ETV Bharat / state

ತುಮಕೂರು: ದೇವಸ್ಥಾನದಲ್ಲಿ ದೀಪ ಹಚ್ಚುತ್ತಿದ್ದ ವೇಳೆ ಬಟ್ಟೆಗೆ ಬೆಂಕಿ ತಗುಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು - Student death in Tumakuru

ಸುಟ್ಟ ಗಾಯಗಳೊಂದಿಗೆ ಆಸ್ಪತ್ರೆಗೆ ದಾಖಲಾಗಿದ್ದ ಬಾಲಕಿ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾಳೆ.

Student died after her clothes caught fire and injured in Tumakuru
ಬೆಂಕಿ ತಗುಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಸಾವು
author img

By ETV Bharat Karnataka Team

Published : Mar 19, 2024, 8:02 PM IST

ತುಮಕೂರು: ಶಾಲೆಯ ಸಮೀಪದ ದೇವಸ್ಥಾನದಲ್ಲಿ ದೀಪ ಹಚ್ಚುತ್ತಿದ್ದಾಗ ಬಟ್ಟೆಗೆ ಬೆಂಕಿ ತಗುಲಿ ಗಾಯಗೊಂಡಿದ್ದ ವಿದ್ಯಾರ್ಥಿನಿ ಮೃತಪಟ್ಟಿರುವ ಘಟನೆ ತುಮಕೂರು ಜಿಲ್ಲೆ ಶಿರಾ ತಾಲ್ಲೂಕು ಗೌಡಗೆರೆ ಹೋಬಳಿಯಲ್ಲಿ ನಡೆದಿದೆ. ಮೇಳಕೋಟೆ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಒಂದನೇ ತರಗತಿಯಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ದೀಕ್ಷಾ ಮೃತಪಟ್ಟವಳು.

ಶಾಲೆಯಲ್ಲಿ ಮಧ್ಯಾಹ್ನ ಊಟದ ವಿರಾಮದ ವೇಳೆ ಬಾಲಕಿ ಶಾಲೆಯ ಪಕ್ಕದಲ್ಲೇ ಇರುವ ದೇವಾಲಯದಲ್ಲಿ ದೀಪ ಹಚ್ಚಲು ಹೋಗಿದ್ದಳು. ದೇವಸ್ಥಾನದಲ್ಲಿ ದೀಪ ಹಚ್ಚುತ್ತಿದ್ದ ವೇಳೆ ಬಾಲಕಿಯ ಬಟ್ಟೆಗೆ ಬೆಂಕಿ ಹೊತ್ತಿಕೊಂಡು, ಮೈಮೇಲೆ ಸುಟ್ಟ ಗಾಯಗಳಾಗಿದ್ದವು. ಮಾರ್ಚ್​ 13 ರಂದು ಘಟನೆ ನಡೆದಿತ್ತು. ಆಕೆಯನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಆಕೆಯನ್ನು ಬೆಂಗಳೂರಿನ ಆಸ್ಪತ್ರೆಗೂ ದಾಖಲಿಸಲಾಗಿತ್ತು. ಆದರೆ ಮಂಗಳವಾರ ಬಾಲಕಿ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾಳೆ.

ಶಿಕ್ಷಕರ ವಿರುದ್ಧ ಪೋಷಕರ ಆಕ್ರೋಶ: ಘಟನೆ ನಡೆದ ಬೆನ್ನಲ್ಲೇ ಊರಿನವರು ಹಾಗೂ ಪೋಷಕರು ಶಿಕ್ಷಕರ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದರು. ಬಾಲಕಿಗೆ ದೇವಸ್ಥಾನಕ್ಕೆ ಹೋಗಲು ಅವಕಾಶ ಮಾಡಿಕೊಟ್ಟಿದ್ದು ಯಾಕೆ? ಮಕ್ಕಳು ಶಾಲೆಗೆ ಹೋದ ಮೇಲೆ ಶಾಲೆ ಬಿಡುವವರೆಗೆ ಶಿಕ್ಷಕರ ಜವಾಬ್ದಾರಿಯಲ್ಲವೇ? ಎಂದು ಜನರು ಪ್ರಶ್ನೆ ಮಾಡಿದ್ದರು.

ಮಾಹಿತಿ ತಿಳಿಯುತ್ತಿದ್ದಂತೆ ಬಿಇಒ ಕೃಷ್ಣಪ್ಪ ಅವರು ಶಾಲೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದರು. ನಾಲ್ವರು ಪುಟ್ಟ ಮಕ್ಕಳು ಮಧ್ಯಾಹ್ನದ ಹೊತ್ತು ಯಾರಿಗೂ ತಿಳಿಯದಂತೆ ಶಾಲೆಯಿಂದ ಹೊರಗೆ ಹೋಗಿರುವುದಕ್ಕೆ ಶಿಕ್ಷಕರ ಬೇಜವಾಬ್ದಾರಿಯೇ ಕಾರಣ ಎಂದು ಹೇಳಿದ್ದರು.

"ಶಾಲೆಯಲ್ಲಿ ಒಂದರಿಂದ ಏಳನೇ ತರಗತಿವರೆಗೆ ಸುಮಾರು 75 ವಿದ್ಯಾರ್ಥಿಗಳು ಕಲಿಯುತ್ತಿದ್ದಾರೆ. ಒಂದು ತರಗತಿಯಲ್ಲಿ ಸರಾಸರಿ 11 ವಿದ್ಯಾರ್ಥಿಗಳು ಮಾತ್ರ ಇದ್ದಾರೆ. ಇವರಿಗೆ ಪಾಠ ಮಾಡಲು ನಾಲ್ಕು ಜನ ಶಿಕ್ಷಕರಿದ್ದಾರೆ. ಅವರಲ್ಲಿ ಇಬ್ಬರು ಸರ್ಕಾರಿ ಸೇವೆ, ಇಬ್ಬರು ಗುತ್ತಿಗೆ ಆಧಾರದ ಶಿಕ್ಷಕರು. ‌ಇಷ್ಟು ಜನ ಶಿಕ್ಷಕರಿದ್ದರೂ ಮಕ್ಕಳ ಮೇಲೆ ನಿಗಾ ವಹಿಸದೆ ಇರುವುದು ತಪ್ಪು ಎಂಬ ಕಾರಣ ನೀಡಿ ಎಲ್ಲಾ ಶಿಕ್ಷಕರನ್ನು ಸೇವೆಯಿಂದ ಅಮಾನತು ಮಾಡಲಾಗಿದೆ" ಎಂದು ಮಾಹಿತಿ ನೀಡಿದ್ದರು.

ಇದನ್ನೂ ಓದಿ: ಹೊಸಕೋಟೆ: ಶಾಲೆಗೆ ಹೋಗಿದ್ದ ಬಾಲಕಿ ಶವವಾಗಿ ಪತ್ತೆ; ಕೊಲೆ ಆರೋಪ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.