ETV Bharat / state

ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ : ಶೇ 3.75ರಷ್ಟು DA ಹೆಚ್ಚಿಸಿ ಸರ್ಕಾರದ ಆದೇಶ - state govt employees

ರಾಜ್ಯ ಸರ್ಕಾರಿ ನೌಕರರಿಗೆ 3.75%ರಷ್ಟು DA ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ.

vidhanasouda
ವಿಧಾನಸೌಧ
author img

By ETV Bharat Karnataka Team

Published : Mar 12, 2024, 4:30 PM IST

ಬೆಂಗಳೂರು : ರಾಜ್ಯ ಕಾಂಗ್ರೆಸ್ ಸರ್ಕಾರ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ. ತುಟ್ಟಿ ಭತ್ಯೆ (DA) ಹೆಚ್ಚಿಸಿ ಸರ್ಕಾರ ಆದೇಶ ಹೊರಡಿಸಿದೆ. ಡಿಎಯನ್ನು ಪ್ರಸಕ್ತ ಶೇ. 38.75 ರಿಂದ ಶೇ. 42.50ಗೆ ಹೆಚ್ಚಿಸಿ ಆದೇಶಿಸಿದೆ. ಆ ಮೂಲಕ 3.75% ರಷ್ಟು ಹೆಚ್ಚಳ ಮಾಡಿದೆ. ಜನವರಿ 1 ರಿಂದ ಪೂರ್ವಾನ್ವಯವಾಗುವಂತೆ ಈ ಆದೇಶ ಜಾರಿಗೆ ಬರಲಿದೆ. ಆ ಮೂಲಕ ಕಾಂಗ್ರೆಸ್ ಸರ್ಕಾರ ಲೋಕಸಭಾ ಚುನಾವಣಾ ಹೊತ್ತಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ನೀಡಿದೆ.

ನಿವೃತ್ತ ರಾಜ್ಯ ಸರ್ಕಾರಿ ನೌಕರರನ್ನು ಒಳಗೊಂಡು UGC ICR ಮತ್ತು ಜಿಲ್ಲಾ ಪಂಚಾಯತ್ ಪೂರ್ಣವಧಿ ನೌಕರರು ಹಾಗೂ ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರಿಗೂ ಈ ವೇತನ ಹೆಚ್ಚಳ ಅನ್ವಯವಾಗಲಿದೆ. ಈ ಡಿಎ ಹೆಚ್ಚಳದಿಂದ ರಾಜ್ಯದ ಬೊಕ್ಕಸಕ್ಕೆ 1,702.71 ಕೋಟಿ ರೂ. ಹೆಚ್ಚುವರಿ ಹೊರೆ ಬೀಳಲಿದೆ.

ಕೇಂದ್ರ ಸರ್ಕಾರ ತನ್ನ ನೌಕರರಿಗೆ 1-01-2024ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ.4 ರಷ್ಟು ತುಟ್ಟಿಭತ್ಯೆಯನ್ನು ಈಗಾಗಲೇ ಮಂಜೂರು ಮಾಡಿದೆ. ಅದರ ಬೆನ್ನಲ್ಲೇ ಇದೀಗ ರಾಜ್ಯ ಸರ್ಕಾರ ತನ್ನ ನೌಕರರಿಗೂ ಡಿಎ ಹೆಚ್ಚಿಸಿ ಆದೇಶ ಹೊರಡಿಸಿದೆ.

ಇದಕ್ಕೂ ಮುನ್ನ ರಾಜ್ಯ ಸರ್ಕಾರಿ ನೌಕರರ ಸಂಘ ಕೇಂದ್ರ ಸರ್ಕಾರ ತನ್ನ ನೌಕರರಿಗೆ ತುಟ್ಟಿಭತ್ಯೆಯನ್ನು ಮಂಜೂರು ಮಾಡಿದ ದಿನಾಂಕದಿಂದಲೇ ಪೂರ್ವಾನ್ವಯವಾಗಿ ಕರ್ನಾಟಕ ರಾಜ್ಯ ಸರ್ಕಾರವೂ ಸಹ ರಾಜ್ಯ ಸರ್ಕಾರಿ ನೌಕರರಿಗೆ ತುಟ್ಟಿಭತ್ಯೆಯನ್ನು ಈ ಹಿಂದಿನಿಂದಲೂ ಮಂಜೂರು ಮಾಡಿರುತ್ತದೆ. ಅದರಂತೆ ಕರ್ನಾಟಕ ರಾಜ್ಯ ಸರ್ಕಾರಿ ನೌಕರರಿಗೆ 01-01-2024 ರಿಂದ ಪೂರ್ವಾನ್ವಯವಾಗಿ ಜಾರಿಗೆ ಬರುವಂತೆ ಶೇ.4%ರಷ್ಟು ತುಟ್ಟಿಭತ್ಯೆಯನ್ನು ಮಂಜೂರು ಮಾಡಿ ಆದೇಶ ಹೊರಡಿಸುವಂತೆ ಸಿಎಂಗೆ ಮನವಿ ಪತ್ರ ಸಲ್ಲಿಸಿದ್ದರು.

ಇದನ್ನೂ ಓದಿ : 7ನೇ ವೇತನ ಆಯೋಗದ ಅಧ್ಯಕ್ಷರ ಜೊತೆ ಸಿಎಂ ಸಭೆ: ಬಜೆಟ್​​ನಲ್ಲಿ ಸರ್ಕಾರಿ ನೌಕರರಿಗೆ ಸಿಗಲಿದೆಯಾ ಸಿಹಿ ಸುದ್ದಿ?

ETV Bharat Logo

Copyright © 2025 Ushodaya Enterprises Pvt. Ltd., All Rights Reserved.