ETV Bharat / state

ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಅನುಸರಿಸಿ: ಮೈಸೂರು ಜಿಲ್ಲಾಧಿಕಾರಿ ಕೆ ವಿ ರಾಜೇಂದ್ರ ಸಲಹೆ - Lok Sabha Election - LOK SABHA ELECTION

ಮೈಸೂರು- ಕೊಡಗು ಲೋಕಸಭಾ ಕ್ಷೇತ್ರ ಚುನಾವಣೆ ಹಿನ್ನೆಲೆ ಎಫ್‌ಎಸ್‌ಟಿ, ಎಸ್‌ಎಸ್‌ಟಿ ಮತ್ತು ವಿವಿಟಿ ತಂಡದ ಮುಖ್ಯಸ್ಥರಿಗೆ ಚುನಾವಣಾ ಮಾದರಿ ನೀತಿ ಸಂಹಿತೆ ಪಾಲನೆ ಕುರಿತು ತರಬೇತಿ ನಡೆಯಿತು.

Dr KV Rajendra spoke in the training program.
ತರಬೇತಿ ಕಾಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಮಾತನಾಡಿದರು.
author img

By ETV Bharat Karnataka Team

Published : Mar 22, 2024, 5:41 PM IST

ಮೈಸೂರು: ಲೋಕಸಭಾ ಚುನಾವಣೆಗೆ ಸಂಬಂಧಿಸಿದಂತೆ ಎಫ್ಎಸ್​​ಟಿ, ಎಸ್ಎಸ್ ಟಿ, ವಿಎಸ್ ಟಿ ಸೇರಿದಂತೆ ವಿವಿಧ ತಂಡಗಳಿಗೆ ಚುನಾವಣೆ ಅಧಿಕಾರಿಗಳನ್ನು ನಿಯೋಜಿಸಲಾಗಿದ್ದು, ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಚುನಾವಣೆ ಕರ್ತವ್ಯ ನಿರ್ವಹಿಸಬೇಕು ಹಾಗೂ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಅನುಸರಿಸಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಡಾ ಕೆ ವಿ ರಾಜೇಂದ್ರ ಸೂಚಿಸಿದರು.

ಇಂದು ಮೈಸೂರು- ಕೊಡಗು ಲೋಕಸಭಾ ಕ್ಷೇತ್ರದ ಚುನಾವಣೆ ಅಂಗವಾಗಿ ಎಫ್‌ಎಸ್‌ಟಿ, ಎಸ್‌ಎಸ್‌ಟಿ ಮತ್ತು ವಿವಿಟಿ ತಂಡದ ಮುಖ್ಯಸ್ಥರಿಗೆ ಮಾದರಿ ನೀತಿ ಸಂಹಿತೆ (ಎಂಸಿಸಿ) ಕುರಿತು ಇಂದು ಜಿಪಂ ಸಭಾಂಗಣದಲ್ಲಿ ಆಯೋಜಿಸಿದ್ದ ತರಬೇತಿ ಕಾಯಕ್ರಮದಲ್ಲಿ ಸಲಹೆ ನೀಡಿದರು.

ಜಿಲ್ಲಾದ್ಯಂತ ಎಲ್ಲ ಚೆಕ್​​ಪೋಸ್ಟ್​​ಗಳಲ್ಲಿ ಪ್ರತಿಯೊಂದು ವಾಹನಗಳನ್ನು ಪರಿಶೀಲಿಸಬೇಕು. ಪರಿಶೀಲನೆ ಸಂದರ್ಭದಲ್ಲಿ ಯಾವುದೇ ವಾಹನದಲ್ಲಿ 50 ಸಾವಿರಕ್ಕಿಂತ ಹೆಚ್ಚು ಹಣ ಸಾಗಿಸುತ್ತಿರುವುದು ಕಂಡುಬಂದರೆ ಅಂತಹ ವಾಹನಗಳನ್ನು ವಶಪಡಿಸಿಕೊಳ್ಳಬೇಕು. ಹಣವಲ್ಲದೇ ಪಕ್ಷದ ಗುರುತಿರುವ ಟಿ-ಶರ್ಟ್, ಕ್ಯಾಪ್, ಹೆಚ್ಚು ಸಂಖ್ಯೆಯ ಸೀರೆ, ಆಹಾರದ ಕಿಟ್ ಇತ್ಯಾದಿ ರೀತಿ ಅಕ್ರಮ ವಸ್ತು ಸಾಗಣೆ ಕಂಡು ಬಂದರೆ ಅವುಗಳನ್ನು ವಶಪಡಿಸಿಕೊಳ್ಳಬೇಕು ಎಂದು ತಿಳಿಸಿದರು.

ಚುನಾವಣೆ ವೇಳೆ ನೀತಿ ಸಂಹಿತೆಯ ಉಲ್ಲಂಘನೆ ಪ್ರಕರಣಗಳು ಕಂಡು ಬಂದ ಸಂದರ್ಭದಲ್ಲಿ ಅಧಿಕಾರಿಗಳು ಜಾಗೃತರಾಗಿರಬೇಕು ಹಾಗೂ ಮಾದರಿ ನೀತಿ ಸಂಹಿತೆ ಕಟ್ಟುನಿಟ್ಟಾಗಿ ಅನುಸರಿಸಿ ಅಗತ್ಯ ಕ್ರಮ ವಹಿಸಬೇಕು. ಸಂಶಯಾಸ್ಪದ ಪ್ರಕರಣಗಳು ಕಂಡುಬಂದರು ಅವುಗಳನ್ನು ವಶಪಡಿಸಿಕೊಂಡು ಸಂಬಂಧ ಪಟ್ಟ ಅಧಿಕಾರಿಗಳಿಗೆ ಮಾಹಿತಿ ನೀಡಿ ಅವರಿಂದ ಸತ್ಯ - ಅಸತ್ಯತೆಗಳನ್ನ ತಿಳಿಯಬೇಕು ಎಂದು ಹೇಳಿದರು.

ಅಭ್ಯರ್ಥಿಗಳು ಅಧಿಕೃತವಾಗಿ ಘೋಷಣೆ ನಂತರದಲ್ಲಿ ಅಧಿಕಾರಿಗಳ ಕೆಲಸ ಹೆಚ್ಚಾಗಲಿದ್ದು, ಆ ಸಮಯದಲ್ಲಿ ಬುದ್ದಿವಂತಿಕೆ ಹಾಗೂ ನಿಗಾವಹಿಸಿ ಕೆಲಸ ಮಾಡಬೇಕು. ತರಬೇತಿ ಉದ್ದೇಶ ಅಧಿಕಾರಿಗಳಿಗೆ ಚುನಾವಣಾ ನೀತಿ ಸಂಹಿತೆಯ ಬಗ್ಗೆ ಹಾಗೂ ಅವರ ಪಾತ್ರ ಮತ್ತು ಜವಾಬ್ದಾರಿಯನ್ನು ತಿಳಿಸುವುದಾಗಿದೆ. ಅದನ್ನು ಅರಿತು ಅಧಿಕಾರಿಗಳು ನಿಯಮಗಳನ್ನು ಪಾಲಿಸಿ ಯಾವುದೇ ರೀತಿಯ ತೊಂದರೆಯಾಗದಂತೆ ಎಚ್ಚರ ವಹಿಸಬೇಕು ಎಂದು ತಿಳಿಸಿದರು.

ಜಿಪಂ ಮುಖ್ಯ ಕಾರ್ಯನಿರ್ವಾಹಣಾಧಿಕಾರಿ ಕೆ ಎಂ ಗಾಯತ್ರಿ ಮಾತನಾಡಿ, ಅಧಿಕಾರಿಗಳು ಚುನಾವಣೆ ಕಾರ್ಯವನ್ನು ಯಾವುದೇ ಲೋಪವಾಗದಂತೆ ಅತ್ಯಂತ ಜಾಗರೂಕತೆಯಿಂದ ಕೆಲಸ ನಿರ್ವಹಿಸಬೇಕು. ಬೇಸಿಗೆ ಕಾಲವಾಗಿದ್ದರಿಂದ ಬಿಸಿಲು ಹೆಚ್ಚಾಗಿರುತ್ತದೆ. ಈ ಸಂದರ್ಭದಲ್ಲಿ ಅಧಿಕಾರಿಗಳು ಹಾಗೂ ಸಿಬ್ಬಂದಿ ತಮ್ಮ ಆರೋಗ್ಯದ ಕಡೆಯು ಕಾಳಜಿವಹಿಸಬೇಕು ಎಂದರು.

ಚುನಾವಣೆಯು ಹತ್ತಿರವಾಗುತ್ತಿದ್ದು, ಜಿಲ್ಲಾ ವ್ಯಾಪ್ತಿ ಬರುವ ಎಲ್ಲ ಚೆಕ್ ಪೋಸ್ಟ್ ಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು ಎಚ್ಚರಿಕೆಯಿಂದ ಕೆಲಸ ಮಾಡಿ, ಅಕ್ರಮ ವಸ್ತುಗಳು ಹಾಗೂ ಹಣ ಸಾಗಣೆ ಆಗದಂತೆ ಎಚ್ಚರವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಈ ತರಬೇತಿಯಲ್ಲಿ ವಾಣಿಜ್ಯ ಇಲಾಖೆಯ ಜಂಟಿ ಆಯುಕ್ತ ಕಂಬಣ್ಣ. ಡಿ,ಎಕ್ಸೈಸ್ ಇಲಾಖೆಯ ಉಪ ಅಧೀಕ್ಷಕ ಮೋಹನ್, ಪೊಲೀಸ್ ಇಲಾಖೆಯ ಇನ್ಸ್ಪೆಕ್ಟರ್ ಆದ ಕಾಂತರಾಜು ಸೇರಿದಂತೆ ಇನ್ನಿತರ ಜಿಲ್ಲಾಮಟ್ಟದ ಅಧಿಕಾರಿಗಳು ಉಪಸ್ಥಿತರಿದ್ದರು.

ಇದನ್ನೂಓದಿ:ಶಿವರಾಜ್ ಕುಮಾರ್ ಅಭಿನಯದ ಚಿತ್ರಗಳು: ಜಾಹೀರಾತಿಗೆ ನಿರ್ಬಂಧ ಹಾಕಲು ಚುನಾವಣಾ ಆಯೋಗಕ್ಕೆ ಬಿಜೆಪಿ ಒತ್ತಾಯ - Loksabha election

ETV Bharat Logo

Copyright © 2024 Ushodaya Enterprises Pvt. Ltd., All Rights Reserved.