ETV Bharat / state

ದೀಪಾವಳಿ ಪ್ರಯುಕ್ತ ಬೆಂಗಳೂರು-ಕಲಬುರಗಿ ನಡುವೆ ವಿಶೇಷ ರೈಲು ಸಂಚಾರ

ದೀಪಾವಳಿ ಹಬ್ಬದ ಪ್ರಯುಕ್ತ ಬೆಂಗಳೂರು ಮತ್ತು ಕಲಬುರಗಿ ನಡುವೆ ವಿಶೇಷ ರೈಲು ಓಡಾಟ ನಡೆಸಲಿದೆ ಎಂದು ನೈಋತ್ಯ ರೈಲ್ವೆ ತಿಳಿಸಿದೆ.

SPECIAL TRAINS
ರೈಲು ನಿಲ್ದಾಣದ ಸಂಗ್ರಹ ಚಿತ್ರ (ETV Bharat)
author img

By ETV Bharat Karnataka Team

Published : Oct 28, 2024, 8:25 PM IST

ಹುಬ್ಬಳ್ಳಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ನಿವಾರಿಸಲು ನೈಋತ್ಯ ರೈಲ್ವೆ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ಮತ್ತು ಕಲಬುರಗಿ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್​ಪ್ರೆಸ್ ರೈಲು ಓಡಿಸಲಿದೆ.

  • ರೈಲು ಸಂಖ್ಯೆ 06231/06232 ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು - ಕಲಬುರಗಿ - ಸರ್ ಎಂ.ವಿಶ್ವೇಶ್ವರಯ್ಯ ಟರ್ಮಿನಲ್ ಬೆಂಗಳೂರು ವಿಶೇಷ ಎಕ್ಸ್​ಪ್ರೆಸ್ (ಒಂದು ಟ್ರಿಪ್)
  • ರೈಲು ಸಂಖ್ಯೆ 06231 ಅಕ್ಟೋಬರ್ 29ರಂದು ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್​ನಿಂದ ಮಧ್ಯಾಹ್ನ 12 ಗಂಟೆಗೆ ಹೊರಟು, ಅದೇ ದಿನ ಕಲಬುರಗಿ ನಿಲ್ದಾಣ ರಾತ್ರಿ 10:15 ಗಂಟೆಗೆ ತಲುಪಲಿದೆ.
  • ರೈಲು ಸಂಖ್ಯೆ 06232 ಅಕ್ಟೋಬರ್ 29ರಂದು ಕಲಬುರಗಿಯಿಂದ ರಾತ್ರಿ 11:30 ಗಂಟೆಗೆ ಹೊರಟು, ಮರುದಿನ ಬೆಂಗಳೂರಿನ ಸರ್ ಎಂ ವಿಶ್ವೇಶ್ವರಯ್ಯ ಟರ್ಮಿನಲ್ ನಿಲ್ದಾಣಕ್ಕೆ ಬೆಳಿಗ್ಗೆ 11:15 ಗಂಟೆಗೆ ತಲುಪಲಿದೆ.

ನಿಲುಗಡೆಗಳು: ಈ ರೈಲು ಎರಡೂ ದಿಕ್ಕುಗಳಲ್ಲಿ ಯಲಹಂಕ, ಹಿಂದೂಪುರ, ಧರ್ಮಾವರಂ, ಅನಂತಪುರ, ಗುಂತಕಲ್, ಆದೋನಿ, ಮಂತ್ರಾಲಯಂ ರೋಡ್, ರಾಯಚೂರು, ಕೃಷ್ಣ, ಯಾದಗಿರಿ ಮತ್ತು ಶಹಬಾದ್ ನಿಲ್ದಾಣಗಳಲ್ಲಿ ನಿಲ್ಲಲಿದೆ.

ಬೋಗಿ ಸಂಯೋಜನೆ: ಈ ರೈಲು 18 ಬೋಗಿಗಳನ್ನು ಹೊಂದಿರುತ್ತದೆ. 02 ಎಸಿ -3 ಟೈರ್, 10 ಸ್ಲೀಪರ್ ಕ್ಲಾಸ್, 04 ಸಾಮಾನ್ಯ ದ್ವಿತೀಯ ದರ್ಜೆ ಮತ್ತು 02 ಎಸ್ಎಲ್ಆರ್ ಬೋಗಿ ಸೇರಿದಂತೆ ಒಟ್ಟು 18 ಬೋಗಿಗಳನ್ನು ಹೊಂದಿರುತ್ತದೆ ಎಂದು ನೈರುತ್ಯ ರೈಲ್ವೆ ಪ್ರಕಟಣೆ ತಿಳಿಸಿದೆ.

ಇದನ್ನೂ ಓದಿ: ರೈಲ್ವೆ ಪ್ರಯಾಣಿಕರೇ ಗಮನಿಸಿ: ದೀಪಾವಳಿ ಪ್ರಯುಕ್ತ ಈ ಮಾರ್ಗದಲ್ಲಿ ವಿಶೇಷ ರೈಲುಗಳ ಓಡಾಟ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.