ETV Bharat / state

ಕಡಬ ಆ್ಯಸಿಡ್ ದಾಳಿ: ವಿದ್ಯಾರ್ಥಿನಿಯರಿಗೆ ಸರ್ಕಾರದಿಂದ ತಕ್ಷಣಕ್ಕೆ ತಲಾ 4 ಲಕ್ಷ ರೂ ಪರಿಹಾರ, ಮಹಿಳಾ ಆಯೋಗದ ಅಧ್ಯಕ್ಷೆ - Acid attack victims

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಆ್ಯಸಿಡ್​​ ದಾಳಿಗೊಳಗಾದ ವಿದ್ಯಾರ್ಥಿನಿಯರನ್ನು ಭೇಟಿ ಮಾಡಿ, ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ.

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ
ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ
author img

By ETV Bharat Karnataka Team

Published : Mar 5, 2024, 12:56 PM IST

Updated : Mar 5, 2024, 8:50 PM IST

ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಹೇಳಿಕೆ

ಮಂಗಳೂರು(ದಕ್ಷಿಣ ಕನ್ನಡ): ಕಡಬದಲ್ಲಿ ಸೋಮವಾರ ಕಿಡಿಗೇಡಿಯಿಂದ ಆ್ಯಸಿಡ್​​ ದಾಳಿಗೊಳಗಾಗಿ ನಗರದ ಎ.ಜೆ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿನಿಯರನ್ನು ಇಂದು ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ಡಾ.ನಾಗಲಕ್ಷ್ಮಿ ಚೌಧರಿ ಭೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಬಳಿಕ ಸಂತ್ರಸ್ತೆಯರು ಹಾಗೂ ಪೋಷಕರಿಗೆ ಸಾಂತ್ವನ ಹೇಳಿದರು.

ಭೇಟಿಯ ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಡಾ.ನಾಗಲಕ್ಷ್ಮಿ ಚೌಧರಿ, "ಈ ಘಟನೆಯ ಬಗ್ಗೆ ಡಿಸಿ ಕಚೇರಿಯಲ್ಲಿ ಎಲ್ಲ ಪೊಲೀಸ್ ಅಧಿಕಾರಿಗಳ ಜೊತೆ ಸಭೆ​ ಕರೆದಿದ್ದೇನೆ. ಮೂವರು ವಿದ್ಯಾರ್ಥಿನಿಯರೂ ಅಪಾಯದಿಂದ ಪಾರಾಗಿದ್ದಾರೆ. ಸಂತ್ರಸ್ತೆಯರಲ್ಲಿ ಒಬ್ಬಳು 20%, ಮತ್ತೊಬ್ಬಳು 12% ಹಾಗೂ 10% ಗಿಂತ ಕಡಿಮೆ ಪ್ರಮಾಣದಲ್ಲಿ ಗಾಯಗೊಂಡಿದ್ದಾರೆ. ವಿದ್ಯಾರ್ಥಿನಿಯರ ನಗು, ಅಳುವನ್ನು ನೋಡಿದೆ. ಅವರ ಮನಸ್ಥೈರ್ಯಕ್ಕೆ ಮೆಚ್ಚಲೇಬೇಕು. ಅವರು 'ನಾವು ಮತ್ತೆ ಕನ್ನಡ ಪರೀಕ್ಷೆ ಬರೆಯಬೇಕಾ' ಎಂದು ಕೇಳಿದ್ದಾರೆ. ಇದರ ಬಗ್ಗೆ ಚಿಂತಿಸಬೇಡಿ ಎಂದು ಹೇಳಿದ್ದೇನೆ" ಎಂದು ತಿಳಿಸಿದರು.

ಮುಂದುವರೆದು ಮಾತನಾಡಿ, "ಪರಿಹಾರವಾಗಿ ಸರ್ಕಾರ ತಕ್ಷಣ ವಿದ್ಯಾರ್ಥಿನಿಯರಿಗೆ ತಲಾ 4 ಲಕ್ಷ ರೂಪಾಯಿಂತೆ ನೀಡಲಿದೆ. ಬಳಿಕ 20 ಲಕ್ಷ ರೂಪಾಯಿ ಪ್ಲಾಸ್ಟಿಕ್​ ಶಸ್ತ್ರಚಿಕಿತ್ಸೆಗೆ ನೀಡಲಾಗುವುದು. ಸಂತ್ರಸ್ತೆಯರಿಗೆ ಯಾವುದೇ ಕೊರತೆಯಾಗಬಾರದು. ಈ ಸಂದರ್ಭದಲ್ಲಿ ಅವರ ಚಿಕಿತ್ಸೆಗೆ ಬೇಕಾದ ಎಲ್ಲಾ ವ್ಯವಸ್ಥೆಯನ್ನೂ ಇಲಾಖೆ ನೋಡಿಕೊಳ್ಳಬೇಕು. ನಾನೂ ಜೊತೆಗಿದ್ದೇನೆ. ಸರ್ಕಾರದಿಂದ ಸಿಗಬೇಕಾದ ಎಲ್ಲಾ ಪರಿಹಾರವನ್ನು ನಾನು ನೋಡಿಕೊಳ್ಳುತ್ತೇನೆ" ಎಂದರು.

"ಇನ್ನು ಆರೋಪಿ ಆ್ಯಸಿಡ್​ ಅನ್ನು ಪ್ಲಾಸ್ಟಿಕ್​ ಬಾಟಲ್​ನಲ್ಲಿ ತಂದಿದ್ದರಿಂದ ಅದರ ಸುಡುವ ಪ್ರಮಾಣವನ್ನು ಸ್ವಲ್ಪ ಬಾಟಲ್​ ಹೀರಿಕೊಂಡಿತ್ತು. ಹೀಗಾಗಿ ವಿದ್ಯಾರ್ಥಿನಿಯರ ಮೇಲೆ ಗಂಭೀರ ಪರಿಣಾಮ ಉಂಟುಮಾಡಿಲ್ಲ" ಎಂದು ಅವರು ಹೇಳಿದರು.

ಇದನ್ನೂ ಓದಿ: ಕಡಬ: ಮೂವರು ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆ್ಯಸಿಡ್ ದಾಳಿ: ಆರೋಪಿ ಬಂಧನ

Last Updated : Mar 5, 2024, 8:50 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.