ETV Bharat / state

ಚನ್ನಗಿರಿ ಪೊಲೀಸ್ ಠಾಣೆ ಮೇಲೆ ಕಲ್ಲು ತೂರಾಟ ಪ್ರಕರಣ: ಬಂಧನ ಭೀತಿಯಿಂದ ಗ್ರಾಮ ತೊರೆದ ಜನ - people leave village - PEOPLE LEAVE VILLAGE

ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಿಂದ ಹೊನ್ನೆಬಾಗಿ ಗ್ರಾಮದಲ್ಲಿ ಬಹುತೇಕ ಜನರು ಮನೆ ತೊರೆದಿದ್ದಾರೆ.

ಚನ್ನಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣ
ಚನ್ನಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣ (ETV Bharat)
author img

By ETV Bharat Karnataka Team

Published : May 28, 2024, 10:44 PM IST

ದಾವಣಗೆರೆ: ಚನ್ನಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಿಂದ ಹೊನ್ನೆಬಾಗಿ ಗ್ರಾಮದಲ್ಲಿ ಬಹುತೇಕ ಜನರು ಊರು ತೊರೆದಿದ್ದಾರೆ.

ಪೊಲೀಸರು ಈಗಾಗಲೇ 30ಕ್ಕೂ ಜನರನ್ನು ಬಂಧನ ಮಾಡಿದ ಬೆನ್ನಲ್ಲೇ ತಮ್ಮನ್ನು ಬಂಧಿಸಬಹುದು ಎಂಬ ಭೀತಿಯಿಂದ ಕೆಲ ಯುವಕರು ಗ್ರಾಮವನ್ನೇ ಬಿಟ್ಟು ಹೋಗಿದ್ದಾರೆ. 30 ಜನರ ಪೈಕಿ ಹೊನ್ನೆಬಾಗಿ ಗ್ರಾಮದ 8 ಮಂದಿಯನ್ನು ಬಂಧಿಸಲಾಗಿದೆ. ಇದಲ್ಲದೇ ಪೊಲೀಸರು ಗ್ರಾಮದ ಜನರನ್ನು ವಶಕ್ಕೆ ಪಡೆದು ವಿಚಾರಣೆಗೆ ಒಳಪಡಿಸುತ್ತಿದ್ದು, ಇದರಿಂದಾಗಿ ಗ್ರಾಮದ ಮನೆಗಳು ಖಾಲಿ ಖಾಲಿಯಾಗಿವೆ.

ಮತ್ತೊಂದೆಡೆ, ಘಟನೆ ಬಗ್ಗೆ ಮಾಜಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಮಾತನಾಡಿ, "ಈ ರೀತಿ ಘಟನೆ ಚನ್ನಗಿರಿ ಇತಿಹಾಸದಲ್ಲೇ ಮೊದಲು, ಆರಕ್ಷಕರಿಗೆ ರಕ್ಷಣೆ ಇಲ್ಲದಂತಾಗಿದೆ. ಅಲ್ಲದೇ, ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ತನಿಖೆ ಆಗದೇ ಪೊಲೀಸ್​ ಸಿಬ್ಬಂದಿಯನ್ನು ಅಮಾನತು ಮಾಡಲಾಗಿದೆ. ಇದರಿಂದ ಪೊಲೀಸರ ಧೈರ್ಯ ಕುಸಿದಿದೆ. ಇದೊಂದು ಪೂರ್ವ ನಿಯೋಜಿತ ಕೃತ್ಯವಾಗಿದೆ. ಕೃತ್ಯ ಎಸಗಿದವರನ್ನು ಬಂಧಿಸಿ ಕಾನೂನು ಪ್ರಕಾರ ಶಿಕ್ಷೆಗೆ ಒಳಪಡಿಸಬೇಕು" ಎಂದು ಆಗ್ರಹಿಸಿದ್ದರು.

ಹಿಂದೂಪರ ಸಂಘಟನೆಗಳಿಂದ ಪ್ರತಿಭಟನೆ: ಆದಿಲ್ ಎಂಬಾತನ ಸಾವು ಖಂಡಿಸಿ ಕೆಲವು ಕಿಡಿಗೇಡಿಗಳು ಇತ್ತೀಚಿಗೆ ಚೆನ್ನಗಿರಿ ಪೊಲೀಸ್​ ಠಾಣೆಗೆ ಕಲ್ಲು ತೂರಿ ವಾಹನಗಳನ್ನು ಧ್ವಂಸಗೊಳಿಸಿದ್ದರು. ಇದನ್ನು ಖಂಡಿಸಿ ಚನ್ನಗಿರಿಯಲ್ಲಿ ನಿನ್ನೆ(ಸೋಮವಾರ) ವಿಶ್ವ ಹಿಂದೂ ಪರಿಷತ್ ಹಾಗೂ ಬಜರಂಗದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿತ್ತು.

ಚನ್ನಗಿರಿ ಪಟ್ಟಣದ ಕೋಟೆ ಆಂಜನೇಯ ದೇವಾಲಯದಿಂದ ಆರಂಭವಾದ ಪ್ರತಿಭಟನಾ ಮೆರವಣಿಗೆ ತಾಲೂಕು ಕಚೇರಿ ತಲುಪಿತು. ವಿಶ್ವಹಿಂದೂ ಪರಿಷತ್ ಜಿಲ್ಲಾಧ್ಯಕ್ಷ ಸತೀಶ್ ಪೂಜಾರಿ ಹಾಗೂ ದಾವಣಗೆರೆ ಜಿಲ್ಲಾ ಕೋಶಾಧ್ಯಕ್ಷ ಮಂಜುನಾಥ್ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು. ಈ ಸಂದರ್ಭದಲ್ಲಿ ರಾಜ್ಯ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಲಾಯಿತು.‌

ನಂತರ ಪ್ರತಿಕ್ರಿಯಿಸಿದ ಸತೀಶ್ ಪೂಜಾರಿ, "ನಾವು ಈ ಘಟನೆಯನ್ನು ಖಂಡಿಸುತ್ತೇವೆ. ಒಬ್ಬ ಜೂಜುಕೋರ ಮೃತಪಟ್ಟಿದ್ದಕ್ಕೆ ಕಾನೂನು ಕೈಗೆತ್ತಿಕೊಂಡಿದ್ದಾರೆ. ಮಟ್ಕಾ ದಂಧೆ ಮಾಡುವ ವ್ಯಕ್ತಿ ಸಾವನ್ನಪ್ಪಿದ್ದರಿಂದ ಠಾಣೆ ಧ್ವಂಸಗೊಳಿಸಿ ವಾಹನಗಳನ್ನು ಹಾಳು ಮಾಡಿದ್ದಾರೆ. ಇಂಥವರನ್ನು ರಾಷ್ಟ್ರ ದ್ರೋಹದಡಿ ಬಂಧಿಸಿ ಕಠಿಣ ಶಿಕ್ಷೆ ನೀಡಬೇಕು" ಎಂದು ಆಗ್ರಹಿಸಿದ್ದರು.

ಇದನ್ನೂ ಓದಿ: ಚನ್ನಗಿರಿ ವ್ಯಕ್ತಿ ಸಾವು ಪ್ರಕರಣ: ಡಿವೈಎಸ್​​ಪಿ ಸೇರಿ ಮೂವರು ಪೊಲೀಸ್​ ಅಧಿಕಾರಿಗಳು ಅಮಾನತು - Channagiri Adil Death Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.