ಬೆಂಗಳೂರು: ಎಸ್ಎಸ್ಎಲ್ಸಿ ಪರೀಕ್ಷೆ-2ಕ್ಕೆ ಹೆಸರು ನೋಂದಾಯಿಸುವ ದಿನಾಂಕವನ್ನು ಮೇ 19ರ ವರೆಗೆ ವಿಸ್ತರಣೆ ಮಾಡಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಆದೇಶ ಹೊರಡಿಸಿದೆ. ಎಸ್ಎಸ್ಎಲ್ಸಿ ಪರೀಕ್ಷೆ-2 ಕ್ಕೆ ಅರ್ಜಿ ಸಲ್ಲಿಸಲು ಇಂದು ಕೊನೆಯ ದಿನ ಆಗಿತ್ತು. ಇನ್ನಷ್ಟು ವಿದ್ಯಾರ್ಥಿಗಳ ನೋಂದಣಿ ಬಾಕಿ ಇದ್ದ ಹಿನ್ನೆಲೆ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಅರ್ಜಿ ಸಲ್ಲಿಕೆ ದಿನಾಂಕ ವಿಸ್ತರಿಸಲಾಗಿದೆ.
ಜೂನ್ 7 ರಿಂದ ಆರಂಭ ಆಗಲಿರುವ ಎಸ್ಎಸ್ಎಲ್ಸಿ ಪರೀಕ್ಷೆ-2ಗೆ ವಿದ್ಯಾರ್ಥಿಗಳು ಹೆಸರು ನೋಂದಾಯಿಸಲು 3 ದಿನ ಅವಧಿ ವಿಸ್ತರಣೆ ಮಾಡಲಾಗಿದೆ. ಪರೀಕ್ಷೆ -2 ಕ್ಕೆ ಹೆಸರು ನೋಂದಣಿಗೆ ಕಡೆಯ ಅವಕಾಶವಾಗಿದೆ. ಈ ಅವಕಾಶವನ್ನು ತಪ್ಪಿಸಿಕೊಳ್ಳದೇ ಅರ್ಜಿ ಸಲ್ಲಿಕೆ ಮಾಡಿ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ನಿರ್ದೇಶಕ ಹೆಚ್.ಎನ್.ಗೋಪಾಲಕೃಷ್ಣ ತಿಳಿಸಿದ್ದಾರೆ.
ಇದನ್ನೂಓದಿ:ಎಸ್ಎಸ್ಎಲ್ಸಿ ಟಾಪರ್ ಅಂಕಿತಾಗೆ ₹5 ಲಕ್ಷ, ನವನೀತ್ಗೆ ₹3 ಲಕ್ಷ ನೆರವು ಘೋಷಿಸಿದ ಸಿಎಂ - SSLC Toppers