ETV Bharat / state

ಕಾಲೇಜುಗಳ ಶುಲ್ಕ ಹೆಚ್ಚಳ ಖಂಡಿಸಿ ಮಂಗಳೂರು ವಿವಿ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ

ಮಂಗಳೂರು ವಿವಿ ವಿರುದ್ಧ ಸಿಡಿದೆದ್ದ ವಿದ್ಯಾರ್ಥಿಗಳಿಗೆ ಉಪಕುಲಪತಿ ಪಿ.ಎಲ್​.ಧರ್ಮ ಅವರು, ಇದೇ ಶನಿವಾರ ವಿವಿ ರಿಜಿಸ್ಟ್ರಾರ್ ಅನ್ನು ಬೆಂಗಳೂರಿಗೆ ಕಳುಹಿಸಿಕೊಡುವ ಭರವಸೆ ನೀಡಿದ ನಂತರ ಪ್ರತಿಭಟನೆ ಕೈಬಿಡಲಾಯಿತು.

STUDENTS PROTEST AGAINST MANGALURU UNIVERSITY TO CONDEMN THE INCREASE IN COLLEGE FEES
ಕಾಲೇಜುಗಳ ಶುಲ್ಕ ಹೆಚ್ಚಳ ಖಂಡಿಸಿ ಮಂಗಳೂರು ವಿವಿ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ (ETV Bharat)
author img

By ETV Bharat Karnataka Team

Published : 3 hours ago

Updated : 2 hours ago

ಕೊಣಾಜೆ: ಮಂಗಳೂರು ವಿವಿ ವಿರುದ್ಧ ವಿದ್ಯಾರ್ಥಿ ಸಮೂಹ ಸಿಡಿದೆದ್ದಿದೆ. ಅಂಕಪಟ್ಟಿಯ ಸಮಸ್ಯೆ, ಅವೈಜ್ಞಾನಿಕ ಕಾಲೇಜುಗಳ ಶುಲ್ಕಗಳ ಹೆಚ್ಚಳ, ಪರೀಕ್ಷಾ ಶುಲ್ಕ ಹೆಚ್ಚಳ ಯುಯುಸಿಎಂಎಸ್​ನಲ್ಲಿರುವ ಗೊಂದಲಗಳು ಮತ್ತು ವಿಶ್ವವಿದ್ಯಾಲಯದಲ್ಲಿರುವ ಹಲವು ಸಮಸ್ಯೆಗಳನ್ನು ಖಂಡಿಸಿ ಎಬಿವಿಪಿ ನೇತೃತ್ವದಲ್ಲಿ ಕೊಣಾಜೆ ಮಂಗಳಗಂಗೋತ್ರಿಯ ಆಡಳಿತ ಕಚೇರಿ ಎದುರುಗಡೆ ಇಂದು ಬೃಹತ್ ಪ್ರತಿಭಟನೆ ನಡೆಯಿತು.

ಜಿಲ್ಲೆಯ ವಿವಿಧ ಕಾಲೇಜಿನಿಂದ ಪ್ರತಿಭಟನೆಗೆ ಆಗಮಿಸಿರುವ ವಿದ್ಯಾರ್ಥಿಗಳು ಮಂಗಳೂರು ವಿಶ್ವವಿದ್ಯಾಲಯದ ಕುಲಪತಿಗಳ ಕಚೇರಿಗೆ ಮುತ್ತಿಗೆ ಹಾಕಲು ನಿರ್ಧರಿಸಿದರು. ಬಸ್ ಮೂಲಕ ತಂಡೋಪತಂಡವಾಗಿ ಆಗಮಿಸಿದ್ದ ವಿದ್ಯಾರ್ಥಿಗಳಿಗೆ ವಿವಿ ಆಡಳಿತ ಕಚೇರಿ ಬಳಿ ಬ್ಯಾರಿಕೇಡ್ ಹಾಕಿ ತಡೆಹಿಡಿಯಲಾಗಿತ್ತು. ಆರಂಭದಲ್ಲಿ ಕಚೇರಿ ಎದುರಿನ ರಸ್ತೆಯಲ್ಲಿ ಘೋಷಣೆಗಳನ್ನು ಕೂಗಿದರು. ಬಳಿಕ ಬ್ಯಾರಿಕೇಡ್ ತಳ್ಳಿ ಒಳ ನುಗ್ಗಿದ ಪ್ರತಿಭಟನಾಕಾರರು ಆಡಳಿತ ಕಚೇರಿಯ ಒಳಗೆ ನುಗ್ಗಲು ಪ್ರಯತ್ನಿಸಿದರು.

ಕಾಲೇಜುಗಳ ಶುಲ್ಕ ಹೆಚ್ಚಳ ಖಂಡಿಸಿ ಮಂಗಳೂರು ವಿವಿ ವಿರುದ್ಧ ವಿದ್ಯಾರ್ಥಿಗಳ ಪ್ರತಿಭಟನೆ (ETV Bharat)

ಈ ಸಂದರ್ಭ ವಿದ್ಯಾರ್ಥಿಗಳು ಒಳ ಹೋಗದಂತೆ ಪೊಲೀಸರು ತಡೆಯೊಡ್ಡಿದರು. ಈ ನೂಕಾಟ ತಳ್ಳಾಟಗಳ ನಡುವೆ ವಿವಿ ಆಡಳಿತ ಕಚೇರಿಯ ಪ್ರವೇಶ ದ್ವಾರದ ಗಾಜು ಪುಡಿಯಾಗಿದೆ. ಓರ್ವ ಮಹಿಳಾ ಪೊಲೀಸ್ ಕಾನ್ಸ್​ಟೇಬಲ್​​ಗೆ ಗಾಯವಾಗಿದೆ. ಪೊಲೀಸ್ ಸಿಬ್ಬಂದಿಯ ಕೈಗೆ ಗಾಜಿನ ತುಂಡು ತಾಗಿ ಗಾಯವಾಗಿದೆ. ಇದೇ ವೇಳೆ ಓರ್ವ ವಿದ್ಯಾರ್ಥಿ ಕೈಗೂ ಗಾಯವಾಗಿದೆ.

ಘಟನೆಯಿಂದ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ವಿವಿ ಉಪಕುಲಪತಿ ಪಿ.ಎಲ್.ಧರ್ಮ ಪ್ರತಿಭಟನಾನಿರತ ವಿದ್ಯಾರ್ಥಿಗಳ ವಿರುದ್ಧ ಅಸಮಾಧಾನ ವ್ಯಕ್ತಪಡಿಸಿದರು. "ಕಾಲೇಜಿನ ಸ್ವತ್ತಿಗೆ ಹಾನಿ ಎಸಗಿರುವುದು ಒಳ್ಳೆಯ ನಡೆ ಅಲ್ಲ. ಇಂತಹ ಪ್ರವೃತ್ತಿಯನ್ನು ನಾವು ಯಾವುದೇ ಕಾರಣಕ್ಕೆ ಸಹಿಸಲ್ಲ. ಶಾಂತಿಯುತ ಪ್ರತಿಭಟನೆ ಹೆಸರಲ್ಲಿ ಇಂಥದ್ದು ಮಾಡಬೇಡಿ" ಎಂದು ಆಕ್ರೋಶ ವ್ಯಕ್ತಪಡಿಸಿದರು.

ವಿದ್ಯಾರ್ಥಿಗಳ ಸಮಸ್ಯೆ ಆಲಿಸಿ ಮನವಿ ಸ್ವೀಕರಿಸಿದ ಉಪಕುಲಪತಿ, ಬಳಿಕ ವಿದ್ಯಾರ್ಥಿಗಳಿಗೆ ವಿವಿಯಲ್ಲಿರುವ ಸಮಸ್ಯೆಗಳ ಬಗ್ಗೆ ವಿವರಣೆ ನೀಡಿದರು. ಉಪಕುಲಪತಿ ಉತ್ತರಕ್ಕೆ ವಿದ್ಯಾರ್ಥಿಗಳ ಅಸಮಾಧಾನ ಕೇಳಿ ಬಂದ ಹಿನ್ನೆಲೆಯಲ್ಲಿ ಮನವಿ ಪಡೆದು ಸರ್ಕಾರಕ್ಕೆ ಕಳುಹಿಸುವುದಾಗಿ ಹೇಳಿದರು. ಸರಿಯಾದ ದಿನಾಂಕ ಕೊಡಿ ಎಂದು ಕೇಳಿದ ವಿದ್ಯಾರ್ಥಿಗಳು, ಸಂಜೆಯೊಳಗೆ ಸಮಸ್ಯೆ ಬಗೆಹರಿಸದೇ ಇದ್ದರೆ ಉಗ್ರ ಹೋರಾಟದ ಎಚ್ಚರಿಕೆ ನೀಡಿದರು.

ಇಂದು ನಡೆದ ಸಿಂಡಿಕೇಟ್ ಸಭೆಯಲ್ಲಿ ಚರ್ಚಿಸಿ ಸಂಜೆಯೊಳಗೆ ನಿರ್ಧಾರ ಹೇಳುವುದಾಗಿ ತೆರಳಿದ ಉಪಕುಲಪತಿಗಳ ನಡೆಯನ್ನು ಸಮರ್ಥಿಸದ ವಿದ್ಯಾರ್ಥಿಗಳು ಹೋರಾಟ ಮುಂದುವರಿಸಿದ ಬೆನ್ನಲ್ಲೇ ಎಸಿಪಿ ಧನ್ಯ ನಾಯಕ್ ಮಧ್ಯಪ್ರವೇಶಿಸಿದರು. ಕೊನೆಗೆ ಸಿಂಡಿಕೇಟ್ ಸದಸ್ಯರ ಜೊತೆಗೆ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಪಿ.ಎಲ್ ಧರ್ಮ, ಇದೇ ಶನಿವಾರ ವಿವಿ ರಿಜಿಸ್ಟ್ರಾರ್ ಅನ್ನು ಬೆಂಗಳೂರಿಗೆ ಕಳುಹಿಸಿಕೊಡುವ ಭರವಸೆ ನೀಡಿದರು. ನಂತರ ವಿದ್ಯಾರ್ಥಿಗಳು ಪ್ರತಿಭಟನೆ ಕೈ ಬಿಟ್ಟರು.

ಇದನ್ನೂ ಓದಿ: ನೀರಿನ ಹೆಡ್​ ಟ್ಯಾಂಕರ್​ ಹತ್ತಿ ಎಸ್​ಐ ನೇಮಕಾತಿ ವಿರುದ್ಧ ಅಭ್ಯರ್ಥಿಗಳ ಪ್ರತಿಭಟನೆ

Last Updated : 2 hours ago
ETV Bharat Logo

Copyright © 2024 Ushodaya Enterprises Pvt. Ltd., All Rights Reserved.