ETV Bharat / state

ಕರ್ನಾಟಕಕ್ಕೆ ಅನ್ಯಾಯ : ಕೇಂದ್ರ ಬಜೆಟ್ ವಿರುದ್ಧ ರಾಜ್ಯ ಕಾಂಗ್ರೆಸ್​ ನಾಯಕರ ವಾಗ್ದಾಳಿ - UNION BUDGET 2025

ಕೇಂದ್ರ ಬಜೆಟ್​ ಕುರಿತು ರಾಜ್ಯ ಸಚಿವರು ಮಾತನಾಡಿದ್ದು, ಈ ಬಜೆಟ್​ನಿಂದ ಕರ್ನಾಟಕಕ್ಕೆ ಏನೂ ಕೊಡುಗೆ ನೀಡಿಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.

state-minister-outrage-against-union-budget
ಕೇಂದ್ರ ಬಜೆಟ್​ ಕುರಿತು ಮಾತನಾಡಿದ ರಾಜ್ಯ ಸಚಿವರು, ಸಂಸದೆ (ETV Bharat)
author img

By ETV Bharat Karnataka Team

Published : Feb 1, 2025, 8:17 PM IST

ಬೆಂಗಳೂರು : ಕೇಂದ್ರ ಬಜೆಟ್ ವಿರುದ್ಧ ರಾಜ್ಯ ಸಚಿವರು, ನಾಯಕರು ವಾಗ್ದಾಳಿ ನಡೆಸಿದ್ದಾರೆ. ಕರ್ನಾಟಕಕ್ಕೆ ಏನೂ ಕೊಡುಗೆ ನೀಡಿಲ್ಲ ಎಂದು ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾನೂನು ಸಚಿವ ಹೆಚ್. ಕೆ ಪಾಟೀಲ್, ಇದು ಬಜೆಟ್ಟಾ?. ಬಿಹಾರ ಚುನಾವಣಾ ಮ್ಯಾನಿಫೆಸ್ಟಾ?. ಮನಸೋಇಚ್ಛೆ ಬಜೆಟ್ ಮಂಡನೆ ಮಾಡಿದ್ದಾರೆ. ಮೈಕ್ರೋ ಫೈನಾನ್ಸ್ ಸಮಸ್ಯೆಗೆ ಪರಿಹಾರ ಕೊಡದ ಬಜೆಟ್ ಇದು. ಈ ಬಜೆಟ್ ಬಗ್ಗೆ ಏನೇನೋ ನಿರೀಕ್ಷೆ ಇತ್ತು. ಏನೂ ಆಗಿಲ್ಲ. ಇದು ಸಂಪೂರ್ಣ ನಿರಾಶಾದಾಯಕ ಬಜೆಟ್. ಕೃಷಿಕರಿಗೆ ಇರುವ ತೊಂದರೆ ಬಗ್ಗೆ ಗಮನ ಹರಿಸಿಲ್ಲ. ಮೈಕ್ರೋ ಫೈನಾನ್ಸ್​ನಿಂದ ಜನರು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ಅದಕ್ಕೆ ಪರಿಹಾರ ಕೊಡಬೇಕು ಎಂಬ ಆಲೋಚನೆಯೂ ಬರಲಿಲ್ಲ. ಆಂಧ್ರ ಪ್ರದೇಶ, ತೆಲಂಗಾಣ, ಕರ್ನಾಟಕದಲ್ಲಿಯೂ ಸಮಸ್ಯೆ ಆಗಿದೆ. ಆರ್​ಬಿಐ ನೋಂದಾಯಿತ ಮೈಕ್ರೋ ಫೈನಾನ್ಸ್​ಗಳಿಂದ ಆತ್ಮಹತ್ಯೆ ಮಾಡಿಕೊಳ್ಳುವ ಪರಿಸ್ಥಿತಿ ಬರುತ್ತಿದೆ. ಇದರ ಬಗ್ಗೆ ಯಾವುದೇ ಚಕಾರ ಎತ್ತದ ಬಜೆಟ್ ಎಂದು ವಾಗ್ದಾಳಿ ನಡೆಸಿದರು.

ಕರ್ನಾಟಕಕ್ಕೆ ಕರಾಳ ಬಜೆಟ್ : ಈ ಬಗ್ಗೆ ಪ್ರತಿಕ್ರಿಯಿಸಿರುವ ಕಂದಾಯ ಸಚಿವ ಕೃಷ್ಣಬೈರೇಗೌಡ, ಬಜೆಟ್ ಕರ್ನಾಟಕಕ್ಕೆ ಕರಾಳ ದಿನವಾಗಿದೆ. ಕರ್ನಾಟಕದ ಯಾವ ಬೇಡಿಕೆಯೂ ಈಡೇರಿಲ್ಲ. ಕರ್ನಾಟಕಕ್ಕೆ ನ್ಯಾಯ ಕೊಡುವ ಕೆಲಸ ಆಗಿಲ್ಲ. ಕರ್ನಾಟಕ ತೆರಿಗೆ ಬೇರೆ ರಾಜ್ಯದ ಪಾಲಾಗ್ತಿದೆ. ಬಿಹಾರ ರಾಜ್ಯಕ್ಕೆ ಐದಾರು ಯೋಜನೆ ಕೊಟ್ಟಿದ್ದಾರೆ. ಹಾಗಾದ್ರೆ ಕರ್ನಾಟಕದವರು ಕಡ್ಲೆ ಬೀಜ ತಿನ್ನೋಕೆ ಇರೋದಾ?. ಬಜೆಟ್​ನಲ್ಲಿ ಕರ್ನಾಟಕಕ್ಕೆ ಬರೀ ಚೊಂಬು ಸಿಕ್ಕಿದೆ. ಬಿಜೆಪಿ ಸರ್ಕಾರ ಕರ್ನಾಟಕಕ್ಕೆ ಮಾಡುತ್ತಿರುವ ದ್ರೋಹ ಇದು. 11495 ಕೋಟಿ ಫೈನಾನ್ಸ್ ಕಮಿಷನ್ ಕೊಡಲು ಹೇಳಿತ್ತು. ಬರಲೇಬೇಕಾದ ಅನುದಾನದ ಬಗ್ಗೆ ಚಕಾರ ಎತ್ತಿಲ್ಲ. ಭದ್ರಾ ಮೇಲ್ದಂಡೆ ಯೋಜನೆಗೆ ಇಂದು ಪೈಸಾ ಕೂಡ ಕೊಟ್ಟಿಲ್ಲ. ಕಲ್ಯಾಣ ಕರ್ನಾಟಕ, ಮಲೆನಾಡಿಗೂ ಏನೂ ನೀಡಿಲ್ಲ. ಬೆಂಗಳೂರು ದೇಶಕ್ಕೆ ಉದ್ಯೋಗ ಕೊಡ್ತಿದೆ. ರಫ್ತಿನ ಮೂಲಕ ದೇಶಕ್ಕೆ ಹೆಚ್ಚಿನ ಆದಾಯ ಕೊಡ್ತಿದೆ. ಆದ್ರೂ ಬಜೆಟ್​ನಲ್ಲಿ ಏನೂ ಕೊಟ್ಟಿಲ್ಲ. ಯುಪಿ, ಬಿಹಾರ ಮಾತ್ರ ಕೇಂದ್ರಕ್ಕೆ ಕಾಣುತ್ತಿದೆ. ಕರ್ನಾಟಕ ಕಾಣ್ತಿಲ್ಲ. ತೆರಿಗೆ ಕಟ್ಟಿದ ಕನ್ನಡಿಗರು ಕಾಣ್ತಿಲ್ಲ. ನಮ್ಮ ರಾಜ್ಯ ಕೇವಲ ದುಡಿಯುವ ಆಳಿನ ರೀತಿ ಕಾಣುತ್ತಿದೆ. ಜನರ ಹಾಗೆ ಸರ್ಕಾರದ ಪರವಾಗಿ ಇದನ್ನ ನಾನು ಖಂಡಿಸುತ್ತೇನೆ ಎಂದರು‌.

ಕರ್ನಾಟಕಕ್ಕೆ ಅನ್ಯಾಯವಾಗಿದೆ : ಕೇಂದ್ರ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿರುವ 2025-26ನೇ ಸಾಲಿನ ಬಜೆಟ್ ನಿರಾಶದಾಯಕವಾದ ಬಜೆಟ್ ಆಗಿದ್ದು, ಬಜೆಟ್​ನಲ್ಲಿ ಕರ್ನಾಟಕಕ್ಕೆ ಅನ್ಯಾಯ ಮಾಡಲಾಗಿದೆ. ಗ್ರಾಮೀಣ ಭಾಗದಲ್ಲಿ ಯಾರ ಬಳಿಯೂ ಹಣವಿಲ್ಲ. ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಯಾವುದೇ ಯೋಜನೆಗಳನ್ನು ಘೋಷಣೆ ಮಾಡಿಲ್ಲ. ಈ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದ ರೈತರು ಕಣ್ಣೀರು ಹಾಕುವಂತಾಗಿದೆ. ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಬಿಹಾರ ರಾಜ್ಯಕ್ಕೆ ವಿಶೇಷವಾದ ಯೋಜನೆಗಳನ್ನು ಘೋಷಿಸುವ ಮೂಲಕ ಬಜೆಟ್​ನಲ್ಲಿ ಕೇಂದ್ರ ವಿತ್ತ ಸಚಿವರು ಬಿಹಾರ ರಾಜ್ಯದ ಜಪ ಮಾಡಿದ್ದಾರೆ. ಇಂತಹವರಿಂದ ನಾವು ಏನನ್ನು ನಿರೀಕ್ಷೆ ಮಾಡಲು ಸಾಧ್ಯ? ಒಟ್ಟಾರೆ ಬಜೆಟ್​ನಲ್ಲಿ ರಾಜ್ಯಕ್ಕೆ ಅನ್ಯಾಯ ಮಾಡಲಾಗಿದೆ ಎಂದು ಸಚಿವ ಶಿವರಾಜ್ ತಂಗಡಗಿ ಟೀಕಿಸಿದ್ದಾರೆ.

ಕೇಂದ್ರ ಬಜೆಟ್ ಕೃಷಿಕರ ಪಾಲಿಗೆ ನಿರಾಶಾದಾಯಕ : ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಅವರು ಮಂಡಿಸಿದ 2025 -26ನೇ ಸಾಲಿನ ಕೇಂದ್ರ ಬಜೆಟ್ ಕೃಷಿಕರ ಪಾಲಿಗೆ ನಿರಾಶಾದಾಯಕವಾಗಿದೆ ಎಂದು ಕೃಷಿ ಸಚಿವ ಎನ್. ಚಲುವರಾಯಸ್ವಾಮಿ ಅಭಿಪ್ರಾಯಪಟ್ಟಿದ್ದಾರೆ.

ಈ ಬಾರಿಯೂ ಕೇಂದ್ರ ಬಜೆಟ್​ನಲ್ಲಿ ರೈತರು, ಕೃಷಿ ಕ್ಷೇತ್ರವನ್ನು ನಿರ್ಲಕ್ಷಿಸಲಾಗಿದೆ, ಕೃಷಿಗೆ ಕಡಿಮೆ ಆದ್ಯತೆ ನೀಡಲಾಗಿದೆ ಎಂದು ಹೇಳಿದ್ದಾರೆ.

ಕೃಷಿ ವೈಜ್ಞಾನಿಕ ಸಂಶೋಧನೆಗಳಿಗೆ ಸಾಕಷ್ಟು ಹಣಕಾಸು ಒದಗಿಸಲಾಗಿಲ್ಲ, ಕೃಷಿ ಉತ್ಪನ್ನಗಳಿಗೆ ಮಾರುಕಟ್ಟೆ ಮಾರ್ಗಗಳನ್ನು ಅಭಿವೃದ್ಧಿಪಡಿಸಲು ಹಣಕಾಸು ನೀಡಲಾಗಿಲ್ಲ. ಪ್ರಮುಖ ಆಹಾರ, ತರಕಾರಿ ಮತ್ತು ಹಣ್ಣಿನ ಬೆಳೆಗಳಿಗೆ ಮಂಡಳಿಗಳನ್ನು ರಚಿಸಬೇಕೆಂಬ ಬೇಡಿಕೆ ನಿರೀಕ್ಷೆಯಾಗಿಯೇ ಉಳಿದಿದೆ ಎಂದಿದ್ದಾರೆ.

ರಸಗೊಬ್ಬರಗಳ ಬೆಲೆ ಇಳಿಕೆ ಮಾಡಲಾಗುವ ನಿರೀಕ್ಷೆ ಹುಸಿಯಾಗಿದೆ. ಆರ್.ಕೆ.ವಿ.ವೈ ಯೋಜನೆಯ ಅನುದಾನ ಕಡಿತಗೊಳಿಸಲಾಗಿದ್ದು, ರಾಜ್ಯಗಳಿಗೆ ಅನ್ಯಾಯವಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

ಕೃಷಿ ವಲಯಕ್ಕೆ ನಬಾರ್ಡ್​ನಲ್ಲಿ ನೀಡಲಾಗುವ ಅನುದಾನ ಕಡಿಮೆಯಾಗಿದ್ದು, ರಾಜ್ಯವನ್ನು ಸಂಪೂರ್ಣ ಕಡೆಗಣಿಸಲಾಗಿದೆ. ಕೃಷಿ ಮೂಲಸೌಕರ್ಯ ವಲಯಕ್ಕೆ ಆದ್ಯತೆ ನೀಡಿಲ್ಲ ಎಂದು ಅವರು ಹೇಳಿದ್ದಾರೆ.

ಸಿರಿಧಾನ್ಯಕ್ಕೆ ಪ್ರೋತ್ಸಾಹ ನೀಡಬೇಕೆಂಬ ರಾಜ್ಯ ಸರ್ಕಾರದ ಮನವಿಯ ಬಗ್ಗೆ ಹೆಚ್ಚಿನ ಗಮನ ಹರಿಸಿಲ್ಲ. ಆಹಾರ ಸಂಸ್ಕರಣೆ ರಫ್ತು ಉತ್ತೇಜನಕ್ಕೆ ಪ್ರೋತ್ಸಾಹಕರ ಹೊಸ ಯೋಜನೆಗಳಿಲ್ಲ ಎಂದು ಅವಲೋಕಿಸಿದ್ದಾರೆ.

ಕೇಂದ್ರದಿಂದ ಮತ್ತೆ ಕರ್ನಾಟಕಕ್ಕೆ ಅನ್ಯಾಯ : ಕೇಂದ್ರ ಸರ್ಕಾರದ ಹಣಕಾಸು ಮಂತ್ರಿ ನಿರ್ಮಲಾ ಸೀತಾರಾಮನ್ ಮಂಡಿಸಿರುವ ಬಜೆಟ್ ಸಂಪೂರ್ಣ ನಿರಾಶಾದಾಯಕ ಬಜೆಟ್ ಆಗಿದ್ದು, ಮತ್ತೆ ರಾಜ್ಯಕ್ಕೆ ಅನ್ಯಾಯ ಮಾಡಲಾಗಿದೆ ಎಂದು ದಾವಣಗೆರೆ ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಬೇಸರ ವ್ಯಕ್ತಪಡಿಸಿದ್ದಾರೆ.

ಸಂಸದೆ ಡಾ. ಪ್ರಭಾ ಮಲ್ಲಿಕಾರ್ಜುನ್ ಮಾತನಾಡಿದರು (ETV Bharat)

ದೆಹಲಿಯಲ್ಲಿ ಕೇಂದ್ರ ಬಜೆಟ್ ಬಗ್ಗೆ ಮಾತನಾಡಿದ ಅವರು, ಅತೀ ಹೆಚ್ಚು ತೆರಿಗೆ ಪಾವತಿಸುವ ರಾಜ್ಯಕ್ಕೆ ಮತ್ತೆ ಅನ್ಯಾಯ‌ ಮಾಡಲಾಗಿದೆ ಹಾಗೂ ಮಲತಾಯಿ ಧೋರಣೆ ಅನುಸರಿಸಲಾಗಿದೆ. ಆದರೆ, ಬಿಹಾರ ರಾಜ್ಯಕ್ಕೆ ಮಾತ್ರ ಕೊಡುಗೆಗಳ‌ ಮಹಾಪೂರವನ್ನೇ ಹರಿಸಲಾಗಿದೆ ಎಂದು ಕೇಂದ್ರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿ. ಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಕೇಂದ್ರ ಸರ್ಕಾರಕ್ಕೆ 28 ಅಂಶಗಳಿರುವ ಬೇಡಿಕೆಗಳನ್ನು ಸಲ್ಲಿಸಲಾಗಿತ್ತು. ಈ ಬಾರಿ ಸಾಕಷ್ಟು ನಿರೀಕ್ಷೆ ಇತ್ತು. ಆದರೆ ಕೇಂದ್ರ ಸರ್ಕಾರದ 4 ಎಂಜಿನ್​ಗಳು ಹಳಿಬಿಟ್ಟು ಹೋಗಿವೆ‌‌ ಎಂದರು. ನಬಾರ್ಡ್​ನಲ್ಲಿ ಆಗಿರುವ ಅನುದಾನದ ಕೊರತೆ ಅಥವಾ ಆರೋಗ್ಯ ಕ್ಷೇತ್ರಕ್ಕೆ ಬರಬೇಕಾದ ಅನುದಾನದ ಬಗ್ಗೆಯೂ ರಾಜ್ಯ ಸರ್ಕಾರದಿಂದ ಮನವಿ ಮಾಡಲಾಗಿತ್ತು. ನಮ್ಮ ಯಾವ ಬೇಡಿಕೆಯೂ ಈಡೇರಿಕೆಯಾಗಿಲ್ಲ ಎಂದು ಹೇಳಿದರು.

ಭದ್ರಾ ಮೇಲ್ದಂಡೆ ಯೋಜನೆ, ಕೃಷ್ಣಾ ಮೇಲ್ದಂಡೆ ಯೋಜನೆ, ಬೆಂಗಳೂರು ಅಭಿವೃದ್ಧಿ, ನೀರಾವರಿ ಯೋಜನೆಯ ಯಾವ ಬೇಡಿಕೆಯೂ ಈಡೇರಿಕೆಯಾಗಿಲ್ಲ. ರಾಷ್ಟ್ರೀಯ ವಿಪತ್ತು ನಿಧಿ ಹಾಗೂ ಡಿಆರ್​ಎಫ್ ನಿಧಿಗಳಿಂದ ಕರ್ನಾಟಕಕ್ಕೆ ನಿರಂತರವಾಗಿ ಅನ್ಯಾಯವಾಗುತ್ತಿದೆ ಎಂದು ಹೇಳಿದರು.

ಆರೋಗ್ಯ ಕ್ಷೇತ್ರಕ್ಕೆ ಸಂಬಂಧಿಸಿದಂತೆ ಬಡ ಹಾಗೂ ಮಧ್ಯಮ‌ ವರ್ಗದವರಿಗೆ ಡಯಾಲಿಸಿಸ್ ಸೆಂಟರ್ ನೀಡಿಲ್ಲ. ದಾವಣಗೆರೆಯಲ್ಲಿ ನಮ್ಮ ಎಸ್​ ಎಸ್ ಕೇರ್ ಟ್ರಸ್ಟ್‌ ಮೂಲಕ‌ ಪ್ರತಿ ತಿಂಗಳು‌ ಸುಮಾರು 500-600 ಡಯಾಲಿಸಿಸ್​ಗಳನ್ನು ನಾವು ಉಚಿತವಾಗಿ ಮಾಡುತ್ತಿದ್ದೇವೆ. ಪಿಎಂ ಪರಿಹಾರ ನಿಧಿಯ ಮೊತ್ತ ಹೆಚ್ಚಳ‌ ಮಾಡಿಲ್ಲ. ವೈದ್ಯಕೀಯ ‌ಸೀಟ್ ಹಾಗೂ ಕಾಲೇಜು ಮೊತ್ತ ಹೆಚ್ಚಳ ಮಾಡಿದ್ದಾರೆ. ಆದರೆ ಅದಕ್ಕೆ ತಕ್ಕಂತೆ ವೈದ್ಯರು ಹಾಗೂ ಸೌಲಭ್ಯಗಳ‌ ಕೊರತೆ ನೀಗಿಸಿಲ್ಲ ಎಂದರು.

ಅಂಗನವಾಡಿ, ಆಶಾ ಕಾರ್ಯಕರ್ತರು ಹಾಗೂ ಸಹಾಯಕಿಯರ ಅನುದಾನ ಹೆಚ್ಚಳ‌ ಮಾಡಿಲ್ಲ‌. ಇದರಿಂದ ರಾಜ್ಯದ ಮೇಲೆಯೇ ಎಲ್ಲ ಹೊರೆ ಏರಿಕೆಯಾಗಲಿದೆ. ಶೇ. 50 ರಷ್ಟು ಅನುದಾನ ಕೇಂದ್ರ ಸರ್ಕಾರ ನೀಡಿದರೆ ಎಲ್ಲರಿಗೂ ಅನುಕೂಲವಾಗಲಿದೆ. ಉಳಿದಂತೆ ಶಿವಮೊಗ್ಗ, ಮರಿಯಮ್ಮನಹಳ್ಳಿ ರಾಷ್ಟ್ರೀಯ ಹೆದ್ದಾರಿ ಮೇಲ್ದರ್ಜೆಗೇರಿಸಿಲ್ಲ. ಹರಿಹರ, ಹೊನ್ನಾಳಿ, ಶಿವಮೊಗ್ಗ ರೈಲ್ವೆ ಯೋಜನೆ ಬಗ್ಗೆ ಪ್ರಸ್ತಾಪವಿಲ್ಲ ಎಂದು ಹೇಳಿದರು.

ಇದನ್ನೂ ಓದಿ : ಕೇಂದ್ರ ಬಜೆಟ್​ಗೆ ಮಿಶ್ರ ಪ್ರತಿಕ್ರಿಯೆ : ಉತ್ತಮ ಬಜೆಟ್, ಆದ್ರೆ ಕರ್ನಾಟಕಕ್ಕೆ ಕೊಡುಗೆ ಶೂನ್ಯ - MIXED RESPONSE TO UNION BUDGET

ETV Bharat Logo

Copyright © 2025 Ushodaya Enterprises Pvt. Ltd., All Rights Reserved.