ETV Bharat / state

ಮೂರ್ನಾಲ್ಕು ದಿನಗಳಲ್ಲಿ ರಾಜ್ಯ ಬಿಜೆಪಿ ಅಭ್ಯರ್ಥಿ ಪಟ್ಟಿ ಬಿಡುಗಡೆ: ಬಿ.ವೈ.ವಿಜಯೇಂದ್ರ - State BJP Candidate List

ರಾಜ್ಯದ ಅಭ್ಯರ್ಥಿಗಳ ಬಗ್ಗೆ ಗಂಭೀರವಾಗಿ ಚಿಂತನೆ ನಡೆಸಿದ್ದು, ಇನ್ನು ಮೂರ್ನಾಲ್ಕು ದಿನಗಳಲ್ಲಿ ಪಟ್ಟಿ ಬಿಡುಗಡೆ ಆಗಲಿದೆ ಎಂದು ಬಿ ವೈ ವಿಜಯೇಂದ್ರ ಹೇಳಿದ್ದಾರೆ.

BJP State President B Y Vijayendra
ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ
author img

By ETV Bharat Karnataka Team

Published : Mar 9, 2024, 3:37 PM IST

ಬೆಂಗಳೂರು: "ರಾಜ್ಯದಲ್ಲಿ ಈಗ ಎಲ್ಲಾ ಕ್ಷೇತ್ರಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಮತ್ತು ಬಿಜೆಪಿ ಪರ ವಾತಾವರಣ ಇದೆ" ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ತಿಳಿಸಿದರು.

ನಗರದ ಮಲ್ಲೇಶ್ವರದ ಬಾವುರಾವ್ ದೇಶಪಾಂಡೆ ಭವನದಲ್ಲಿ ಮಾತನಾಡಿದ ಅವರು, "ಕೇಂದ್ರದ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಕಾರ್ಯಕ್ರಮಗಳನ್ನು ಜನರು ಮೆಚ್ಚಿಕೊಂಡಿದ್ದಾರೆ. ದೇಶದ ಸರ್ವಾಂಗೀಣ ಅಭಿವೃದ್ಧಿಯ ದೃಷ್ಟಿಯಿಂದ ಬಿಜೆಪಿಯೇ ಉತ್ತಮ ಮತ್ತು ನರೇಂದ್ರ ಮೋದಿಯವರ ಸರಕಾರ ಬೇಕೆಂಬ ತೀರ್ಮಾನಕ್ಕೆ ಜನರು ಬಂದಿದ್ದಾರೆ" ಎಂದು ವಿಶ್ಲೇಷಿಸಿದರು.

"28 ಕ್ಷೇತ್ರಗಳಲ್ಲೂ ಅಭ್ಯರ್ಥಿಗಳ ಆಯ್ಕೆ ಪ್ರಕ್ರಿಯೆ ನಡೆಯುತ್ತಿದೆ. ರಾಜ್ಯದ ಅಭ್ಯರ್ಥಿಗಳ ಬಗ್ಗೆ ಗಂಭೀರ ಚಿಂತನೆ ನಡೆಸಿದ್ದಾರೆ. ಇವತ್ತು, ನಾಳೆಯೊಳಗೆ ಎಲ್ಲವೂ ಅಂತಿಮವಾಗಲಿದೆ. 22, 23, 24 ಕ್ಷೇತ್ರ ಗೆಲುವಿನ ಪ್ರಶ್ನೆ ಅಲ್ಲ. ಹೊಸ ಇತಿಹಾಸವನ್ನು ಬಿಜೆಪಿ ರಾಜ್ಯದಲ್ಲಿ ಸೃಷ್ಟಿಸಲಿದೆ ಎನ್ನುವ ವಿಶ್ವಾಸ ರಾಜ್ಯಾಧ್ಯಕ್ಷನಾಗಿ ನನಗಿದೆ. ಹಿಂದೆ ಬಾರದಂಥ ಅತ್ಯುತ್ತಮ ಫಲಿತಾಂಶದ ನಿರೀಕ್ಷೆಯಲ್ಲಿ ನಾವಿದ್ದೇವೆ" ಎಂದು ತಿಳಿಸಿದರು.

"ಅಭ್ಯರ್ಥಿಗಳ ವಿಚಾರ ತಾರ್ಕಿಕ ಅಂತ್ಯಕ್ಕೆ ತಲುಪಿದೆ. ಮೂರ್ನಾಲ್ಕು ದಿನಗಳಲ್ಲಿ ಎಲ್ಲ ವಿವರ ಲಭಿಸಲಿದೆ. ಬಹುತೇಕ 2 ಹಂತಗಳಲ್ಲಿ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಆಗಲಿದೆ. ನಿಮ್ಮ ಎಲ್ಲ ಪ್ರಶ್ನೆಗಳಿಗೆ ಮೂರ್ನಾಲ್ಕು ದಿನಗಳಲ್ಲಿ ಉತ್ತರ ಲಭಿಸಲಿದೆ" ಎಂದು ಹೇಳಿದರು.

ಡಿ.ಕೆ.ಶಿವಕುಮಾರ್​ ಅವರ ನಡವಳಿಕೆಯನ್ನು ಖಂಡಿಸುವುದಾಗಿ ತಿಳಿಸಿದ ಅವರು, "ಬೆಂಗಳೂರಿನಲ್ಲಿ 15- 20 ದಿನಗಳಿಂದ ನೀರಿನ ತೀವ್ರ ಸಮಸ್ಯೆ ಇದೆ. ಇದರ ನಡುವೆ ಬೆಂಗಳೂರು ಗ್ರಾಮಾಂತರ ಕ್ಷೇತ್ರದ ವ್ಯಾಪ್ತಿಯಲ್ಲಿ 14ಕ್ಕೂ ಹೆಚ್ಚು ನೋಡಲ್ ಅಧಿಕಾರಿಗಳನ್ನು ನೇಮಿಸಿ ಆದೇಶ ಹೊರಡಿಸಿದ್ದಾರೆ. ಅದರ ಅರ್ಥ ಏನು? ಬೆಂಗಳೂರಿನಲ್ಲಿ ಮನುಷ್ಯರೇ ಇಲ್ಲವೇ? ಎಂದು ಕೇಳಿದರು.

ಇದನ್ನೂ ಓದಿ: ಬರಗಾಲ ನಿರ್ವಹಿಸುವಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವಿಫಲ: ಬಿ.ವೈ.ವಿಜಯೇಂದ್ರ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.