ETV Bharat / state

ಎಸ್​ಟಿ ವಸತಿ ಶಾಲೆ, ರಾಯಚೂರು ವಿವಿಗೆ ವಾಲ್ಮೀಕಿ ಹೆಸರು ಇಡಲಾಗುವುದು: ಸಿಎಂ ಸಿದ್ದರಾಮಯ್ಯ ಘೋಷಣೆ

ಎಲ್ಲಾ ಎಸ್​​ಟಿ ವಸತಿ ಶಾಲೆಗಳಿಗೆ ಮತ್ತು ರಾಯಚೂರು ವಿವಿಗೆ ವಾಲ್ಮೀಕಿ ಹೆಸರು ಇಡಲಾಗುವುದು ಎಂದು ವಾಲ್ಮೀಕಿ ಜಯಂತಿಯಂದೇ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದಾರೆ.

author img

By ETV Bharat Karnataka Team

Published : 1 hours ago

valmiki jayanti
ವಾಲ್ಮೀಕಿ ಜಯಂತಿ ಕಾರ್ಯಕ್ರಮ (ETV Bharat)

ಬೆಂಗಳೂರು: ರಾಜ್ಯದ ಎಲ್ಲಾ ಎಸ್​​ಟಿ ವಸತಿ ಶಾಲೆಗಳಿಗೆ ಮತ್ತು ರಾಯಚೂರು ವಿವಿಗೆ ಮಹರ್ಷಿ ವಾಲ್ಮೀಕಿ ಹೆಸರು ಇಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಮಹತ್ವದ ಘೋಷಣೆ ಮಾಡಿದರು.

ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯು ಮಹರ್ಷಿ ವಾಲ್ಮೀಕಿ ಜಯಂತಿ ಪ್ರಯುಕ್ತ ಬ್ಯಾಂಕ್ವೆಟ್ ಹಾಲ್​ನಲ್ಲಿ ಇಂದು ಆಯೋಜಿಸಿದ್ದ ಕಾರ್ಯಕ್ರಮವನ್ನು ಉದ್ಘಾಟಿಸಿ, ಐದು ಮಹನೀಯರಿಗೆ ವಾಲ್ಮೀಕಿ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.

ವಿಧಾನಸೌಧದವರೆಗೂ ಸಿಎಂ ಸಿದ್ದರಾಮಯ್ಯ ಹಾಗೂ ಇತರ ಮುಖಂಡರ ಕಾಲ್ನಡಿಗೆ (ETV Bharat)

''ಶಾಕುಂತಲಾ ನಾಟಕ ಬರೆದ ಕಾಳಿದಾಸ ಕುರುಬ ಸಮುದಾಯದವರು. ಮಹಾಭಾರತ ಬರೆದ ವ್ಯಾಸರು ಬೆಸ್ತ ಸಮುದಾಯದವರು. ರಾಮಾಯಣ ಬರೆದ ಮಹರ್ಷಿ ವಾಲ್ಮೀಕಿ ಸಮುದಾಯದವರು. ದರೋಡೆ ಮಾಡ್ಕೊಂಡು ಓಡಾಡುತ್ತಿದ್ದ ವಾಲ್ಮೀಕಿ ರಾಮಾಯಣ ಬರೆಯಲು ಸಾಧ್ಯವಾ ಎಂದು ಕತೆ ಕಟ್ಟಿಬಿಟ್ಟರು. ತಳ ಸಮುದಾಯಗಳು, ಶೂದ್ರರು ಶಿಕ್ಷಣ, ಸಂಸ್ಕೃತ ಕಲಿಯುವುದು ನಿಷಿದ್ಧವಾಗಿತ್ತು. ಇಂಥ ಹೊತ್ತಲ್ಲೇ ಸಂಸ್ಕೃತ ಕಲಿತು ಶ್ಲೋಕಗಳ ಮೂಲಕ ಜಗತ್ಪ್ರಸಿದ್ದ ರಾಮಾಯಣ ಮಹಾಕಾವ್ಯ ಬರೆದರಲ್ಲಾ, ಇದು ಹೆಮ್ಮೆಯ ಮತ್ತು ಮಾದರಿ ಸಂಗತಿ'' ಎಂದು ಸಿಎಂ ಸಿದ್ದರಾಮಯ್ಯ ಬಣ್ಣಿಸಿದರು.

valmiki jayanti
ವಾಲ್ಮೀಕಿ ಜಯಂತಿ ಕಾರ್ಯಕ್ರಮ (ETV Bharat)

ವಾಲ್ಮೀಕಿ ವಿಶ್ವಮಾನವರಾಗಿದ್ದರು: ''ಶಿಕ್ಷಣ ಕಲಿಯುವ ಅವಕಾಶ ಸಿಕ್ಕಾಗ ಇವರೆಲ್ಲಾ ಕಲಿತರು, ಬರೆದರು. ಈ ಮೂಲಕ ಜಗತ್ತಿಗೇ ಪ್ರೇರಣೆ ಆದರು. ವಾಲ್ಮೀಕಿ ಅವರು ಸಮಪಾಲು, ಸಮಬಾಳು, ಸಮಾನ ಅವಕಾಶಗಳ ಬಗ್ಗೆ ಹೇಳಿದ್ದರು. ರಾಮಾಯಣದ ರಾಮರಾಜ್ಯ ಅಂದರೆ ಸಮಪಾಲಿನ ಸಮಾನ ಅವಕಾಶಗಳ ರಾಜ್ಯ ಎಂದರ್ಥ. ರಾಮನ‌ ಮಕ್ಕಳಾದ ಲವ, ಕುಶರಿಗೆ ಆಶ್ರಯ ನೀಡಿ ಶಿಕ್ಷಣ ಕೊಟ್ಟಿದ್ದು ವಾಲ್ಮೀಕಿ ಮಹರ್ಷಿ. ವಾಲ್ಮೀಕಿ ವಿಶ್ವಮಾನವರಾಗಿದ್ದರು ಎನ್ನುವುದಕ್ಕೆ ಇದು ಸಣ್ಣ ಉದಾಹರಣೆ'' ಎಂದು ಸಿಎಂ ಹೇಳಿದರು.

valmiki jayanti
ವಾಲ್ಮೀಕಿ ಜಯಂತಿ ಕಾರ್ಯಕ್ರಮ (ETV Bharat)

''ಎಸ್​ಸಿಎಸ್​ಪಿ/ಟಿಎಸ್​ಪಿ ಮೂಲಕ ಎಸ್​ಸಿ/ಎಸ್​ಟಿ ಮೂಲಕ ಸಮುದಾಯದ ಜನಸಂಖ್ಯೆಗೆ ಅನುಗುಣವಾಗಿ ಹಣವನ್ನು ಆಯವ್ಯಯದಲ್ಲಿ ಮೊದಲಿಗೆ ಮೀಸಲಿಟ್ಟಿದ್ದು ನಮ್ಮ ಕಾಂಗ್ರೆಸ್​ ಸರ್ಕಾರ. ತಳ ಸಮುದಾಯಗಳಿಗೆ ವಸತಿ ಶಾಲೆಗಳನ್ನು ಮೊದಲು ಆರಂಭಿಸಿದ್ದು ನಾನು. ಪ್ರತಿ ಹೋಬಳಿಗೂ ಒಂದು ವಸತಿ ಶಾಲೆ ಮಾಡಿಯೇ ಮಾಡುತ್ತೇನೆ'' ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಪುನರುಚ್ಚರಿಸಿದರು.

''ಕೇಂದ್ರದಲ್ಲಿರುವ ಬಿಜೆಪಿ ಸರ್ಕಾರವಾಗಲೀ, ಬಿಜೆಪಿ ಅಧಿಕಾರದಲ್ಲಿರುವ ಒಂದೇ ಒಂದು ರಾಜ್ಯದಲ್ಲಾಗಲಿ ಎಸ್​ಸಿಎಸ್​ಪಿ/ಟಿಎಸ್​ಪಿ ಕಾಯ್ದೆಯನ್ನು ಜಾರಿಗೆ ತಂದಿಲ್ಲ ಏಕೆ?'' ಎಂದು ಪ್ರಶ್ನಿಸಿದ ಸಿಎಂ, ''ಬರೀ ಬಾಯಿ ಮಾತಲ್ಲಿ ಸಮಾನತೆ ಬರಲ್ಲ. ಆರ್ಥಿಕ ಕಾರ್ಯಕ್ರಮಗಳನ್ನು ಜಾರಿಗೆ ತರಬೇಕು'' ಎಂದು ಭಾರತೀಯ ಜನತಾ ಪಕ್ಷ (ಬಿಜೆಪಿ)ವನ್ನು ಟೀಕಿಸಿದರು.

valmiki jayanti
ವಾಲ್ಮೀಕಿ ಜಯಂತಿ ಕಾರ್ಯಕ್ರಮ (ETV Bharat)

''ಆರ್ಥಿಕ ಮತ್ತು ಸಾಮಾಜಿಕ ಅಸಮಾನತೆ ಹೋಗದ ಹೊರತು ಸಮಾನತೆ ಬರುವುದಿಲ್ಲ ಎನ್ನುವ ಎಚ್ಚರಿಕೆಯನ್ನು ಬಾಬಾ ಸಾಹೇಬ್ ಅಂಬೇಡ್ಕರ್ ನೀಡಿದ್ದಾರೆ. ನಮ್ಮ ಸರ್ಕಾರ ಎಲ್ಲಾ ಧರ್ಮ, ಎಲ್ಲಾ ಜಾತಿಯ ಬಡವರಿಗೆ ಆರ್ಥಿಕ ಶಕ್ತಿ ಕೊಡಲು ಗ್ಯಾರಂಟಿಗಳನ್ನು ಜಾರಿಗೆ ತಂದರೆ ಇದನ್ನು ವಿರೋಧಿಸಿದವರು ಬಿಜೆಪಿಯವರು. ಆದ್ದರಿಂದ ಗ್ಯಾರಂಟಿಗಳ ಫಲಾನುಭವಿಗಳು ಬಿಜೆಪಿಯವರಿಗೆ ಸರಿಯಾಗಿ ಪಾಠ ಹೇಳಿ. ಬಿಜೆಪಿಯವರ ಸುಳ್ಳುಗಳಿಗೆ ತಲೆ ಕೊಟ್ಟು ಮೋಸ ಹೋಗದೆ, ಸರಿಯಾದ ಉತ್ತರ ಕೊಡಿ. ಬಡ್ತಿಯಲ್ಲಿ ಮೀಸಲಾತಿಯನ್ನು ಸುಪ್ರೀಂಕೋರ್ಟ್ ಎತ್ತಿ ಹಿಡಿಯಿತು. ಅದನ್ನು ಮೊದಲಿಗೆ ಜಾರಿಗೆ ತಂದಿದ್ದು ನಮ್ಮ ಸರ್ಕಾರ. ಗುತ್ತಿಗೆಯಲ್ಲಿ ಮೀಸಲಾತಿ ಮೊದಲಿಗೆ ತಂದಿದ್ದು ನಮ್ಮ ಸರ್ಕಾರ. ಇದನ್ನು ನಾಡಿನ‌ ಜನತೆ ಅರ್ಥಮಾಡಿಕೊಳ್ಳಬೇಕು'' ಎಂದು ಹೇಳಿದರು.

valmiki jayanti
ವಾಲ್ಮೀಕಿ ಜಯಂತಿ ಕಾರ್ಯಕ್ರಮ (ETV Bharat)

''ನಾನು ಹೇಳಿದ್ದೀನಿ ಎನ್ನುವ ಕಾರಣಕ್ಕೆ ನೀವು ಇದನ್ನೆಲ್ಲ ನಂಬಬೇಡಿ. ಸತ್ಯ, ಸುಳ್ಳನ್ನು ಪರಾಮರ್ಶಿಸಿ, ವಿವೇಚಿಸಿ. ಸತ್ಯವನ್ನು ಧೈರ್ಯವಾಗಿ, ಬಹಿರಂಗವಾಗಿ ಮಾತಾಡುವ ಧೈರ್ಯವನ್ನು ದಲಿತ, ಹಿಂದುಳಿದ, ಅಲ್ಪಸಂಖ್ಯಾತ ಸಮುದಾಯಗಳು ಬೆಳೆಸಿಕೊಳ್ಳಬೇಕು. ಇದೇ ಮಹರ್ಷಿ ವಾಲ್ಮೀಕಿ ಅವರಿಗೆ ನಾವು-ನೀವು ಸಲ್ಲಿಸುವ ಗೌರವ'' ಎಂದರು.

ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ, ಪುಷ್ಪಾರ್ಚನೆ: ಇದಕ್ಕೂ ಮುನ್ನ ಮಹರ್ಷಿ ವಾಲ್ಮೀಕಿ ಜಯಂತಿಯ ಪ್ರಯುಕ್ತ ಮುಖ್ಯಮಂತ್ರಿ ಸಿದ್ದರಾಮಯ್ಯ ಶಾಸಕರ ಭವನದ ಆವರಣದಲ್ಲಿರುವ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ, ಪುಷ್ಪಾರ್ಚನೆ ಮಾಡಿದರು. ಬಳಿಕ ಕಳಸ ಹೊತ್ತ ಮಹಿಳೆಯರು ಹಾಗೂ ವಾದ್ಯದೊಂದಿಗೆ ವಿಧಾನಸೌಧದವರೆಗೂ ಸಿಎಂ ಸಿದ್ದರಾಮಯ್ಯ ಹಾಗೂ ಇತರ ಮುಖಂಡರು ಕಾಲ್ನಡಿಗೆಯಲ್ಲಿ ತೆರಳಿದರು.

valmiki jayanti
ವಿಧಾನಸೌಧದವರೆಗೂ ಸಿಎಂ ಹಾಗೂ ಇತರರ ಕಾಲ್ನಡಿಗೆ (ETV Bharat)

ಶಾಸಕರ ಭವನದ ಆವರಣದಲ್ಲಿರುವ ವಾಲ್ಮೀಕಿ ಸಮಾಜದ ರಾಜನಹಳ್ಳಿ ಮಠದ ಪ್ರಸನ್ನಾ ನಂದಪುರಿ ಸ್ವಾಮೀಜಿಗಳು ಸಚಿವರಾದ ಕೆ.ಎನ್.ರಾಜಣ್ಣ, ಸತೀಶ್ ಜಾರಕಿಹೊಳಿ, ಪರಿಶಿಷ್ಠ ಪಂಗಡಗಳ ಅಭಿವೃದ್ಧಿ ನಿಗಮದ ಅಧ್ಯಕ್ಷರಾದ ಶಾಸಕರಾದ ಬಸವನಗೌಡ ದದ್ದಲ್, ಪ್ರಕಾಶ್ ಹುಕ್ಕೇರಿ ಸೇರಿ ಸಮುದಾಯದ ಮುಖಂಡರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

ಇದನ್ನೂ ಓದಿ: ಸುರಿಯುವ ಮಳೆಯಲ್ಲಿ ಚೆನ್ನಮ್ಮನ ವಿಜಯಜ್ಯೋತಿಗೆ ಅದ್ಧೂರಿ ಸ್ವಾಗತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.