ETV Bharat / state

ಗಡುವಿನೊಳಗೆ ಬೆಂಗಳೂರಿನ ರಸ್ತೆಗುಂಡಿ ಮುಚ್ಚದಿದ್ದರೆ ನಿರ್ದಾಕ್ಷಿಣ್ಯ ಕ್ರಮ: ಡಿಸಿಎಂ ಡಿ.ಕೆ.ಶಿವಕುಮಾರ್ - D K Shivakumar - D K SHIVAKUMAR

15 ದಿನಗಳ ಗಡುವಿನ ಒಳಗೆ ಬೆಂಗಳೂರು ರಸ್ತೆಗುಂಡಿಗಳನ್ನು ಮುಚ್ಚುವ ಕೆಲಸ ಆಗಬೇಕು. ಈ ವಿಚಾರದಲ್ಲಿ ಬೇಜವಾಬ್ದಾರಿ ತೋರುವ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಕ್ರಮ ಜರುಗಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್​ ಎಚ್ಚರಿಕೆ ನೀಡಿದ್ದಾರೆ.

ಡಿಸಿಎಂ ಡಿ.ಕೆ. ಶಿವಕುಮಾರ್
ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)
author img

By ETV Bharat Karnataka Team

Published : Sep 8, 2024, 6:48 PM IST

Updated : Sep 8, 2024, 7:44 PM IST

ಡಿಸಿಎಂ ಡಿ.ಕೆ.ಶಿವಕುಮಾರ್ (ETV Bharat)

ಬೆಂಗಳೂರು: ನಾನು ಒಂದು ವಾರಗಳ ಕಾಲ ಖಾಸಗಿ ಕೆಲಸದ ಮೇಲೆ ವಿದೇಶ ಪ್ರವಾಸಕ್ಕೆ ತೆರಳುತ್ತಿದ್ದು, ಕೊಟ್ಟಿರುವ ಗಡುವಿನಲ್ಲಿ ಬೆಂಗಳೂರು ರಸ್ತೆಗಳಲ್ಲಿ ಗುಂಡಿಗಳನ್ನು ಮುಚ್ಚಬೇಕು. ಈ ವಿಚಾರದಲ್ಲಿ ಬೇಜವಾಬ್ದಾರಿ ತೋರುವ ಅಧಿಕಾರಿಗಳನ್ನು ಅಮಾನತುಗೊಳಿಸಿ ನಿರ್ದಾಕ್ಷಿಣ್ಯ ಕ್ರಮ ಜರುಗಿಸಲಾಗುವುದು ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಎಚ್ಚರಿಕೆ ನೀಡಿದರು.

ನಗರದ ವೈಯಾಲಿಕಾವಲ್ ಬಿಬಿಎಂಪಿ ಕಚೇರಿಯಲ್ಲಿಂದು ಬೆಂಗಳೂರು ನಗರ ಉಸ್ತುವಾರಿ ಸಚಿವರೂ ಆಗಿರುವ ಡಿ.ಕೆ.ಶಿವಕುಮಾರ್ ಪಾಲಿಕೆ ಅಧಿಕಾರಿಗಳ ಸಭೆ ನಡೆಸಿದ ನಂತರ ಮಾಧ್ಯಮದವರೊಂದಿಗೆ ಮಾತನಾಡಿ, ಇಂದು ಬಿಬಿಎಂಪಿ ಅಧಿಕಾರಿಗಳ ಸಭೆ ನಡೆಸಿದ್ದೇನೆ. ಕೊಟ್ಟಿರುವ 15 ದಿನಗಳ ಗಡುವಿನ ಒಳಗೆ ನಗರದ ರಸ್ತೆಗುಂಡಿಗಳನ್ನು ಮುಚ್ಚುವ ಕೆಲಸ ಆಗಬೇಕು ಎಂದು ನಿರ್ದೇಶನ ನೀಡಿದ್ದೇನೆ ಎಂದು ತಿಳಿಸಿದರು.

ರಸ್ತೆ ಗುಂಡಿ ವಿಚಾರವಾಗಿ ಸಾರ್ವಜನಿಕರಿಂದ ಮತ್ತೆ ದೂರು ಬಂದರೆ ಇದಕ್ಕೆ ಜವಾಬ್ದಾರಿಯಾಗಿರುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ. ಎಷ್ಟು ಜನ ಅಮಾನತುಗೊಳ್ಳುತ್ತಾರೋ ಗೊತ್ತಿಲ್ಲ. ಪಾಲಿಕೆಯ ಪ್ರತಿ ಅಧಿಕಾರಿಗಳು ಎಷ್ಟೇ ದೊಡ್ಡವರಿದ್ದರೂ ಪ್ರತಿಯೊಬ್ಬರೂ ರಸ್ತೆಯಲ್ಲಿ ನಿಂತು ಈ ಸಮಸ್ಯೆ ಬಗೆಹರಿಸಬೇಕು. ವಾರ್ಡ್​ಗಳಲ್ಲಿ ಅಧಿಕಾರಿಗಳೇ ಮುಂದೆ ನಿಂತು ಗುಂಡಿ ಮುಚ್ಚುವ ಕೆಲಸ ಮಾಡಿಸಬೇಕು ಎಂದು ನಿರ್ದೇಶನ ನೀಡಿದ್ದೇನೆ ಎಂದರು.

ಸೆಪ್ಟೆಂಬರ್ ತಿಂಗಳಲ್ಲಿ ಮಳೆ ಬೀಳುವ ಸಾಧ್ಯತೆ ಹೆಚ್ಚಾಗಿದ್ದು, ಬಹಳ ಜಾಗರೂಕರಾಗಿ ಇರಬೇಕಿದೆ. ಈ ಸಂದರ್ಭದಲ್ಲಿ ನೀರು ನಿಲ್ಲುವ ಹಾಗೂ ಮನೆಗಳಿಗೆ ನುಗ್ಗುವ ಸಾಧ್ಯತೆ ಇರುವ ಪ್ರದೇಶಗಳಲ್ಲಿ ಎಚ್ಚರಿಕೆ ವಹಿಸಬೇಕು ಎಂದು ಸೂಚಿಸಿದ್ದೇನೆ. ಮಳೆಯಿಂದ ಬೀಳಬಹುದಾದ ಮರಗಳನ್ನು ಮೇಲ್ಭಾಗ ಟ್ರಿಮ್ ಮಾಡಲು ಕೂಡ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಮಹಾತ್ಮಾ ಗಾಂಧೀಜಿ ಅವರು ಕಾಂಗ್ರೆಸ್ ಅಧ್ಯಕ್ಷರಾಗಿ ಬೆಳಗಾವಿಯಲ್ಲಿ ಎಐಸಿಸಿ ಅಧಿವೇಶನ ನಡೆಸಿ 100 ವರ್ಷ ಪೂರೈಸಿರುವ ಸಂದರ್ಭದಲ್ಲಿ ಬೆಂಗಳೂರು ನಗರದ ಎಲ್ಲ ಸರ್ಕಾರಿ ಹಾಗೂ ಖಾಸಗಿ ಶಾಲೆಗಳು ಗಾಂಧಿ ಜಯಂತಿ ದಿನದಂದು ಸ್ವಚ್ಛತೆ ಬಗ್ಗೆ ಪ್ರತಿಜ್ಞಾ ವಿಧಿ ಸ್ವೀಕಾರ ಕಾರ್ಯಕ್ರಮ ಮಾಡಬೇಕು. ಆ ಮೂಲಕ ಮಕ್ಕಳಲ್ಲಿ ಸ್ವಚ್ಛತೆ ಬಗ್ಗೆ ಜಾಗೃತಿ ಮೂಡಿಸಬೇಕು ಎಂದು ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.

ಪ್ರವಾಸದ ನಂತರ ನೀವೇ ರಸ್ತೆಗಳ ಪರಿಶೀಲನೆ ಮಾಡುತ್ತೀರಾ ಎಂಬ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿ, ನಾನೇ ಖುದ್ದಾಗಿ ನಗರ ಪ್ರದಕ್ಷಣೆ ಮಾಡಿ ರಸ್ತೆಗಳ ಸ್ಥಿತಿಗಳನ್ನು ಪರಿಶೀಲಿಸುತ್ತೇನೆ. ಅಧಿಕಾರಿಗಳು ಬೇಜವಾಬ್ದಾರಿಯುತವಾಗಿ ಕಾರ್ಯನಿರ್ವಹಿಸಿದ್ದರೆ ಅವರನ್ನು ಅಲ್ಲಿಯೇ ಅಮಾನತು ಮಾಡಲಾಗುವುದು ಎಂದು ಪುನರುಚ್ಚಸಿದರು.

ಇದನ್ನೂ ಓದಿ: ಹೊರಗೆ ಸಿದ್ಧರಾಮಯ್ಯನವರ ಹಿಂದೆ ಕಲ್ಲು ಬಂಡೆ, ಒಳಗೆ ಸಿಎಂ ಕುರ್ಚಿಗೆ ಪೈಪೋಟಿ: ಜೋಶಿ ವ್ಯಂಗ್ಯ - Pralhad Joshi

Last Updated : Sep 8, 2024, 7:44 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.