ETV Bharat / state

ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗೆ ಸಕಲ ಸಿದ್ಧತೆ; ಫಲಿತಾಂಶ ಸುಧಾರಣೆಗೆ ಮಿಶನ್ ವಿದ್ಯಾಕಾಶಿ - SSLC PUC EXAM PREPARATION

ಈ ಬಾರಿ ವಿದ್ಯಾಕಾಶಿ ಯೋಜನೆ ಮೂಲಕ ವಿದ್ಯಾರ್ಥಿಗಳ ಫಲಿತಾಂಶ ಸುಧಾರಣೆಗೆ ಕ್ರಮವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ತಿಳಿಸಿದರು.

SSLC PUC EXAM PREPARATION
ಎಸ್ಎಸ್ಎಲ್ಸಿ, ಪಿಯುಸಿ ಪರೀಕ್ಷೆಗೆ ಸಿದ್ಧತೆ ಕುರಿತು ಜಿಲ್ಲಾಧಿಕಾರಿ ಮಾಹಿತಿ (ETV Bharat)
author img

By ETV Bharat Karnataka Team

Published : Feb 25, 2025, 5:30 PM IST

ಹುಬ್ಬಳ್ಳಿ : ಎಸ್ಎಸ್ಎಲ್ ಸಿ ಹಾಗೂ ಪಿಯುಸಿ ಪರೀಕ್ಷೆಗೆ ಧಾರವಾಡ ಜಿಲ್ಲಾಡಳಿತ ಸನ್ನದ್ಧವಾಗಿದ್ದು, ಫಲಿತಾಂಶ ಸುಧಾರಣೆಗೆ ಮಿಶನ್ ವಿದ್ಯಾಕಾಶಿ ಯೋಜನೆ ಅಡಿಯಲ್ಲಿ ಈ ವರ್ಷ ಉತ್ತಮ ಫಲಿತಾಂಶ ನಿರೀಕ್ಷಿಸಲಾಗಿದೆ ಎಂದು ಜಿಲ್ಲಾಧಿಕಾರಿ ದಿವ್ಯಾಪ್ರಭು ತಿಳಿಸಿದರು.

ನಗರದಲ್ಲಿಂದು ಈ ಕುರಿತು ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಈ ಬಾರಿ ಪಿಯುಸಿ ಪರೀಕ್ಷೆ ಬರೆಯುವ ಧಾರವಾಡ ಜಿಲ್ಲೆಯ ಒಟ್ಟು ವಿದ್ಯಾರ್ಥಿಗಳ ಸಂಖ್ಯೆ 27,830 ಇದ್ದು, ಬಾಲಕರು 13,100 ಹಾಗೂ ಬಾಲಕಿಯರು 14730, ಕಲಾ ವಿಭಾಗದಲ್ಲಿ 5413, ವಾಣಿಜ್ಯ ವಿಭಾಗದಲ್ಲಿ 8464 ಹಾಗೂ ವಿಜ್ಞಾನ ವಿಭಾಗದಲ್ಲಿ 13,958 ವಿದ್ಯಾರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ. ಒಟ್ಟು 173 ಕಾಲೇಜುಗಳಿದ್ದು, 41 ಪರೀಕ್ಷಾ ಕೇಂದ್ರಗಳಿವೆ.

ಜಿಲ್ಲಾಧಿಕಾರಿ ದಿವ್ಯಾಪ್ರಭು (ETV Bharat)

ಇನ್ನು ಎಸ್.ಎಸ್.ಎಲ್.ಸಿ ಪರೀಕ್ಷೆಗೆ 28,666 ವಿದ್ಯಾರ್ಥಿಗಳು ನೋಂದಾಯಿಸಿದ್ದಾರೆ. ಪುನರಾವರ್ತಿತ ವಿದ್ಯಾರ್ಥಿಗಳ ಸಂಖ್ಯೆ 1437, ಪುನರಾವರ್ತಿತ ಬಾಹ್ಯ ಅಭ್ಯರ್ಥಿಗಳ ಸಂಖ್ಯೆ 135 ಇದ್ದು, ಧಾರವಾಡ ಜಿಲ್ಲೆಯಲ್ಲಿ ಈ ಬಾರಿ 30,749 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಜಿಲ್ಲೆಯಲ್ಲಿ ಒಟ್ಟು ಹೈಸ್ಕೂಲ್ ಗಳ ಸಂಖ್ಯೆ 447 ಇದ್ದು, 106 ಪರೀಕ್ಷೆ ಕೇಂದ್ರಗಳು ಇವೆ ಎಂದು ಡಿಸಿ ಮಾಹಿತಿ‌ ನೀಡಿದರು.

ಫಲಿತಾಂಶ ಸುಧಾರಣೆಗೆ ವಿದ್ಯಾಕಾಶಿ : ಧಾರವಾಡ ಎರಡೂ ಪರೀಕ್ಷೆಗಳ ಫಲಿತಾಂಶದಲ್ಲಿ ಹಿಂದುಳಿಯುತ್ತಿರುವ ಹಿನ್ನೆಲೆಯಲ್ಲಿ ಫಲಿತಾಂಶ ಸುಧಾರಣೆಗೆ ಮಿಶನ್ ವಿದ್ಯಾಕಾಶಿ ಆರಂಭಿಸಲಾಗಿದೆ. ಜಿಲ್ಲೆಯ ಮಕ್ಕಳಲ್ಲಿ ವಿವಿಧ ರೀತಿಯ ತರಬೇತಿ, ಶಿಕ್ಷಣ ವ್ಯವಸ್ಥೆ ಮೂಲಕ ಶೈಕ್ಷಣಿಕ ಫಲಿತಾಂಶ ಸುಧಾರಿಸುವ ಗುರಿ ಹೊಂದಲಾಗಿದೆ. ಕಳೆದ ಒಂದು ವರ್ಷದಿಂದ ಈ ಯೋಜನೆ ಅಡಿ ವಿದ್ಯಾರ್ಥಿಗಳಿಗೆ ಪರೀಕ್ಷಾ ಸಿದ್ಧತೆಗೆ ಕ್ರಮವಹಿಸಲಾಗಿದೆ ಎಂದು ಮಾಹಿತಿ ನೀಡಿದರು.

ಕಣ್ಗಾವಲಿನಲ್ಲಿ ಉತ್ತರ ಪತ್ರಿಕೆ ರವಾನೆ : ಪರೀಕ್ಷಾ ಸಮಯದಲ್ಲಿ ವಿದ್ಯುತ್​​ ಸಮಸ್ಯೆಯಾಗದಂತೆ ನೋಡಿಕೊಳ್ಳಲು ಹೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದ್ದು, ಪರೀಕ್ಷೆ ಮುಕ್ತಾಯದ ನಂತರ ಉತ್ತರ ಪತ್ರಿಕೆಗಳನ್ನು ಮೌಲ್ಯಮಾಪನ ಕೇಂದ್ರಗಳಿಗೆ ಅಂಚೆ ಮುಖಾಂತರ ರವಾನಿಸಲು ಕ್ರಮವಹಿಸಲಾಗಿದೆ.

ಪ್ರಶ್ನೆ ಪತ್ರಿಕೆಗಳ ರವಾನೆ ಮಾಡುವ ವಾಹನಗಳಿಗೆ ಜಿ.ಪಿ.ಎಸ್ ಅಳವಡಿಸಲಾಗುತ್ತಿದ್ದು, ಜಿಲ್ಲೆಯಲ್ಲಿ ಒಟ್ಟು 15 ಮಾರ್ಗಗಳನ್ನು ಗುರುತಿಸಿ, ಪ್ರತಿ ಮಾರ್ಗಕ್ಕೆ ಮೂರು ಜನ ಅಧಿಕಾರಿಗಳ ತ್ರಿಸದಸ್ಯ ಸಮಿತಿಯ ತಂಡ ರಚಿಲಾಗಿದೆ. 45 ಅಧಿಕಾರಿಗಳನ್ನು ಮಾರ್ಗಾಧಿಕಾರಿಗಳನ್ನಾಗಿ ನಿಯೋಜನೆ ಮಾಡಲಾಗಿದೆ. ಪ್ರತಿ ಪರೀಕ್ಷಾ ಕೇಂದ್ರಗಳಿಗೆ ಜಾಗೃತದಳ, ಸಿಸಿಟಿವಿ, ವೆಬ್ ಕಾಸ್ಟಿಂಗ್ ಮೂಲಕ ಕಣ್ಗಾವಲು ಇರಿಸಲಾಗಿದೆ ಎಂದು ಜಿಲ್ಲಾಧಿಕಾರಿ ವಿವರಿಸಿದರು.

ದ್ವಿತೀಯ ಪಿಯುಸಿ ಪರೀಕ್ಷೆಗಳು ಮಾರ್ಚ್ 1ರಿಂದ ಮಾರ್ಚ್ 20ರ ವರೆಗೆ ನಡೆಯಲಿವೆ. ಬಳಿಕ ಮಾರ್ಚ್ 21ರಿಂದ ಏಪ್ರಿಲ್ 4ರ ವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಜರುಗಲಿವೆ.

ಇದನ್ನೂ ಓದಿ : ನೈಋತ್ಯ ರೈಲ್ವೆ ವಲಯದ ಟ್ರ್ಯಾಕ್​ಗಳಿಗೆ ಫೆನ್ಸಿಂಗ್: ಜನ-ಜಾನುವಾರುಗಳ ಸುರಕ್ಷತೆಗೆ ಆದ್ಯತೆ

ಇದನ್ನೂ ಓದಿ :ವಿಶೇಷಚೇತನರಿಗೆ ಹುಬ್ಬಳ್ಳಿ ರೈಲ್ವೆ ವಿಭಾಗದಿಂದ ಡಿಜಿಟಲ್ ಗುರುತಿನ ಚೀಟಿ: ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.