ETV Bharat / state

ಪ್ರಯಾಣಿಕರ ಗಮನಕ್ಕೆ: ದೀಪಾವಳಿ ಪ್ರಯುಕ್ತ ಕರಾವಳಿ ಜಿಲ್ಲೆಗಳಿಗೆ 2 ವಿಶೇಷ ರೈಲು ಓಡಾಟ - DEEPAVALI SPECIAL TRAIN

ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ನೈರುತ್ಯ ರೈಲ್ವೆ ಬೆಂಗಳೂರು-ಕಾರವಾರ ಹಾಗೂ ಬೆಂಗಳೂರು-ಮಂಗಳೂರು ನಡುವೆ ವಿಶೇಷ ರೈಲು ವ್ಯವಸ್ಥೆ ಕಲ್ಪಿಸಲಿದೆ.

ನೈರುತ್ಯ ರೈಲ್ವೆ, ರೈಲು ನಿಲ್ದಾಣ
ನೈರುತ್ಯ ರೈಲ್ವೆ ಕಚೇರಿ, ರೈಲು ನಿಲ್ದಾಣ (IANS)
author img

By ETV Bharat Karnataka Team

Published : Oct 18, 2024, 4:22 PM IST

ಹುಬ್ಬಳ್ಳಿ: ದೀಪಾವಳಿ ಹಬ್ಬದ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆ ಸರಿದೂಗಿಸುವ ಸಲುವಾಗಿ ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್-ಕಾರವಾರ ಮತ್ತು ಯಶವಂತಪುರ-ಮಂಗಳೂರು ಜಂಕ್ಷನ್ ನಿಲ್ದಾಣಗಳ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್​ಪ್ರೆಸ್​ ರೈಲುಗಳನ್ನು ಓಡಿಸಲು ನೈಋತ್ಯ ರೈಲ್ವೆ ವಲಯ ನಿರ್ಧರಿಸಿದೆ.

06597 ಸಂಖ್ಯೆಯ ರೈಲು ಅ.30ರಂದು ಬೆಂಗಳೂರಿನ ಸರ್.ಎಂ.ವಿಶ್ವೇಶ್ವರಯ್ಯ ಟರ್ಮಿನಲ್‌ನಿಂದ ಮಧ್ಯಾಹ್ನ 1 ಗಂಟೆಗೆ ಹೊರಟು ಚಿಕ್ಕಬಾಣಾವರ, ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ, ಸುರತ್ಕಲ್, ಮೂಲ್ಕಿ, ಉಡುಪಿ, ಬಾರ್ಕೂರು, ಕುಂದಾಪುರ, ಬೈಂದೂರು, ಭಟ್ಕಳ, ಮುರ್ಡೇಶ್ವರ, ಹೊನ್ನಾವರ, ಕುಮಟಾ, ಗೋಕರ್ಣ ರೋಡ್ ಮತ್ತು ಅಂಕೋಲಾ ನಿಲ್ದಾಣಗಳ ಮೂಲಕ ಮರುದಿನ ಬೆಳಗಿನ ಜಾವ 4 ಗಂಟೆಗೆ ಕಾರವಾರ ತಲುಪಲಿದೆ.

ಪುನಃ ಇದೇ ರೈಲು (06598) ಅ.31ರಂದು ಮಧ್ಯಾಹ್ನ 12 ಗಂಟೆಗೆ ಕಾರವಾರದಿಂದ ಹೊರಟು ಅದೇ ಮಾರ್ಗವಾಗಿ ಮರುದಿನ ಬೆಳಗಿನ ಜಾವ 4 ಗಂಟೆಗೆ ಎಸ್ಎಂವಿಟಿ ಬೆಂಗಳೂರು ತಲುಪಲಿದೆ. ಈ ರೈಲಿನಲ್ಲಿ 4 ಜನರಲ್ ಸೆಕೆಂಡ್ ಕ್ಲಾಸ್, 10 ಸ್ಲೀಪರ್ ಕ್ಲಾಸ್, 2 ಎಸಿ ತ್ರಿ ಟೈಯರ್ ಮತ್ತು 2 ಸೆಕೆಂಡ್ ಕ್ಲಾಸ್ ಲಗೇಜ್/ಬ್ರೇಕ್ ವ್ಯಾನ್​ಗಳು ಸೇರಿದಂತೆ 18 ಬೋಗಿಗಳು ಇರಲಿವೆ.

ಯಶವಂತಪುರ-ಮಂಗಳೂರು ಜಂಕ್ಷನ್ ನಡುವೆ ರೈಲು ಸೇವೆ: 06565 ಸಂಖ್ಯೆಯ ರೈಲು ಅ.30 ರಂದು ಯಶವಂತಪುರದಿಂದ ರಾತ್ರಿ 11.50ಕ್ಕೆ ಹೊರಟು ಕುಣಿಗಲ್, ಚನ್ನರಾಯಪಟ್ಟಣ, ಹಾಸನ, ಸಕಲೇಶಪುರ, ಸುಬ್ರಹ್ಮಣ್ಯ ರೋಡ್, ಕಬಕಪುತ್ತೂರು, ಬಂಟ್ವಾಳ ನಿಲ್ದಾಣಗಳ ಮೂಲಕ ಮರುದಿನ ಬೆಳಗ್ಗೆ 11.45ಕ್ಕೆ ಮಂಗಳೂರು ಜಂಕ್ಷನ್ ತಲುಪಲಿದೆ.

ಪುನಃ ಇದೇ ರೈಲು (06566) ಅ.31ರಂದು ಮಧ್ಯಾಹ್ನ 1 ಗಂಟೆಗೆ ಮಂಗಳೂರು ಜಂಕ್ಷನ್‌ನಿಂದ ಬಂದ ಮಾರ್ಗವಾಗಿ ಹೊರಟು ಅದೇ ದಿನ ರಾತ್ರಿ 9:15ಕ್ಕೆ ಯಶವಂತಪುರ ತಲುಪಲಿದೆ.

ಪ್ರಯಾಣಿಕರು www.enquiry.indianrail.gov.in ಅಧಿಕೃತ ವೆಬ್​ಸೈಟ್​ಗೆ ಭೇಟಿ ನೀಡುವ ಮೂಲಕ ಅಥವಾ NTES ಅಪ್ಲಿಕೇಶನ್ ಬಳಸಿ ಅಥವಾ 139ಗೆ ಡಯಲ್ ಮಾಡುವ ಮೂಲಕ ರೈಲುಗಳ ಆಗಮನ/ನಿರ್ಗಮನದ ಸಮಯ ಮತ್ತು ಇತರ ವಿವರಗಳನ್ನು ಪರಿಶೀಲಿಸಬಹುದು ಎಂದು ನೈರುತ್ಯ ರೈಲ್ವೆ ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿ ಡಾ.ಮಂಜುನಾಥ ಕನಮಡಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂಓದಿ: ದಾವಣಗೆರೆ - ತುಮಕೂರು ನೇರ ರೈಲು ಕಾಮಗಾರಿ: 2 ಗಂಟೆಗಳಲ್ಲೇ ತಲುಪಬಹುದು ಬೆಂಗಳೂರು

ETV Bharat Logo

Copyright © 2025 Ushodaya Enterprises Pvt. Ltd., All Rights Reserved.