ETV Bharat / state

ಬಿಎಸ್‌ವೈ ವಿರುದ್ಧ ದೂರು ನೀಡಿದ್ದ ಮಹಿಳೆಯ ಸಾವಿನ ಕುರಿತು ತನಿಖೆಗೆ ರಾಜ್ಯ ಮಹಿಳಾ ಆಯೋಗ ಆಗ್ರಹ - LADY DEATH CASE - LADY DEATH CASE

ಇತ್ತೀಚೆಗೆ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಸಂಬಂಧ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರನ್ನು ಬಂಧಿಸದಂತೆ ಈ ಹಿಂದೆ ನೀಡಿದ್ದ ಆದೇಶವನ್ನು ಹೈಕೋರ್ಟ್ ವಿಸ್ತರಿಸಿ ಆದೇಶ ಹೊರಡಿಸಿತ್ತು. ಇದೀಗ ಸಂತ್ರಸ್ತ ಬಾಲಕಿಯ ತಾಯಿಯ ಸಾವಿನ ಪ್ರಕರಣದಲ್ಲಿ ಅನುಮಾನವಿದೆ ಎಂದು ಮಹಿಳಾ ಆಯೋಗ ಸೂಕ್ತ ತನಿಖೆಗೆ ಒತ್ತಾಯಿಸಿದೆ.

State Women Commission Chairperson
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ (File Photo)
author img

By ETV Bharat Karnataka Team

Published : Sep 2, 2024, 2:06 PM IST

Updated : Sep 2, 2024, 10:41 PM IST

ಬೆಂಗಳೂರು : ಮಾಜಿ ಮುಖ್ಯಮಂತ್ರಿ ಬಿ.ಎಸ್‌‍. ಯಡಿಯೂರಪ್ಪ ವಿರುದ್ಧ ಪೋಕ್ಸೊ ಪ್ರಕರಣ ದಾಖಲಿಸಿದ್ದ ಸಂತ್ರಸ್ತ ಬಾಲಕಿಯ ತಾಯಿಯ ಸಾವಿನ ಕುರಿತು ರಾಜ್ಯ ಮಹಿಳಾ ಆಯೋಗ ಅನುಮಾನ ವ್ಯಕ್ತಪಡಿಸಿದೆ. ಸಾವಿನ ಪ್ರಕರಣದ ತನಿಖೆ ನಡೆಸುವಂತೆ ಪೊಲೀಸ್‌‍ ಇಲಾಖೆಗೆ ರಾಜ್ಯ ಮಹಿಳಾ ಆಯೋಗದ ಮುಖ್ಯಸ್ಥೆ ನಾಗಲಕ್ಷ್ಮಿ ಚೌಧರಿ ಪತ್ರ ಬರೆದಿದ್ದಾರೆ.

ಬೆಂಗಳೂರು ಪೊಲೀಸ್‌‍ ಆಯುಕ್ತರಿಗೆ ಪತ್ರ ಬರೆದು ಸೂಕ್ತ ತನಿಖೆ ನಡೆಸುವಂತೆ ಮಹಿಳಾ ಆಯೋಗದ ಮುಖ್ಯಸ್ಥೆ ನಾಗಲಕ್ಷ್ಮಿ ಚೌಧರಿ ಆಗ್ರಹ ಮಾಡಿದ್ದು, ಆದಷ್ಟು ಬೇಗ ತನಿಖಾ ವರದಿಯನ್ನು ಆಯೋಗಕ್ಕೆ ಸಲ್ಲಿಸುವಂತೆ ಕೋರಿದ್ದಾರೆ. ಈ ಸಂಬಂಧ ಹುಳಿಮಾವು ಪೊಲೀಸ್‌‍ ಠಾಣೆಯಲ್ಲಿ ಮಹಿಳೆಯ ಸಾವು ಪ್ರಕರಣ ದಾಖಲಾಗಿದೆ.

ಏನಿದು ಪ್ರಕರಣ: ಯಡಿಯೂರಪ್ಪ ಅವರ ವಿರುದ್ಧ 2024ರ ಮಾರ್ಚ್ 15ರಂದು ಪೋಕ್ಸೋ ಪ್ರಕರಣ ದಾಖಲಾಗಿತ್ತು. ಅತ್ಯಾಚಾರ ಪ್ರಕರಣದಲ್ಲಿ ತಮಗೆ ನ್ಯಾಯ ದೊರಕಿಸಿಕೊಡುವಂತೆ ಮನವಿ ಮಾಡಲು ಫೆಬ್ರವರಿ 2ರಂದು ಯಡಿಯೂರಪ್ಪ ಅವರ ನಿವಾಸಕ್ಕೆ ಹೋಗಿದ್ದಾಗ 17 ವರ್ಷದ ತಮ್ಮ ಮಗಳ ಮೇಲೆ ಯಡಿಯೂರಪ್ಪನವರು ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಿ ಮಹಿಳೆಯೊಬ್ಬರು ಸದಾಶಿವನಗರ ಠಾಣೆಗೆ ದೂರು ನೀಡಿದ್ದರು. ಅದರನ್ವಯ ಪೋಕ್ಸೋ ಹಾಗೂ ಐಪಿಸಿ ಸೆಕ್ಷನ್‌ 354 (ಎ)ರಡಿ ಸದಾಶಿವನಗರ ಠಾಣಾ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದರು. ಬಳಿಕ ಪ್ರಕರಣದ ತನಿಖೆಯನ್ನ ಸಿಐಡಿಗೆ ವಹಿಸಲಾಗಿತ್ತು.

ಆದರೆ ದೂರುದಾರ ಮಹಿಳೆ ಮೇ 27ರಂದು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದರು. ಉಸಿರಾಟದ ತೊಂದರೆಯಿಂದಾಗಿ ಹುಳಿಮಾವು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದ ಮಹಿಳೆ ನಿತ್ರಾಣಗೊಂಡು ಸಾವನ್ನಪ್ಪಿದ್ದರು. ಶ್ವಾಸಕೋಶದ ಕ್ಯಾನ್ಸರ್‌‌ನಿಂದ ಮಹಿಳೆ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದರು. ಮಹಿಳೆಯ ಸಾವು ಹಾಗೂ ಸಾವಿನ ನಂತರ ಮರಣೋತ್ತರ ಪರೀಕ್ಷೆ ನಡೆದಿರುವುದರ ಕುರಿತು ಅನುಮಾನಗಳಿವೆ ಎಂದು ಸೂಕ್ತ ತನಿಖೆ ನಡೆಸುವಂತೆ ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಪತ್ರ ರವಾನಿಸಿದ್ದಾರೆ.

ಇದನ್ನೂ ಓದಿ: ಪೋಕ್ಸೋ ಪ್ರಕರಣ: ಮಾಜಿ ಸಿಎಂ ಬಿಎಸ್​ವೈ ಬಂಧಿಸದಂತೆ ನೀಡಿದ್ದ ಆದೇಶ ವಿಸ್ತರಿಸಿದ ಹೈಕೋರ್ಟ್ - BS Yediyurappa

Last Updated : Sep 2, 2024, 10:41 PM IST
ETV Bharat Logo

Copyright © 2024 Ushodaya Enterprises Pvt. Ltd., All Rights Reserved.