ಮೈಸೂರು: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು ಎಲ್ಲ ಆಯಾಮಗಳಿಂದಲೂ ತನಿಖೆ ನಡೆಸುತ್ತಿದ್ದಾರೆ. ಇದರ ಭಾಗವಾಗಿ ಇಂದು 11ನೇ ಆರೋಪಿ ನಾಗರಾಜ್ ಹಾಗೂ 12ನೇ ಆರೋಪಿ ಲಕ್ಷ್ಮಣ್ ನನ್ನು ಪೊಲೀಸರು ನಗರದ ಖಾಸಗಿ ಹೋಟೆಲ್ಗೆ ಕರೆದುಕೊಂಡು ಬಂದು ಮಹಜರು ನಡೆಸಿದರು. ಲಕ್ಷ್ಮಣ್, ದರ್ಶನ್ ಕಾರ್ ಡ್ರೈವರ್ ಆಗಿದ್ದಾರೆ. ನಾಗರಾಜ್, ದರ್ಶನ್ ಆಪ್ತ ಕಾರ್ಯದರ್ಶಿ ಆಗಿದ್ದಾರೆ.
ಪೊಲೀಸರು ಎರಡು ಗಂಟೆಗೂ ಹೆಚ್ಚು ಕಾಲ ಸಿಸಿಟಿವಿ ದೃಶ್ಯಗಳನ್ನು ಪರಿಶೀಲಿಸಿ ಮಾಹಿತಿ ಕಲೆ ಹಾಕಿ ನಂತರ ಆರೋಪಿಗಳಾದ ನಾಗರಾಜ್ ಮತ್ತು ಲಕ್ಷ್ಮಣ್ ಅವರನ್ನ ಬೆಂಗಳೂರಿಗೆ ಕರೆದೊಯ್ದರು. ಪೊಲೀಸರು ಇಂದು ಖಾಸಗಿ ಹೋಟೆಲ್ನಲ್ಲಿ ಸ್ಥಳ ಮಹಜರು ನಡೆಸಲು ದರ್ಶನ್ ಅವರನ್ನು ಸಹ ಕರೆತರುತ್ತಾರೆ ಎಂಬ ಮಾಹಿತಿ ಇತ್ತು. ಇದರಿಂದ ಅಭಿಮಾನಿಗಳ ದಂಡೇ ಹೋಟೆಲ್ ಬಳಿ ಜಮಾಯಿಸುವ ಹಿನ್ನೆಲೆ ಮುನ್ನೆಚ್ಚರಿಕೆ ಕ್ರಮವಾಗಿ ನಟ ದರ್ಶನ್ ಅವರನ್ನು ಬಿಟ್ಟು ಇಬ್ಬರು ಆರೋಪಿಗಳನ್ನು ಮಾತ್ರ ಪೊಲೀಸರು ಹೋಟೆಲ್ಗೆ ಕರೆತಂದು ಸ್ಥಳ ಮಹಜರು ನಡೆಸಿದರು.
ಇನ್ನು ರೇಣುಕಾಸ್ವಾಮಿ ಕೊಲೆ ಸಂಬಂಧ ಬೆಂಗಳೂರು ಪೊಲೀಸರು ಜೂನ್ 10 ರಂದು ನಗರದ ಖಾಸಗಿ ಹೋಟೆಲ್ನಲ್ಲಿ ನಟ ದರ್ಶನ್ರನ್ನು ವಶಕ್ಕೆ ಪಡೆದಿದ್ದರು. ಬಳಿಕ ಅವರನ್ನು ಬೆಂಗಳೂರಿಗೆ ಕರೆದೊಯ್ದಿದ್ದರು.