂಬರ್ 21 ಮತ್ತು 23ರಂದು ವಾಸ್ಕೋ ಡ ಗಾಮಾ ನಿಲ್ದಾಣದಿಂದ ಬೆಳಗ್ಗೆ 10 ಗಂಟೆಗೆ ಹೊರಟು, ಅದೇ ದಿನ ರಾತ್ರಿ 11:55ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ಎಸ್ಎಂವಿಟಿ ಬೆಂಗಳೂರು - ವಾಸ್ಕೋ ಡ ಗಾಮಾ ನಡುವೆ ಒಂದು ಟ್ರಿಪ್ ವಿಶೇಷ (07308/07309) ರೈಲು: ರೈಲು ಸಂಖ್ಯೆ 07308 ಎಸ್ಎಂವಿಟಿ ಬೆಂಗಳೂರು - ವಾಸ್ಕೋ ಡ ಗಾಮಾ ವಿಶೇಷ ಎಕ್ಸ್​ಪ್ರೆಸ್ ರೈಲು ಡಿಸೆಂಬರ್ 24ರಂದು ಎಸ್ಎಂವಿಟಿ ಬೆಂಗಳೂರಿನಿಂದ ರಾತ್ರಿ 8:30ಕ್ಕೆ ಹೊರಟು, ಮರುದಿನ ಮಧ್ಯಾಹ್ನ 12:00 ಗಂಟೆಗೆ ವಾಸ್ಕೋ ಡ ಗಾಮಾ ನಿಲ್ದಾಣಕ್ಕೆ ಬರಲಿದೆ.

ವಾಪಸ್​​, ರೈಲು ಸಂಖ್ಯೆ 07309 ವಾಸ್ಕೋ ಡ ಗಾಮಾ - ಎಸ್ಎಂವಿಟಿ ಬೆಂಗಳೂರು ವಿಶೇಷ ಎಕ್ಸ್​ಪ್ರೆಸ್ ರೈಲು ಡಿಸೆಂಬರ್ 29ರಂದು ವಾಸ್ಕೋ ಡ ಗಾಮಾದಿಂದ ಮಧ್ಯಾಹ್ನ 2:30ಕ್ಕೆ ಹೊರಟು, ಮರುದಿನ ಬೆಳಿಗ್ಗೆ 5:15ಕ್ಕೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ಎಸ್ಎಂವಿಟಿ ಬೆಂಗಳೂರು - ವಾಸ್ಕೋ-ಡ-ಗಾಮಾ ನಡುವೆ ಒಂದು ಟ್ರಿಪ್ ವಿಶೇಷ (07310/07311) ರೈಲು: ರೈಲು ಸಂಖ್ಯೆ 07310 ಎಸ್ಎಂವಿಟಿ ಬೆಂಗಳೂರು - ವಾಸ್ಕೋ ಡ ಗಾಮಾ ವಿಶೇಷ ಎಕ್ಸ್​ಪ್ರೆಸ್ ರೈಲು ಡಿಸೆಂಬರ್ 30ರಂದು ಎಸ್ಎಂವಿಟಿ ಬೆಂಗಳೂರಿನಿಂದ ರಾತ್ರಿ 8:30ಕ್ಕೆ ಹೊರಟು, ಮರುದಿನ ಮಧ್ಯಾಹ್ನ 12:00 ಗಂಟೆಗೆ ವಾಸ್ಕೋ ಡ ಗಾಮಾ ನಿಲ್ದಾಣ ತಲುಪಲಿದೆ.

ಪುನಃ ಇದೇ ರೈಲು (07311) ಜನವರಿ 1, 2025ರಂದು ವಾಸ್ಕೋ ಡ ಗಾಮಾದಿಂದ ರಾತ್ರಿ 10:00 ಗಂಟೆಗೆ ಹೊರಟು, ಮರುದಿನ ಮಧ್ಯಾಹ್ನ 12:00 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ.

ರೈಲುಗಳ ಸಂಖ್ಯೆ 07306/07307, 07308/07309 ಹಾಗೂ 07310/07311 ಇವುಗಳು ಎರಡೂ ಮಾರ್ಗಗಳಲ್ಲಿ ತುಮಕೂರು, ತಿಪಟೂರು, ಅರಸೀಕೆರೆ, ಬೀರೂರು, ದಾವಣಗೆರೆ, ಹರಿಹರ, ರಾಣಿಬೆನ್ನೂರು, ಎಸ್ಎಂಎಂ ಹಾವೇರಿ, ಎಸ್ಎಸ್ಎಸ್ ಹುಬ್ಬಳ್ಳಿ, ಧಾರವಾಡ, ಲೋಂಡಾ, ಕ್ಯಾಸಲ್ ರಾಕ್, ಕುಲೆಮ್, ಸಾನ್ವೊರ್ಡೆಮ್ ಮತ್ತು ಮಡಗಾಂವ್ ನಿಲ್ದಾಣಗಳಲ್ಲಿ ನಿಲ್ಲಲಿವೆ.

ಈ ರೈಲುಗಳಲ್ಲಿ ಎರಡು ಎಸಿ ಟು ಟೈರ್ ಬೋಗಿಗಳು, 15 ಎಸಿ ತ್ರಿ ಟೈರ್ ಬೋಗಿಗಳು ಮತ್ತು ಎರಡು ಲಗೇಜ್/ಜನರೇಟರ್/ಬ್ರೇಕ್ ವ್ಯಾನ್​ಗಳು ಇರಲಿವೆ.

ಮಾಹಿತಿಗಾಗಿ ವೆಬ್​ಸೈಟ್​​ಗೆ ಭೇಟಿ ನೀಡಿ: ಪ್ರಯಾಣಿಕರು ಅಧಿಕೃತ (www.enquiry.indianrail.gov.in) ವೆಬ್​ಸೈಟ್​​ಗೆ ಭೇಟಿ ನೀಡಿ, NTES ಅಪ್ಲಿಕೇಶನ್ ಬಳಸಿ ಅಥವಾ 139 ನಂಬರ್​​ಗೆ ಡಯಲ್ ಮಾಡುವ ಮೂಲಕ ಈ ರೈಲುಗಳ ಪ್ರತಿ ನಿಲ್ದಾಣದ ಆಗಮನ/ನಿರ್ಗಮನ ಸಮಯ ಮತ್ತು ಇತರ ಮಾಹಿತಿಯನ್ನು ಪಡೆದುಕೊಳ್ಳಬಹುದು ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕ ಅಧಿಕಾರಿ ಡಾ.ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಸ್ಮಾರ್ಟ್ ಸಿಟಿ ಪಬ್ಲಿಕ್ ಬೈಸಿಕಲ್ ಶೇರಿಂಗ್ ಬಳಕೆ ಕುಸಿತ; ಡಾಕಿಂಗ್ ಸ್ಟೇಷನ್ ಸ್ಥಳಾಂತರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.