ETV Bharat / state

ಉಡುಪಿ: ಶ್ರೀ ವಿದ್ಯೇಶತೀರ್ಥರಿಗೆ ಸಪ್ತತಿ ಅಭಿನಂದನೋತ್ಸವ, ಭಾಗವತ ಭಾಸ್ಕರ ಪ್ರಶಸ್ತಿ ಪ್ರದಾನ - CHATURMASYA VRATA

author img

By ETV Bharat Karnataka Team

Published : Sep 16, 2024, 5:07 PM IST

Updated : Sep 16, 2024, 10:53 PM IST

ಭಂಡಾರಿಕೇರಿ ಮಠಾಧೀಶರು 37 ವರ್ಷಗಳ ಬಳಿಕ ಉಡುಪಿಯಲ್ಲಿ ತಮ್ಮ 45ನೇ ಚಾತುರ್ಮಾಸ್ಯ ವ್ರತವನ್ನು ನಡೆಸಿದ್ದಾರೆ. ಇದೇ ವೇಳೆ 70ನೇ ಜನ್ಮ ವರ್ಧಂತಿಯನ್ನು ಕಾಣುತ್ತಿರುವ ಶ್ರೀ ವಿದ್ಯೆಶತೀರ್ಥ ಶ್ರೀಪಾದರಿಗೆ ಅಭಿನಂದನೋತ್ಸವ ನಡೆಯಿತು.

ವಿದ್ಯೇಶತೀರ್ಥರಿಗೆ ಸಪ್ತತಿ ಅಭಿನಂದನೋತ್ಸವ
ವಿದ್ಯೇಶತೀರ್ಥರಿಗೆ ಸಪ್ತತಿ ಅಭಿನಂದನೋತ್ಸವ (ETV Bharat)

ಉಡುಪಿ: ಭಂಡಾರಿಕೇರಿ ಮಠಾಧೀಶರು 37 ವರ್ಷಗಳ ಬಳಿಕ ಉಡುಪಿಯಲ್ಲಿ ತಮ್ಮ 45ನೇ ಚಾತುರ್ಮಾಸ್ಯ ವ್ರತವನ್ನು ನಡೆಸಿದ್ದಾರೆ. ಇದೇ ವೇಳೆ 70ನೇ ಜನ್ಮ ವರ್ಧಂತಿಯನ್ನು ಕಾಣುತ್ತಿರುವ ಶ್ರೀ ಭಂಡಾರಕೇರಿ ಮಠಾಧೀಶರಾದ ಶ್ರೀ ವಿದ್ಯೆಶತೀರ್ಥ ಶ್ರೀಪಾದರಿಗೆ ಪರ್ಯಾಯ ಪುತ್ತಿಗೆ ಮಠ ಶ್ರೀ ಕೃಷ್ಣಮಠದ ವತಿಯಿಂದ ಶ್ರೀ ಸುಗುಣೇಂದ್ರತೀರ್ಥ ಶ್ರೀಪಾದರ ನೇತೃತ್ವದಲ್ಲಿ ಅಭಿನಂದನೋತ್ಸವ ನಡೆಯಿತು.

ಉಡುಪಿ ರಥಬೀದಿಯಲ್ಲಿ ಶ್ರೀ ಭಂಡಾರಕೇರಿ ಮಠದ ಪಟ್ಟದ ದೇವರಾದ ಶ್ರೀ ಕೋದಂಡರಾಮದೇವರ ಸ್ವರ್ಣ ರಥೋತ್ಸವ ನೆರವೇರಿದ ಬಳಿಕ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ನಡೆದ ವಿಶಿಷ್ಟ ಕಾರ್ಯಕ್ರಮದಲ್ಲಿ ನೂರಾರು ಮಹಿಳೆಯರಿಂದ ಶ್ರೀ ವಿದೇಶ ತೀರ್ಥರು ರಚಿಸಿದ ಹರಿಕೀರ್ತನೆಗಳ ಸಾಮೂಹಿಕ ಗಾಯನ ನಡೆಯಿತು.

ವೇದ, ವಾದ್ಯ ಮಂತ್ರ ಘೋಷಗಳ ಹಿನ್ನೆಲೆಯಲ್ಲಿ ನಾಣ್ಯಗಳಿಂದ ಶ್ರೀಗಳಿಗೆ ಸಾಲಂಕೃತ ತಕ್ಕಡಿಯಲ್ಲಿ ತುಲಾಭಾರ, ಮಂಗಳಾರತಿಗೈದ ಬಳಿಕ ಯಕ್ಷಕಿರೀಟಾಲಂಕೃತ ಸಿಂಹಾಸನದಲ್ಲಿ ಕುಳ್ಳಿರಿಸಿ ಶಾಲು ಹಾರ ಪುಷ್ಪಕಿರೀಟ ಧಾರಣ ಮಾಡಿ ಪುಷ್ಪಾಭಿಷೇಕ ನಡೆಸಲಾಯಿತು. ಬೃಹತ್ ಕಡಗೋಲು, ನಿಧಿ, ಫಲವಸ್ತು ಸಹಿತ ಶ್ರೀ ಭಾಗವತ ಭಾಸ್ಕರ ಬಿರುದು ಹೊತ್ತ ಮಾನಪತ್ರದೊಂದಿಗೆ ಪುತ್ತಿಗೆ ಉಭಯಶ್ರೀಗಳು ಅಭಿನಂದನೆ ಅರ್ಪಿಸಿದರು.

ಬಳಿಕ ಸಂದೇಶ ನೀಡಿದ ಪುತ್ತಿಗೆ ಶ್ರೀ ಸುಗುಣೇಂದ್ರ ತೀರ್ಥರು, ಶ್ರೀ ವಿದ್ಯೇಶತೀರ್ಥರು ಕಠಿಣ ಯತಿಧರ್ಮ ಪಾಲನೆ, ಶ್ರೀ ರಾಮದೇವರ ನಿತ್ಯೋಪಾಸನೆ, ಅಖಂಡ ಅಧ್ಯಯನ, ವೇದವ್ಯಾಖ್ಯಾನ‌, ಹರಿಕೀರ್ತನೆಗಳ ರಚನೆ, ವಿದ್ವತ್ ಪೋಷಣೆ, ನಿರಂತರ ಭಾಗವತ ಪ್ರವಚನ, ಮನೆಮನೆಗಳಲ್ಲಿ ಭಾಗವತ ಅಭಿಯಾನವೇ ಮೊದಲಾದ ಕೈಂಕರ್ಯಗಳನ್ನು ನಡೆಸಿದ್ದಾರೆ ಎಂದು ಹೇಳಿದರು.

ವಿದ್ಯೇಶತೀರ್ಥರು ವಿಶೇಷಗಳಿಂದ ಅಮಲ ಭಕ್ತಿ, ಸ್ತುತಿ, ಶ್ರುತಿ, ಶಕ್ತಿ, ದ್ಯುತಿ, ಸ್ಫೂರ್ತಿ, ಯುಕ್ತಿ ಹೀಗೆ ಸಪ್ತ 'ತಿ' ಗಳ ಸಂಗಮ ಸ್ವರೂಪರೆನಿಸಿ ಸಾರ್ಥಕ ಜೀವನದ 70ನ್ನು ಪೊರೈಸುತ್ತಿರುವ ಯತಿ ವಿಶಿಷ್ಟರಾಗಿದ್ದಾರೆ. ಅವರೊಂದಿಗೆ ತಾವು ಸಹಪಾಠಿಗಳಾಗಿದ್ದ ದಿನಗಳನ್ನು ಸ್ಮರಿಸಿದ ಶ್ರೀಗಳು, ತಮ್ಮ ಪರ್ಯಾಯ ಕಾಲದಲ್ಲಿ ಉಡುಪಿಯಲ್ಲಿ ಚಾತುರ್ಮಾಸ್ಯ ವ್ರತ ನಡೆಸಿದ್ದಕ್ಕಾಗಿ ಅವರಿಗೆ ಅಭಿನಂದನೆ ಸಲ್ಲಿಸುತ್ತೇನೆ ಎಂದರು.

ಪ್ರಸ್ತುತ ಕಾಲಘಟ್ಟದಲ್ಲಿ ನೂರಾರು ಹರಿಕೀರ್ತನೆಗಳನ್ನು ರಚಿಸಿ ತೀರಾ ಅಪರೂಪದ ಕೀರ್ತನಕಾರರಾಗಿರುವ ಅವರು ಶ್ರೀ ವ್ಯಾಸರಾಜರು, ಕನಕ, ಪುರಂದರ ಮೊದಲಾದ ಹರಿದಾಸರ ಸಾಲಿಗೆ ಸೇರಿ ಶ್ರೀ ವಿದ್ಯೇಶವಿಠಲದಾಸರಾಗಿದ್ದಾರೆ ಎಂದು ಪುತ್ತಿಗೆ ಶ್ರೀಗಳು ಪ್ರಶಂಶಿಸಿದರು.

ಕಿರಿಯ ಶ್ರೀ ಸುಶ್ರೀಂದ್ರ ತೀರ್ಥರು ಅನುಗ್ರಹ ಸಂದೇಶ ನೀಡಿದರು. ಶ್ರೀ ವಿದ್ಯೇಶ ತೀರ್ಥರು ತಮ್ಮ ಸಂದೇಶದಲ್ಲಿ ಭಗವಂತನೊಲುಮೆಗೆ ನಿಷ್ಕಲ್ಮಶವಾದ ಭಕ್ತಿಯೊಂದೇ ಪರಮಸಾಧನವೆಂದು ತಿಳಿಸಿ, ಉಡುಪಿಯಲ್ಲಿ ಈ ಬಾರಿಯ ಚಾತುರ್ಮಾಸ್ಯ ನಡೆಸಲು ಪ್ರೇರೇಪಿಸಿದ ಪುತ್ತಿಗೆ ಶ್ರೀಗಳನ್ನು ಅಭಿನಂದಿಸಿದರು. ಕಾರ್ಯಕ್ರಮದಲ್ಲಿ ಹಲವರು ಉಪಸ್ಥಿತರಿದ್ದರು.

ಇದನ್ನೂ ಓದಿ: 'ಹಿಂದುಗಳು ಹೆಚ್ಚು ಮಕ್ಕಳನ್ನು ಪಡೆಯಿರಿ, ಒಂದು ಮಗು ಸಾಕೆನಿಸಿದರೆ ಧರ್ಮ ಇರುವುದಿಲ್ಲ' - Ganapathi Sachchidananda Swamiji

Last Updated : Sep 16, 2024, 10:53 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.