ETV Bharat / state

ಬೆಂಗಳೂರು: ಇಬ್ಬರು ಹೆಣ್ಣುಮಕ್ಕಳನ್ನ ಕೊಚ್ಚಿ ಕೊಂದ ಮಲತಂದೆ! - Stepfather Murdered daughters - STEPFATHER MURDERED DAUGHTERS

ಇಬ್ಬರು ಹೆಣ್ಣುಮಕ್ಕಳನ್ನು ಮಲತಂದೆಯೇ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿರುವ ದಾರುಣ ಘಟನೆ ಬೆಂಗಳೂರಿನ ಅಮೃತಹಳ್ಳಿ ಠಾಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಇಬ್ಬರು ಹೆಣ್ಣುಮಕ್ಕಳನ್ನ ಕೊಚ್ಚಿ ಕೊಂದ ಮಲತಂದೆ
ಪೊಲೀಸ್ ಠಾಣೆ (ETV Bharat)
author img

By ETV Bharat Karnataka Team

Published : Aug 24, 2024, 10:47 PM IST

ಡಿಸಿಪಿ ಸಜೀತ್ (ETV Bharat)

ಬೆಂಗಳೂರು: ಇಬ್ಬರು ಹೆಣ್ಣುಮಕ್ಕಳನ್ನು ಮಲತಂದೆಯೇ ಬರ್ಬರವಾಗಿ ಮಚ್ಚಿನಿಂದ ಹತ್ಯೆ ಮಾಡಿರುವ ಆಘಾತಕಾರಿ ಘಟನೆ ಅಮೃತಹಳ್ಳಿ ಠಾಣೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. 14 ಹಾಗೂ 16 ವರ್ಷದ ಇಬ್ಬರು ಹೆಣ್ಣುಮಕ್ಕಳು ಕೊಲೆಗೀಡಾದವರು. ಸುಮಿತ್ ಕೊಲೆ ಮಾಡಿ ಪರಾರಿಯಾದ ಮಲತಂದೆ. ಕೊಲೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹಂತಕನಿಗಾಗಿ ಶೋಧ ಕಾರ್ಯ ನಡೆಸುತ್ತಿದ್ದಾರೆ.

ಬಾಲಕಿಯರ ಕೊಲೆ ಪ್ರಕರಣ ಸಂಬಂಧ ಈಶಾನ್ಯ ವಿಭಾಗ ಡಿಸಿಪಿ ಸಜೀತ್ ಮಾತನಾಡಿ, ಇಂದು ಮಧ್ಯಾಹ್ನ 3.30ರ ಸುಮಾರಿಗೆ ಈ ಘಟನೆ ನಡೆದಿದೆ. ಇಬ್ಬರು ಅಪ್ರಾಪ್ತ ಮಕ್ಕಳನ್ನು ಮಲತಂದೆ ಸುಮಿತ್ ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಮಕ್ಕಳ ತಂದೆ ಅನಿತಾ ಗಾರ್ಮೆಂಟ್ಸ್​ನಲ್ಲಿ ಕೆಲಸ ಮಾಡುತ್ತಿದ್ದು, ಸುಮಿತ್ ಫುಡ್ ಡೆಲಿವರಿ ಬಾಯ್ ಆಗಿದ್ದಾನೆ. ಉತ್ತರ ಪ್ರದೇಶ ಮೂಲದ ಕುಟುಂಬ ಇದಾಗಿದ್ದು, ಯಾವ ಕಾರಣಕ್ಕೆ ಕೊಲೆಯಾಗಿದೆ ಎಂಬುದು ತನಿಖೆಯಿಂದ ಹೊರಬರಬೇಕಿದೆ. ಕೃತ್ಯದ ಬಳಿಕ ಆರೋಪಿ ತಲೆಮರೆಸಿಕೊಂಡಿದ್ದಾನೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರೆಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಪತ್ನಿಯನ್ನು ನಿಂದಿಸಿದ್ದವನ ಹತ್ಯೆಗೈದಿದ್ದ ಆರೋಪಿ ಸೇರಿ ನಾಲ್ವರ ಬಂಧನ - Murder case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.