ETV Bharat / state

ಉ.ಕ ಸಕ್ಕರೆ ಕಾರ್ಖಾನೆಗಳಲ್ಲಿ ನಾಳೆಯಿಂದ ಕಬ್ಬು ನುರಿಸುವಿಕೆ, 3,400 ರೂ. ಬೆಲೆ ನಿಗದಿ: ಸಚಿವ ಶಿವಾನಂದ ಪಾಟೀಲ - SUGAR FACTORY

ಉತ್ತರ ಕರ್ನಾಟಕ ಸಕ್ಕರೆ ಕಾರ್ಖಾನೆಗಳಲ್ಲಿ ನವೆಂಬರ್ 8 ರಿಂದ ಕಬ್ಬು ನುರಿಸುವಿಕೆ ಪ್ರಾರಂಭಿಸಲಾಗುತ್ತಿದೆ. ಈ ಬಾರಿ ಕಬ್ಬಿಗೆ ಪ್ರತಿ ಟನ್‌ಗೆ 3,400 ರೂ. ಬೆಲೆ ನಿಗದಿಪಡಿಸಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ ಮಾಹಿತಿ ನೀಡಿದರು.

ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ನುರಿಸುವ ಬಗ್ಗೆ ಸಚಿವ ಶಿವಾನಂದ ಪಾಟೀಲ ಮಾಹಿತಿ
ಸಕ್ಕರೆ ಕಾರ್ಖಾನೆಗಳಲ್ಲಿ ಕಬ್ಬು ನುರಿಸುವ ಬಗ್ಗೆ ಸಚಿವ ಶಿವಾನಂದ ಪಾಟೀಲ ಮಾಹಿತಿ (ETV Bharat)
author img

By ETV Bharat Karnataka Team

Published : Nov 7, 2024, 1:23 PM IST

ಹುಬ್ಬಳ್ಳಿ: ಉತ್ತರ ಕರ್ನಾಟಕದ ಸಕ್ಕರೆ ಕಾರ್ಖಾನೆಗಳಲ್ಲಿ ನವೆಂಬರ್ 8 ರಿಂದ ಕಬ್ಬು ನುರಿಸುವಿಕೆ ಆರಂಭಿಸಲಾಗುವುದು ಎಂದು ಜವಳಿ, ಕಬ್ಬು ಅಭಿವೃದ್ಧಿ ಮತ್ತು ಸಕ್ಕರೆ ಹಾಗೂ ಕೃಷಿ ಮಾರುಕಟ್ಟೆ ಸಚಿವ ಶಿವಾನಂದ ಪಾಟೀಲ ಹೇಳಿದರು.

ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿ ಸಚಿವರು, ಬೆಂಗಳೂರಲ್ಲಿ ಆಗಸ್ಟ್​ನಲ್ಲಿ ನಡೆದಿದ್ದ ದಕ್ಷಿಣ ಭಾರತದ ಸಕ್ಕರೆ ಕಾರ್ಖಾನೆಗಳ ಒಕ್ಕೂಟದ ಸಭೆಯಲ್ಲಿ ನವೆಂಬರ್ 15ರಿಂದ ಕಬ್ಬು ನುರಿಸುವಿಕೆ ಆರಂಭಿಸುವ ಕುರಿತು ನಿರ್ಧಾರ ಕೈಗೊಳ್ಳಲಾಗಿತ್ತು. ಆದರೆ ರೈತರು ಮತ್ತು ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳ ಮನವಿ ಮೇರೆಗೆ ಒಂದು ವಾರ ಮುಂಚಿತವಾಗಿ ಆರಂಭಿಸುವ ನಿರ್ಧಾರ ಕೈಗೊಳ್ಳಲಾಗಿದೆ ಎಂದರು.

ಉತ್ತರ ಕರ್ನಾಟಕ ಮತ್ತು ದಕ್ಷಿಣ ಕರ್ನಾಟಕದಲ್ಲಿ ಕಬ್ಬಿನ ಹಂಗಾಮಿನಲ್ಲಿ ವ್ಯತ್ಯಾಸವಾಗಲಿದೆ. ದಕ್ಷಿಣ ಕರ್ನಾಟಕದ ಸಕ್ಕರೆ ಕಾರ್ಖಾನೆಗಳು ಈಗಾಗಲೇ ಕಾರ್ಯಾರಂಭ ಮಾಡಿವೆ. ಉತ್ತರ ಕರ್ನಾಟಕ ಮತ್ತು ಮಹಾರಾಷ್ಟ್ರ ರಾಜ್ಯದಲ್ಲಿ ಏಕಕಾಲಕ್ಕೆ ಸಕ್ಕರೆ ಕಾರ್ಖಾನೆಗಳು ಕಾರ್ಯಾರಂಭ ಮಾಡುವುದು ರೂಢಿಯಲ್ಲಿದೆ. ಈ ಮೊದಲಿನ ನಿರ್ಧಾರದ ಬದಲಿಗೆ ನವೆಂಬರ್ 8ರಿಂದಲೇ ಕಬ್ಬು ನುರಿಸುವಿಕೆ ಆರಂಭಿಸಬೇಕು ಎಂದು ಮಹಾರಾಷ್ಟ್ರ ಸರ್ಕಾರಕ್ಕೂ ಮನವಿ ಮಾಡಲಾಗಿತ್ತು. ಆದರೆ ಅಲ್ಲಿ ವಿಧಾನಸಭಾ ಚುನಾವಣೆ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಈ ಮೊದಲಿನ ನಿರ್ಧಾರ ಬದಲಿಸಲು ಸಾಧ್ಯವಿಲ್ಲ ಎಂದು ತಿಳಿಸಿದರು. ರಾಜ್ಯದ ಕಬ್ಬು ಬೆಳೆಗಾರರ ಹಿತದೃಷ್ಟಿಯಿಂದ ನಾವು ಒಂದು ವಾರ ಮುಂಚಿತವಾಗಿ ಕಬ್ಬು ನುರಿಸುವಿಕೆ ಆರಂಭಿಸುವ ನಿರ್ಧಾರ ಮಾಡಿದ್ದೇವೆ ಎಂದು ಸ್ಪಷ್ಟನೆ ನೀಡಿದರು.

ದಾವಣಗೆರೆ ಮತ್ತು ಹಾವೇರಿ ಜಿಲ್ಲೆಗಳು ಮಧ್ಯ ಕರ್ನಾಟಕದಲ್ಲಿ ಬರುತ್ತವೆ. ಈ ಜಿಲ್ಲೆಗಳ ಸಕ್ಕರೆ ಕಾರ್ಖಾನೆಗಳು ದಕ್ಷಿಣ ಕರ್ನಾಟಕದ ಸಕ್ಕರೆ ಕಾರ್ಖಾನೆಗಳ ಸಮಯದಲ್ಲೇ ಆರಂಭ ಮಾಡಿವೆ. ಉತ್ತರ ಕರ್ನಾಟಕದ ಕಬ್ಬು ಬೆಳೆಗಾರರು ಮತ್ತು ಸಕ್ಕರೆ ಕಾರ್ಖಾನೆಗಳ ಆಡಳಿತ ಮಂಡಳಿಗಳು, ನಮ್ಮ ಭಾಗದಲ್ಲಿ ಕಬ್ಬು ಕಟಾವಿಗೆ ಬಂದಿದೆ. ಹೀಗಾಗಿ ಮುಂಚಿತವಾಗಿ ಕ್ರಷಿಂಗ್ ಆರಂಭಿಸಬೇಕು ಎಂದು ಮನವಿ ಮಾಡಿದ್ದವು ಎಂದು ತಿಳಿಸಿದರು.

3,400 ರೂ. ಬೆಲೆ: ರಾಜ್ಯದಲ್ಲಿ ಒಟ್ಟು 80 ಸಕ್ಕರೆ ಕಾರ್ಖಾನೆಗಳು ಕಾರ್ಯನಿರ್ವಹಿಸುತ್ತಿದ್ದು, ಸುಮಾರು 7.5 ಲಕ್ಷ ಹೆಕ್ಟೇರ್ ಕ್ಷೇತ್ರದಲ್ಲಿ ಕಬ್ಬು ಬೆಳೆಯಲಾಗುತ್ತಿದೆ. ಈ ಬಾರಿ ಕಬ್ಬಿಗೆ ಪ್ರತಿ ಟನ್‌ಗೆ 3,400 ರೂ. ಬೆಲೆ ನಿಗದಿಪಡಿಸಲಾಗಿದೆ. ಕಳೆದ ಹಂಗಾಮಿನಲ್ಲಿ 3,150 ರೂ. ನಿಗದಿಪಡಿಸಲಾಗಿತ್ತು. ಸರಾಸರಿ ಇಳುವರಿ ಪ್ರಮಾಣ 10.5ರಷ್ಟಿದೆ ಎಂದು ತಿಳಿಸಿದರು.

ಖರೀದಿ ಅವಧಿ ವಿಸ್ತರಣೆ: ಬೆಂಬಲ ಬೆಲೆಯಲ್ಲಿ ಸೋಯಾಬಿನ್ ಮತ್ತು ಹೆಸರು ಕಾಳು ಖರೀದಿ ಅವಧಿಯನ್ನು ವಿಸ್ತರಣೆ ಮಾಡಲಾಗಿದೆ ಎಂದು ಸಚಿವ ಶಿವಾನಂದ ಪಾಟೀಲ ಹೇಳಿದರು.

ಇದುವರೆಗೆ ಸೋಯಾಬಿನ್ 570 ಕ್ವಿಂಟಲ್ ಮಾತ್ರ ಖರೀದಿ ಮಾಡಲಾಗಿದ್ದು, ಇನ್ನೂ ರೈತರ ಬಳಿ ದಾಸ್ತಾನು ಇರುವ ಕಾರಣ ನ.20ರ ವರೆಗೆ, ಹೆಸರು ಕಾಳು ಖರೀದಿ ಅವಧಿಯನ್ನು ನ.18ರ ವರೆಗೆ ವಿಸ್ತರಣೆ ಮಾಡಲಾಗಿದೆ. ಇದುವರೆಗೆ ಪ್ರತಿ ಕ್ವಿಂಟಾಲ್‌ಗೆ 8,682 ರೂ. ದರದಲ್ಲಿ 1.93 ಲಕ್ಷ ಕ್ವಿಂಟಾಲ್ ಹೆಸರು ಕಾಳು ಖರೀದಿ ಮಾಡಲಾಗಿದೆ. ಹೆಚ್ಚಿನ ದಾಸ್ತಾನು ಇರುವ ಕಾರಣ ಖರೀದಿ ಪ್ರಮಾಣವನ್ನು ಹೆಚ್ಚಳ ಮಾಡಲಾಗಿದ್ದು, 38,320 ಟನ್ ಖರೀದಿ ಮಾಡಲು ನಿರ್ಧರಿಸಲಾಗಿದೆ. ಈ ಮೊದಲು 22,215 ಟನ್ ಖರೀದಿ ಮಿತಿಗೊಳಿಸಲಾಗಿತ್ತು ಎಂದು ವಿವರಿಸಿದರು.

ಬೆಂಬಲ ಬೆಲೆಯಲ್ಲಿ ಒಟ್ಟು 6.81 ಲಕ್ಷ ಕ್ವಿಂಟಾಲ್ ಕೊಬ್ಬರಿ ಖರೀದಿ ಮಾಡಲಾಗಿದೆ. ಬೆಲೆ ಕುಸಿದಾಗ ಪ್ರತಿ ಕ್ವಿಂಟಾಲ್‌ಗೆ 13,500 ರೂ.ನಂತೆ ಕೊಬ್ಬರಿ ಖರೀದಿ ಮಾಡಲಾಯಿತು. ಬೆಂಬಲ ಬೆಲೆ ಖರೀದಿ ಆರಂಭಿಸುತ್ತಿದ್ದಂತೆ ಮಾರುಕಟ್ಟೆಯಲ್ಲಿ ಕೊಬ್ಬರಿ ಬೆಲೆ 15 ಸಾವಿರ ರೂ.ವರೆಗೆ ಏರಿಕೆಯಾಗಿತ್ತು. ಇದೇ ಮೊದಲ ಬಾರಿಗೆ ಬೆಂಬಲ ಬೆಲೆಯಲ್ಲಿ ಎಂಟು ಕೃಷಿ ಉತ್ಪನ್ನಗಳ ಖರೀದಿ ಮಾಡುತ್ತಿರುವುದು ವಿಶೇಷ. ಎಪಿಎಂಸಿ ಕಾಯ್ದೆ ಮರುಸ್ಥಾಪನೆಯಿಂದ ರೈತರಿಗೆ ಅನುಕೂಲವಾಗಿದ್ದು, ಶೋಷಣೆ ಮುಕ್ತವಾಗಿದೆ. 2023-24ನೇ ಸಾಲಿನಲ್ಲಿ ಅಕ್ಟೋಬರ್‌ವರೆಗೆ 103 ಕೋಟಿ ರೂ. ಮಾರುಕಟ್ಟೆ ಶುಲ್ಕ ಸಂಗ್ರಹವಾಗಿತ್ತು. 2024-25ನೇ ಸಾಲಿನ ನವೆಂಬರ್ ಅಂತ್ಯದ ವೇಳೆಗೆ 205 ಕೋಟಿ ರೂ. ಶುಲ್ಕ ಸಂಗ್ರಹವಾಗಿದೆ ಎಂದು ಸಚಿವರು ಮಾಹಿತಿ ನೀಡಿದರು.

ಇದನ್ನೂ ಓದಿ: ಇಲ್ಲಿ ಅಗ್ಗ..ಅಗ್ಗ..ಅಗ್ಗ: ಕಿಲೋ ಈರುಳ್ಳಿಗೆ ಕೇವಲ 15 ರೂ.!

ಇದನ್ನೂ ಓದಿ: ಒಣಭೂಮಿಯಲ್ಲಿ ಮಹಾರಾಷ್ಟ್ರದ 'ಪಂದ್ರಾ ಪಪ್ಪಾಯಿ' ಬೆಳೆದು ₹10 ಲಕ್ಷ ಲಾಭಗಳಿಸಿದ ದಾವಣಗೆರೆ ರೈತ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.