ETV Bharat / state

ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ರಾಜ್ಯ ಪೊಲೀಸ್ ಸಿಬ್ಬಂದಿಗೆ ತರಬೇತಿ ನೀಡಲಾಗಿದೆ: ಡಿಜಿ & ಐಜಿಪಿ - New Criminal Laws

author img

By ETV Bharat Karnataka Team

Published : Jul 1, 2024, 2:22 PM IST

ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ರಾಜ್ಯ ಪೊಲೀಸ್ ಇಲಾಖೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗಿದೆ ಎಂದು ಡಿಜಿ ಮತ್ತು ಐಜಿಪಿ ತಿಳಿಸಿದ್ದಾರೆ.

DG AND IGP ALOK MOHAN  STATE POLICE PERSONNEL  TRAINED ON THE NEW CRIMINAL LAWS  Bengaluru
ಡಿಜಿ & ಐಜಿಪಿ ಅಲೋಕ್ ಮೋಹನ್ (ETV Bharat)

ಬೆಂಗಳೂರು: ದೇಶಾದ್ಯಂತ ಜಾರಿಯಾಗಿರುವ ಮೂರು ಹೊಸ ಕ್ರಿಮಿನಲ್ ಕಾನೂನುಗಳ ಕುರಿತು ಕರ್ನಾಟಕ ಪೊಲೀಸ್ ಇಲಾಖೆಯ ಅಧಿಕಾರಿ ಮತ್ತು ಸಿಬ್ಬಂದಿಗೆ ತರಬೇತಿ ನೀಡಲಾಗಿದೆ ಎಂದು ರಾಜ್ಯ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್ ತಿಳಿಸಿದ್ದಾರೆ.

ಇಂದಿನಿಂದ ಅನುಷ್ಠಾನಕ್ಕೆ ಬಂದಿರುವ ನೂತನ ಕಾಯ್ದೆಗಳಾದ ಭಾರತೀಯ ನ್ಯಾಯ ಸಂಹಿತೆ-2023, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ-2023, ಭಾರತೀಯ ಸಾಕ್ಷ್ಯ ಅಧಿನಿಯಮ-2023ರ ಕುರಿತು ಇಲಾಖೆಯ ಎಲ್ಲಾ 7 ವಲಯಗಳು, 6 ಕಮೀಷನರೇಟ್ ಘಟಕಗಳು ಹಾಗೂ 1,063 ಪೊಲೀಸ್ ಠಾಣೆಗಳು ಸೇರಿದಂತೆ ರಾಜ್ಯದ ಎಲ್ಲಾ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಅಗತ್ಯ ತರಬೇತಿ ನೀಡಲಾಗಿದೆ. ಇನ್ನೂ ಹೆಚ್ಚಿನ ತರಬೇತಿ ಪ್ರಕ್ರಿಯೆ ಮುಂದುವರೆಯಲಿದೆ ಎಂದು 'ಎಕ್ಸ್' ಮೂಲಕ ಅವರು ಮಾಹಿತಿ ನೀಡಿದ್ದಾರೆ.

ಬ್ರಿಟಿಷರ ಕಾಲದ ಭಾರತೀಯ ದಂಡ ಸಂಹಿತೆ, ಕ್ರಿಮಿನಲ್ ಪ್ರಕ್ರಿಯಾ ಸಂಹಿತೆ ಮತ್ತು ಭಾರತೀಯ ಸಾಕ್ಷ್ಯ ಕಾಯಿದೆಗಳನ್ನು ಬದಲಿಸಿ ತಿದ್ದುಪಡಿ ತರಲಾಗಿದ್ದು, ಕಳೆದ ಸಂಸತ್ತಿನ ಅಧಿವೇಶನದಲ್ಲಿ ಸರ್ಕಾರ ಇದನ್ನು ಅಂಗೀಕರಿಸಿತ್ತು. ಅದರಂತೆ ಇಂದಿನಿಂದ ಎಲ್ಲಾ ಹೊಸ ಎಫ್‌ಐಆರ್‌ಗಳನ್ನು ಭಾರತೀಯ ನ್ಯಾಯ ಸಂಹಿತೆಯಡಿಯಲ್ಲಿ ದಾಖಲಿಸಲಾಗುತ್ತಿದೆ. ಆದರೂ ಸಹ ಈ ಹಿಂದೆ ದಾಖಲಾಗಿರುವ ಪ್ರಕರಣಗಳು ಅಂತಿಮ ವಿಲೇವಾರಿಯಾಗುವವರೆಗೆ ಹಳೆಯ ಕಾನೂನುಗಳ ಅಡಿಯಲ್ಲಿ ವಿಚಾರಣೆ ಮುಂದುವರಿಸಲಾಗುತ್ತದೆ.

ಇದನ್ನೂ ಓದಿ: ಇವತ್ತಿನಿಂದ ಎಲ್ಲಾ ದೂರುಗಳು ಹೊಸ ಅಪರಾಧ ಕಾನೂನಿನಡಿ ದಾಖಲು: ಸಚಿವ ಜಿ. ಪರಮೇಶ್ವರ್ - New Criminal Law

ETV Bharat Logo

Copyright © 2024 Ushodaya Enterprises Pvt. Ltd., All Rights Reserved.