ETV Bharat / state

ಜೂನ್ 14ರಿಂದ ಸಿಸಿಟಿವಿ ಕಣ್ಗಾವಲಿನಲ್ಲಿ ಎಸ್ಎಸ್ಎಲ್​ಸಿ ಪರೀಕ್ಷೆ-2 ಆರಂಭ - SSLC Exam 2

author img

By ETV Bharat Karnataka Team

Published : Jun 13, 2024, 5:24 PM IST

2,23,308 ವಿದ್ಯಾರ್ಥಿಗಳು ಎಸ್ಎಸ್ಎಲ್​ಸಿ ಪರೀಕ್ಷೆ-2ಗೆ ನೋಂದಣಿ ಮಾಡಿಕೊಂಡಿದ್ದು, ರಾಜ್ಯದ 724 ಕೇಂದ್ರಗಳಲ್ಲಿ ಪರೀಕ್ಷೆ ನಡೆಯಲಿದೆ.

Karnataka Board of School Examination and Valuation
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ (ETV Bharat)

ಬೆಂಗಳೂರು: ಜೂನ್ 14ರಿಂದ ಎಸ್​ಎಸ್​ಎಲ್​ಸಿ ಪರೀಕ್ಷೆ-2 ಆರಂಭಗೊಳ್ಳಲಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಪರೀಕ್ಷೆ ಸಕಲ ಸಿದ್ಧತೆ ಮಾಡಿಕೊಂಡಿದೆ. ಈ ಬಾರಿಯ ಪರೀಕ್ಷೆ ಕೂಡಾ ಸಿಸಿಟಿವಿಯ ಕಣ್ಗಾವಲಿನಲ್ಲಿಯೇ ನಡೆಯಲಿದೆ.

2024ರ ಎಸ್​ಎಸ್​ಎಲ್​ಸಿ ಪರೀಕ್ಷೆ-2 ಜೂನ್ 22ರವರೆಗೆ ನಡೆಯಲಿದೆ. ರಾಜ್ಯದ 35 ಶೈಕ್ಷಣಿಕ ಜಿಲ್ಲೆಗಳ 2,23,308 ವಿದ್ಯಾರ್ಥಿಗಳು ನೋಂದಣಿ ಮಾಡಿಕೊಂಡಿದ್ದಾರೆ. ಇದರಲ್ಲಿ 1,44,160 ಬಾಲಕರು ಮತ್ತು 79,148 ಬಾಲಕಿಯರಿದ್ದಾರೆ. ಒಟ್ಟು ನೋಂದಣಿಯಲ್ಲಿ 13,085 ವಿದ್ಯಾರ್ಥಿಗಳು ಫಲಿತಾಂಶ ವೃದ್ಧಿಗಾಗಿ ಪರೀಕ್ಷೆ ತೆಗೆದುಕೊಂಡಿದ್ದಾರೆ.

ರಾಜ್ಯದ 724 ಕೇಂದ್ರಗಳಲ್ಲಿ ಪರೀಕ್ಷೆ ನಡೆಸಲಾಗುತ್ತದೆ. ಏಳು ಮಾಧ್ಯಮಗಳಲ್ಲಿ ಪರೀಕ್ಷೆ ಬರೆಯಲು ಅವಕಾಶವಿದೆ. ಪ್ರತೀ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷಾ ಕೇಂದ್ರದ ಮುಖ್ಯಸ್ಥರು, ಪ್ರಶ್ನೆ ಪತ್ರಿಕೆ ಅಭಿರಕ್ಷಕರು, ಸ್ಥಾನಿಕ ಜಾಗೃತ ದಳದವರು ಹಾಗೂ ಕೊಠಡಿ ಮೇಲ್ವಿಚಾರಕರು ಕರ್ತವ್ಯ ನಿರ್ವಹಿಸುತ್ತಾರೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಜಿಲ್ಲಾ ಮತ್ತು ತಾಲ್ಲೂಕು ಹಂತಗಳ ವಿಚಕ್ಷಣ ದಳಗಳು ಪರೀಕ್ಷಾ ಸಂದರ್ಭದಲ್ಲಿ ಕಾರ್ಯ ನಿರ್ವಹಿಸುತ್ತವೆ. ಜಿಲ್ಲಾಧಿಕಾರಿಗಳಿಂದ ನಿಯೋಜಿತ ಇತರೆ ಇಲಾಖೆಗಳ ಜಾಗೃತ ದಳಗಳು ಎಲ್ಲಾ ಜಿಲ್ಲೆಗಳಲ್ಲಿ ಕಾರ್ಯನಿರ್ವಹಿಸಲಿವೆ. ಪ್ರತೀ ಕೇಂದ್ರದಲ್ಲಿಯೂ ಸಿಸಿಟಿವಿಗಳ ಮೂಲಕ ಪರೀಕ್ಷಾ ಅವ್ಯವಹಾರಗಳ ಬಗ್ಗೆ ನಿಗಾ ಇಡಲಾಗುತ್ತದೆ ಎಂದು ಮಂಡಳಿ ಮಾಹಿತಿ ನೀಡಿದೆ.

ಇದನ್ನೂ ಓದಿ: ಪರೀಕ್ಷಾ ಪ್ರವೇಶ ಪತ್ರ ತೋರಿಸಿ ಉಚಿತ ಪ್ರಯಾಣ ಮಾಡಿ: ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳಿಗೆ ಬಿಎಂಟಿಸಿ ಆಫರ್ - SSLC Exam 2

ETV Bharat Logo

Copyright © 2024 Ushodaya Enterprises Pvt. Ltd., All Rights Reserved.