ETV Bharat / state

ರಾಜ್ಯದ ಕೈಗಾರಿಕೆ ಕ್ಷೇತ್ರದ ಅಭಿವೃದ್ಧಿಗಾಗಿ ಸಚಿವ ಎಂ.ಬಿ.ಪಾಟೀಲ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾತುಕತೆ - ministers development talks

author img

By ETV Bharat Karnataka Team

Published : Sep 10, 2024, 9:25 PM IST

ರಾಜ್ಯದ ಕೈಗಾರಿಕೆ ಕ್ಷೇತ್ರದ ಅಭಿವೃದ್ಧಿಗಾಗಿ ರಾಜ್ಯ ಸಚಿವ ಎಂ.ಬಿ.ಪಾಟೀಲ್​ ಮತ್ತು ರಾಜ್ಯದವರೇ ಆದ ಕೇಂದ್ರ ಸಚಿವ ಹೆಚ್​​.ಡಿ. ಕುಮಾರಸ್ವಾಮಿ ಅವರು ಪರಸ್ಪರ ಮಾತುಕತೆ ನಡೆಸಿದ್ದಾರೆ.

ಎಂ.ಬಿ.ಪಾಟೀಲ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾತುಕತೆ
ಎಂ.ಬಿ.ಪಾಟೀಲ್, ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಮಾತುಕತೆ (ETV Bharat)

ಬೆಂಗಳೂರು/ ನವದೆಹಲಿ: ಕರ್ನಾಟಕದ ಕೈಗಾರಿಕಾಭಿವೃದ್ಧಿ ವಿಚಾರಕ್ಕೆ ಸಂಬಂಧಿಸಿದಂತೆ ಕೇಂದ್ರದ ಭಾರಿ ಕೈಗಾರಿಕೆ ಮತ್ತು ಉಕ್ಕು ಖಾತೆ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಮಂಗಳವಾರ ಭೇಟಿಯಾದ ಕರ್ನಾಟಕದ ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್ ವಿವಿಧ ಅಂಶಗಳ ಬಗ್ಗೆ ಚರ್ಚೆ ನಡೆಸಿದರು.

ನವದೆಹಲಿಯ ಉದ್ಯೋಗ ಭವನದಲ್ಲಿರುವ ಭಾರಿ ಕೈಗಾರಿಕೆ ಸಚಿವಾಲಯದ ಕಚೇರಿಯಲ್ಲಿ ಕುಮಾರಸ್ವಾಮಿ ಅವರನ್ನು ಭೇಟಿಯಾದ ಎಂ.ಬಿ.ಪಾಟೀಲ್ ಅವರು, ಕೈಗಾರಿಕೆ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಕೇಂದ್ರದಿಂದ ಅಗತ್ಯ ಸಹಕಾರ ಬೇಕು ಎಂದು ಮನವಿ ಮಾಡಿದರು. ಸಚಿವರ ಮನವಿಗೆ ಸಕಾರಾತ್ಮಕವಾಗಿ ಸ್ಪಂದಿಸಿದ ಕೇಂದ್ರ ಸಚಿವರು, ಸಂಪೂರ್ಣ ಸಹಕಾರದ ಭರವಸೆ ನೀಡಿದರು.

ಪ್ರಮುಖವಾಗಿ ಕರ್ನಾಟಕದಲ್ಲಿ ಕೈಗಾರಿಕಾ ಕ್ಷೇತ್ರದ ಸ್ಥಿತಿಗತಿಗಳ ಬಗ್ಗೆ ಕೇಂದ್ರ ಸಚಿವರು, ಪಾಟೀಲ್ ಅವರಿಂದ ಮಾಹಿತಿ ಪಡೆದುಕೊಂಡರು. ಈ ಸಂದರ್ಭದಲ್ಲಿ ಕೆಲ ಕೈಗಾರಿಕೆಗಳ ಬಗ್ಗೆ ಮನವಿ ಸಲ್ಲಿಸಿದ ಅವರು, ಕೇಂದ್ರ ಸರ್ಕಾರದಿಂದ ಸಿಗಬೇಕಿರುವ ಒಪ್ಪಿಗೆಯ ಬಗ್ಗೆ ಪ್ರಸ್ತಾವನೆಗಳನ್ನು ಸಲ್ಲಿಸಿದರು.

ಪರಸ್ಪರ ಸಹಕಾರ ಮನೋಭಾವ: ಈ ವೇಳೆ ಕುಮಾರಸ್ವಾಮಿ ಅವರು, ಕೈಗಾರಿಕಾ ಕ್ಷೇತ್ರದ ಅಭಿವೃದ್ಧಿಗೆ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡುವ ಅಗತ್ಯವಿದೆ. ಈ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರ ಸ್ಪಷ್ಟ ನಿರ್ದೇಶನವಿದೆ. ಆ ನಿಟ್ಟಿನಲ್ಲಿ ನಾವು ಕೆಲಸ ಮಾಡುತ್ತಿದ್ದೇವೆ ಎಂದು ಹೇಳಿದರು.

ಕರ್ನಾಟಕದ ಕೈಗಾರಿಕಾ ಯೋಜನೆಗಳ ಬಗ್ಗೆ ಮಾಹಿತಿ ಪಡೆದ ಸಚಿವರು, ಎಂ.ಬಿ.ಪಾಟೀಲ್ ಅವರು ಸಲ್ಲಿಸಿದ ವಿವಿಧ ಪ್ರಸ್ತಾವನೆಗಳ ಬಗ್ಗೆ ವಿಶೇಷ ಮುತುವರ್ಜಿ ವಹಿಸಲಾಗುವುದು. ರಾಜ್ಯದಲ್ಲಿ ಹೆಚ್ಚು ಕೈಗಾರಿಕೆಗಳು ಸ್ಥಾಪನೆಯಾಗಬೇಕು. ವಿದೇಶಿ ನೇರ ಬಂಡವಾಳ ಹೂಡಿಕೆ ಹೆಚ್ಚಿನ ಪ್ರಮಾಣದಲ್ಲಿ ಆಗಬೇಕು. ಈ ನಿಟ್ಟಿನಲ್ಲಿ ರಾಜ್ಯಕ್ಕೆ ಪೂರ್ಣ ಸಹಕಾರ ನೀಡುವುದಾಗಿ ಕೇಂದ್ರ ಸಚಿವರು ಭರವಸೆ ನೀಡಿದರು.

ಅಭಿವೃದ್ಧಿಯಲ್ಲಿ ರಾಜಕೀಯ ಬೇಡ: ಅಭಿವೃದ್ಧಿ ವಿಚಾರದಲ್ಲಿ ಯಾವುದೇ ಸಂಘರ್ಷ ಬೇಡ. ರಾಜಕೀಯ ಮೀರಿ ಅಭಿವೃದ್ಧಿ ಪರವಾಗಿ ಕೆಲಸ ಮಾಡಲು ನಾನು ಮುಕ್ತ ಮನಸ್ಸು ಹೊಂದಿದ್ದೇನೆ. ರಾಜ್ಯದ ಒಳಿತಿಗಾಗಿ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಪರಸ್ಪರ ಸಹಕಾರ ಮನೋಭಾವದಿಂದ ಕೆಲಸ ಮಾಡಬೇಕು ಎಂದು ಕೇಂದ್ರ ಕೈಗಾರಿಕೆ ಸಚಿವರು ಹೇಳಿದರು.

ಇದೇ ವೇಳೆ ಹೆಚ್​​ಎಂಟಿ ಭೂಮಿ ವಿವಾದ ಹಾಗೂ ದೇವದಾರಿ ಗಣಿಗಾರಿಕೆ ಯೋಜನೆಗಳ ಬಗ್ಗೆಯೂ ಕೇಂದ್ರ ಸಚಿವರು ಪಾಟೀಲ್ ಅವರ ಜತೆ ಚರ್ಚೆ ನಡೆಸಿದರು. ಕರ್ನಾಟಕದ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಡಾ.ಎಸ್.ಸೆಲ್ವಕುಮಾರ್ ಸೇರಿದಂತೆ ರಾಜ್ಯದ ಹಲವು ಅಧಿಕಾರಿಗಳು ನಿಯೋಗದಲ್ಲಿ ಇದ್ದರು.

ಇದನ್ನೂ ಓದಿ: ಅಕ್ರಮ ಹಣ ವರ್ಗಾವಣೆ ಆರೋಪ: ಎಸ್​​ಐಟಿ ತನಿಖೆಯಲ್ಲಿ ಇಲ್ಲದ ಮಾಜಿ ಸಚಿವ ನಾಗೇಂದ್ರ ಇ.ಡಿ. ಚಾರ್ಜ್​ಶೀಟ್​ನಲ್ಲಿ ಎ1 - Valmiki Corporation Scam

ETV Bharat Logo

Copyright © 2024 Ushodaya Enterprises Pvt. Ltd., All Rights Reserved.