ETV Bharat / state

ಹುಬ್ಬಳ್ಳಿಯಲ್ಲಿ ಲಕ್ಷಾಂತರ ಭಕ್ತರ ಹರ್ಷೋದ್ಘಾರ: ಸಿದ್ಧಾರೂಢರ ಅದ್ಧೂರಿ ರಥೋತ್ಸವ - Siddharoodha Swami

ಲಕ್ಷಾಂತರ ಭಕ್ತ ಸಮ್ಮುಖದಲ್ಲಿ ಸಿದ್ಧಾರೂಢ ಸ್ವಾಮಿ ರಥೋತ್ಸವ ಅದ್ಧೂರಿಯಾಗಿ ಶನಿವಾರ ನೆರವೇರಿತು.

ಶ್ರೀ ಸಿದ್ಧಾರೂಢ ಸ್ವಾಮಿ ರಥೋತ್ಸವ
ಶ್ರೀ ಸಿದ್ಧಾರೂಢ ಸ್ವಾಮಿ ರಥೋತ್ಸವ
author img

By ETV Bharat Karnataka Team

Published : Mar 10, 2024, 7:16 AM IST

Updated : Mar 10, 2024, 8:25 AM IST

ಸಿದ್ಧಾರೂಢರ ಅದ್ಧೂರಿ ರಥೋತ್ಸವ

ಹುಬ್ಬಳ್ಳಿ: ಉತ್ತರ ಕರ್ನಾಟಕ ಭಾಗದ ಜನರ ಆರಾಧ್ಯ ದೈವ ಸಿದ್ಧಾರೂಢ ಸ್ವಾಮಿ ರಥೋತ್ಸವ ಲಕ್ಷಾಂತರ ಭಕ್ತರ ಹರ್ಷೋದ್ಘಾರದ ನಡುವೆ ಸಂಭ್ರಮದಿಂದ ಶನಿವಾರ ನಡೆಯಿತು.

ಸಿದ್ಧಾರೂಢರ ರಥ ದೇವಸ್ಥಾನದ ಮುಖ್ಯ ಬೀದಿಯಲ್ಲಿ ಸಾಗುತ್ತಿದ್ದಂತೆಯೇ ಭಕ್ತಾರು ಉತ್ತತ್ತಿ, ಬಾಳೆಹಣ್ಣು, ನಿಂಬೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ರಸ್ತೆಯ ಇಕ್ಕೆಲಗಳಲ್ಲಿ ನೆರೆದಿದ್ದ ಜನಸಾಗರ ರಥೋತ್ಸವವನ್ನು ಕಣ್ತುಂಬಿಕೊಂಡಿತು.

ಓಂ ನಮಃ ಶಿವಾಯ, ಹರ ಹರ ಮಹಾದೇವ: ಡೊಳ್ಳು, ಬ್ಯಾಂಜೋ ಸೇರಿದಂತೆ ವಿವಿಧ ವಾದ್ಯ-ಮೇಳಗಳೊಂದಿಗೆ ಸಾಗಿದ ಯುವ ಸಮೂಹ ನೃತ್ಯ ಮಾಡುವ ಮೂಲಕ ಜಾತ್ರೆಯ ಸಂಭ್ರಮವನ್ನು ಇಮ್ಮಡಿಗೊಳಿಸಿತು. ತೇರು ಮುಂದೆ ಸಾಗುತ್ತಿದ್ದಂತೆ ಓಂ ನಮಃ ಶಿವಾಯ, ಹರ ಹರ ಮಹಾದೇವ ಎಂಬ ಉದ್ಘಾರ ಭಕ್ತಿಲೋಕ ಧರೆಗಿಳಿಸಿದಂತೆ ಭಾಸವಾಯಿತು. ಇನ್ನು‌ ಜಾತ್ರೆಗೆ ಲಕ್ಷಾಂತರ ಭಕ್ತರ ದಂಡು ಸಾಕ್ಷಿಯಾಯಿತು. ಶನಿವಾರ ಸಂಜೆ 5.30 ಗಂಟೆಗೆ ಸಲ್ಲುವ ಶುಭಮುಹೂರ್ತದಲ್ಲಿ ಹುಬ್ಬಳ್ಳಿಯಲ್ಲಿ ಸಿದ್ಧಾರೂಢ ಹಾಗೂ ಗುರುನಾಥಾರೂಢರ ಉತ್ಸವ ಮೂರ್ತಿಗಳನ್ನು ಅಲಂಕೃತ ತೇರಿನಲ್ಲಿಟ್ಟು ಎಳೆಯಲಾಯಿತು.

ಜಾತಿ, ಧರ್ಮದ ಸಂಕೋಲೆಗಳನ್ನು ಮೀರಿ ಸರ್ವ ಜನಾಂಗದವರು ರಥೋತ್ಸವದಲ್ಲಿ ಭಾಗಿಯಾಗಿದರು. ಟೆಂಪೋ, ಟ್ರ್ಯಾಕ್ಟರ್​​, ದ್ವಿಚಕ್ರ, ಕಾರುಗಳಲ್ಲಿ ಮಾತ್ರವಲ್ಲದೆ, ಪಾದಯಾತ್ರೆ ಮೂಲಕವೂ ರಾಜ್ಯದ ವಿವಿಧ ಭಾಗದಿಂದ ಲಕ್ಷಾಂತರ ಭಕ್ತರು ಜಾತ್ರೆಗೆ ಬಂದಿದ್ದರು. ಶಕ್ತಿ ಯೋಜನೆಯಿಂದ ಭಕ್ತರ ಸಂಖ್ಯೆ ಕಳೆದ ವರ್ಷಕ್ಕಿಂತ ಹೆಚ್ಚಾಗಿತ್ತು.

ಶಿವರಾತ್ರಿ ಪ್ರಯುಕ್ತ ವಿಶೇಷ ಕಳೆ ಪಡೆದಿದ್ದ ಶ್ರೀಮಠ, ದೀಪಾಲಂಕಾರಗಳಿಂದ ಕಂಗೊಳಿಸುತ್ತಿತ್ತು. ಇನ್ನು ಮಹಾರಾಷ್ಟ್ರ, ಆಂಧ್ರ ಪ್ರದೇಶ, ಗೋವಾ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಾದ ಬಾಗಲಕೋಟೆ, ವಿಜಯಪುರ, ದಾವಣಗೆರೆ, ಕಲಬುರಗಿ, ಹಾವೇರಿ, ಗದಗ, ಬೆಳಗಾವಿ, ಚಿತ್ರದುರ್ಗ ಸೇರಿದಂತೆ ವಿವಿಧ ಭಾಗಗಳಿಂದ ಆಗಮಿಸಿದ ಲಕ್ಷಾಂತರ ಭಕ್ತಾರು ರಥೋತ್ಸವದಲ್ಲಿ ಪಾಲ್ಗೊಂಡಿದ್ದರು.

ಮಹಾರಥೋತ್ಸವದ ಅಂಗವಾಗಿ ಸುಮಾರು 70 ಅಡಿ ಎತ್ತರದ ತೇರನ್ನು ಶೃಂಗರಿಸಲಾಗಿತ್ತು. ಮಠದ ಆವರಣದಿಂದ ಹೊರಟ ತೇರು ಮಹಾದ್ವಾರದವರೆಗೆ ತಲುಪಿ ಮತ್ತೆ ಮಠಕ್ಕೆ ಮರಳಿತು. ಇನ್ನು ಜಾತ್ರೆಗೆ ಬರುವ ಭಕ್ತರು ತಮ್ಮ ವಾಹನಗಳನ್ನು ನಿಲ್ಲಿಸಲು ಶ್ರೀನಿವಾಸ ನಗರದ ಉದ್ಯಾನದ ಬಳಿ, ಅಂಬೇಡ್ಕರ್ ಕ್ರೀಡಾಂಗಣ, ಆನಂದನಗರ ರಸ್ತೆಗೆ ಹೊಂದಿಕೊಂಡು ವ್ಯವಸ್ಥೆ ಮಾಡಲಾಗಿತ್ತು.

ಉತ್ತರ ಕರ್ನಾಟಕದ ಅದ್ಧೂರಿ ಜಾತ್ರಾ ಮಹೋತ್ಸವಗಳಲ್ಲಿ ಒಂದಾದ ಸಿದ್ಧಾರೂಢ ಮಠಕ್ಕೆ ಬರುವ ಭಕ್ತರಿಗೆ ಊಟ, ಉಪಹಾರದ ಉಚಿತ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಮಾಡಲಾಗಿತ್ತು. ಜೊತೆಗೆ ನಗರದಲ್ಲಿ ಭಕ್ತರಿಗೆ ಆಟೋ ಚಾಲಕರು ಉಚಿತ ಪ್ರಯಾಣದ ಸೇವೆ ನೀಡಿದರು.

ಇದನ್ನೂ ಓದಿ: ವಾರದ ರಾಶಿ ಭವಿಷ್ಯ: ಈ ರಾಶಿಯವರಿಗೆ ಜಮೀನು ಅಥವಾ ಆಸ್ತಿಯಲ್ಲಿ ಹೂಡಿಕೆಗೆ ಇದು ಸಕಾಲ!

Last Updated : Mar 10, 2024, 8:25 AM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.