ಬೆಂಗಳೂರು: ಮುಂಬರುವ ಲೋಕಸಭೆ ಚುನಾವಣೆಗೆ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಇಂದು 40 ಮಂದಿ ಸ್ಟಾರ್ ಪ್ರಚಾರಕರ ಪಟ್ಟಿ ಪ್ರಕಟಿಸಿತು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್ ಈ ಪಟ್ಟಿಯಲ್ಲಿನ ಪ್ರಮುಖ ನಾಯಕರಾಗಿದ್ದಾರೆ.
ರಾಜ್ಯದಲ್ಲಿ ನಡೆಯಲಿರುವ ಮೊದಲ ಹಂತದ ಚುನಾವಣೆಗೆ ಸ್ಟಾರ್ ಪ್ರಚಾರಕರ ಪಟ್ಟಿಯನ್ನು ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿ.ಕೆ.ಶಿವಕುಮಾರ್ ಕರ್ನಾಟಕ ಮುಖ್ಯ ಚುನಾವಣಾಧಿಕಾರಿಗೆ ಕಳುಹಿಸಿದ್ದಾರೆ. ಈ ಪಟ್ಟಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಿಯಾಂಕಾ ಗಾಂಧಿ, ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್, ಎಐಸಿಸಿ ಸಂಘಟನಾ ಪ್ರಧಾನ ಕಾರ್ಯದರ್ಶಿ ಕೆ.ಸಿ.ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೇವಾಲ, ಮಾಜಿ ಸಿಎಂ ವೀರಪ್ಪ ಮೊಯ್ಲಿ, ಜೈರಾಂ ರಮೇಶ್ ಕಾಂಗ್ರೆಸ್ನ ಟಾಪ್ 10 ಸ್ಟಾರ್ ಪ್ರಚಾರಕರಾಗಿದ್ದಾರೆ.
ಇನ್ನು ಲಕ್ಷ್ಮಣ್ ಸವದಿ, ರಾಷ್ಟ್ರೀಯ ಯೂತ್ ಕಾಂಗ್ರೆಸ್ ಅಧ್ಯಕ್ಷ ಬಿ.ವಿ.ಶ್ರೀನಿವಾಸ್, ಸಚಿವ ಕೆ.ಜೆ.ಜಾರ್ಜ್, ವಿನಯ ಕುಮಾರ್ ಸೊರಕೆ, ಬಿ.ಕೆ.ಹರಿಪ್ರಸಾದ್, ಆರ್.ವಿ.ದೇಶಪಾಂಡೆ, ಸಚಿವರಾದ ಡಾ.ಜಿ.ಪರಮೇಶ್ವರ್, ಹೆಚ್.ಕೆ.ಪಾಟೀಲ್, ಎಂ.ಬಿ.ಪಾಟೀಲ್, ದಿನೇಶ್ ಗುಂಡೂರಾವ್, ಕೃಷ್ಣ ಬೈರೇಗೌಡ, ಮಾಜಿ ಸಚಿವರಾದ ಹೆಚ್.ಎಂ.ರೇವಣ್ಣ, ಪಿ.ಜಿ.ಆರ್.ಸಿಂಧ್ಯಾ, ಬಿ.ಸೋಮಶೇಖರ್, ಕೆಪಿಸಿಸಿ ಉಪಾಧ್ಯಕ್ಷ ಎಲ್.ಹನುಮಂತಯ್ಯ, ಜಿ.ಸಿ.ಚಂದ್ರಶೇಖರ್, ಸಯ್ಯದ್ ನಾಸೀರ್ ಹುಸ್ಸೇನ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಪಡೆದುಕೊಂಡಿದ್ದಾರೆ.
ಉಳಿದಂತೆ, ಸಚಿವರಾದ ಜಮೀರ್ ಅಹಮ್ಮದ್ ಖಾನ್, ಮಧು ಬಂಗಾರಪ್ಪ, ಈಶ್ವರ್ ಖಂಡ್ರೆ, ಸತೀಶ್ ಜಾರಕಿಹೊಳಿ, ಮಾಜಿ ಸಚಿವ ಪಿ.ಟಿ.ಪರಮೇಶ್ವರ್ ನಾಯ್ಕ್, ಮಾಜಿ ಸಂಸದ ವಿ.ಎಸ್.ಉಗ್ರಪ್ಪ, ಎಂಎಲ್ ಸಿ ಉಮಾಶ್ರೀ, ರಾಜ್ಯ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಪುಷ್ಪಾ ಅಮರನಾಥ್, ಮಾಜಿ ಸಚಿವ ತನ್ವೀರ್ ಸೇಠ್ ಸ್ಟಾರ್ ಪ್ರಚಾರಕರ ಪಟ್ಟಿಯಲ್ಲಿ ಸ್ಥಾನ ಸಿಕ್ಕಿದೆ.