ETV Bharat / state

ಆತ್ಮಹತ್ಯೆಗೆ ಪ್ರಚೋದನೆ ಪ್ರಕರಣ: 60 ದಿನಗಳ ಬಳಿಕ ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಲಾಗದು - ಹೈಕೋರ್ಟ್ - SUICIDE ABETMENT CASE

ಉದ್ಯಮಿ ಬಿ.ಎಂ.ಮುಮ್ತಾಜ್ ಅಲಿ ಆತ್ಮಹತ್ಯೆ ಪ್ರಕರಣ: ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡುವಂತೆ ಕೋರಿ ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿದ ಹೈಕೋರ್ಟ್.

ಬಿ.ಎಂ.ಮುಮ್ತಾಜ್ ಅಲಿ, ಹೈಕೋರ್ಟ್, SUICIDE ABETMENT CASE
ಬಿ.ಎಂ.ಮುಮ್ತಾಜ್ ಅಲಿ, ಹೈಕೋರ್ಟ್ (ETV Bharat)
author img

By ETV Bharat Karnataka Team

Published : 6 hours ago

ಬೆಂಗಳೂರು: ಹತ್ತು ವರ್ಷಗಳಿಗೂ ಕಡಿಮೆ ಅವಧಿಗೆ ಶಿಕ್ಷೆ ವಿಧಿಸಬಹುದಾದ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಿಗಳನ್ನು ಪ್ರಕರಣ ದಾಖಲಾದ 60 ದಿನಗಳ ಬಳಿಕ ಪೊಲೀಸ್ ವಶಕ್ಕೆ ನೀಡಲಾಗದು ಎಂದು ಹೈಕೋರ್ಟ್ ಅಭಿಪ್ರಾಯಪಟ್ಟು, ಮಾಜಿ ಶಾಸಕ ಮೊಯ್ದಿನ್ ಬಾವ ಸಹೋದರ ಬಿ.ಎಂ.ಮುಮ್ತಾಜ್ ಅಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪಿಗಳನ್ನು ಪೊಲೀಸ್ ವಶಕ್ಕೆ ಕೋರಿ ತನಿಖಾಧಿಕಾರಿಗಳು ಸಲ್ಲಿಸಿದ್ದ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

ಪ್ರಕರಣ ದಾಖಲಾದ 60 ದಿನಗಳ ಬಳಿಕ ಆರೋಪಿಗಳನ್ನು ಪೊಲೀಸ್ ವಶಕ್ಕೆ ನೀಡಬೇಕು ಎಂದು ಕೋರಿ ಮಂಗಳೂರಿನ ಕಾವೂರು ಪೊಲೀಸರು ಮತ್ತು ಮತ್ತು ಪ್ರಕರಣದ ದೂರುದಾರ ಹೈದರ್ ಅಲಿ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿದೆ.

ಪೊಲೀಸ್ ವಶಕ್ಕೆ ಪಡೆಯಲು ಕೊಲೆ ಪ್ರಕರಣದಲ್ಲಿ (ಹತ್ತು ವರ್ಷಕ್ಕೂ ಮೇಲ್ಪಟ್ಟು ಶಿಕ್ಷೆ) 90 ದಿನಗಳವರೆಗೂ ತನಿಖೆಗೆ ಅವಕಾಶವಿರಲಿದೆ. ಈ ಸಂದರ್ಭದಲ್ಲಿ ಪ್ರಕರಣ ದಾಖಲಾದ 60 ದಿನಗಳವರೆಗೂ ಆರೋಪಿಗಳನ್ನು 15 ದಿನಗಳ ಕಾಲ ಪೊಲೀಸ್ ವಶದಲ್ಲಿಟ್ಟುಕೊಳ್ಳುವುದಕ್ಕೆ ಅವಕಾಶವಿದೆ. ಆದರೆ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಗಳಲ್ಲಿ(ಹತ್ತುವರ್ಷದೊಳಗಿನ ಶಿಕ್ಷೆ) 60 ದಿನಗಳ ಕಾಲ ತನಿಖೆಗೆ ಅವಕಾಶವಿರಲಿದ್ದು, ಈ ಸಂಬಂಧ ಪ್ರಕರಣ ದಾಖಲಾಗಿದ 40 ದಿನಗಳ ಅವಧಿಯಲ್ಲಿ 15 ದಿನಗಳವರೆಗೂ ಪೊಲೀಸ್ ವಶಕ್ಕೆ ಪಡೆದುಕೊಳ್ಳುವುದಕ್ಕೆ ಅವಕಾಶವಿರಲಿದೆ. ಆದರೆ, ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ಬಿಎನ್‌ಎಸ್‌ಎಸ್ 108 (ಈ ಹಿಂದೆ ಐಪಿಸಿ 306) ಪ್ರಕಾರ ಆತ್ಮಹತ್ಯೆಗೆ ಪ್ರಚೋದನೆ ನೀಡುವ ವ್ಯಕ್ತಿಗೆ 10 ವರ್ಷಗಳ ವರೆಗೂ ವಿಸ್ತರಿಸಬಹುದಾದ ಶಿಕ್ಷೆ ವಿಧಿಸಬಹುದಾಗಿದೆ. ಶಿಕ್ಷೆ ವಿಧಿಸುವುದು ವಿಚಾರಣಾ ನ್ಯಾಯಾಲಯದ ವಿವೇಚನೆಗೆ ಬಿಟ್ಟಿದ್ದಾಗಿದೆ. ಇದರ ಅರ್ಥ ಹತ್ತು ವರ್ಷ ಶಿಕ್ಷೆ ವಿಧಿಸಬೇಕು ಎಂದಾಗುವುದಿಲ್ಲ ಎಂದು ತಿಳಿಸಲಾಗಿದೆ ಎಂದು ಪೀಠ ತಿಳಿಸಿದೆ.

ಅಲ್ಲದೆ, ಆತ್ಮಹತ್ಯೆ ಪ್ರಚೋದನೆ ನೀಡಿದ ಆರೋಪದಲ್ಲಿ 10 ವರ್ಷಗಳವರೆಗೂ ಶಿಕ್ಷೆ ವಿಧಿಸಬಹುದಾಗಿದೆ. ಹೀಗಾಗಿ ಆರೋಪಿಗಳನ್ನು ವಶಕ್ಕೆ ನೀಡಬೇಕು ಎಂಬ ಪೊಲೀಸರ ಮನವಿಯನು ನ್ಯಾಯಪೀಠ ತಿರಸ್ಕರಿಸಿದೆ.

ಪ್ರಕರಣದ ಹಿನ್ನೆಲೆ ಏನು?: 2024ರ ಅಕ್ಟೋಬರ್ 6ರಂದು ಉದ್ಯಮಿ ಬಿಎಂ ಮುಮ್ತಾಜ್ ಅಲಿ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಸಂಬಂಧ ಮುಮ್ತಾಜ್ ಅವರ ಸಹೋದರ ಹೈದರ್ ಅಲಿ, ಪ್ರಚೋದನೆ ನೀಡಿರುವುದೇ ಆತ್ಮಹತ್ಯೆಗೆ ಕಾರಣ ಎಂದು ಆರೋಪಿಸಿ ದೂರು ದಾಖಲಿಸಿದ್ದರು. ಪ್ರಕರಣದಲ್ಲಿ ಪೊಲೀಸರು ಆರು ಆರೋಪಿಗಳನ್ನು ಬಂಧಿಸಿದ್ದರು. ಮೂವರು ಆರೋಪಿಗಳನ್ನು ಪೊಲೀಸ್ ವಶಕ್ಕೆ ಕಳುಹಿಸುವ ಮನವಿಯನ್ನು ವಿಚಾರಣಾ ನ್ಯಾಯಾಲಯ ಒಪ್ಪಿಕೊಂಡಿತ್ತು ಮತ್ತು ಎಲ್ಲಾ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು.

ಈ ನಡುವೆ ಪೊಲೀಸರು ಕೆಲವು ಆರೋಪಿಗಳ ಧ್ವನಿ ಮಾದರಿಗಳನ್ನು ಸಂಗ್ರಹಿಸಬೇಕಾಗಿದೆ. ಹೀಗಾಗಿ ಆರೋಪಿಗಳನ್ನು ಮತ್ತೆ ವಶಕ್ಕೆ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ವಿಚಾರಣಾ ನ್ಯಾಯಾಲಯವು ಪ್ರಕರಣದ ತನಿಖೆಯ ಅವಧಿ 60 ದಿನಗಳು ಮಾತ್ರ. ಬಿಎನ್‌ಎಸ್‌ಎಸ್‌ನ ಸೆಕ್ಷನ್ 187ರ ಪ್ರಕಾರ ಅಪರಾಧ ದಾಖಲಾದ 40 ದಿನಗಳು ಮಾತ್ರ ಆರೋಪಿಗಳನ್ನು ಪೊಲೀಸ್ ವಶಕ್ಕೆ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿ ಅರ್ಜಿಯನ್ನು ಡಿಸೆಂಬರ್ 4 ರಂದು ವಜಾಗೊಳಿಸಿ ಆದೇಶಿಸಿತ್ತು.

ಈ ಆದೇಶವನ್ನು ಪ್ರಶ್ನಿಸಿದ ಪೊಲೀಸರು ಮತ್ತು ದೂರುದಾರ, ಪ್ರಕರಣದಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಅಪರಾಧಕ್ಕೆ ಹತ್ತು ವರ್ಷಗಳವರೆಗೂ ಶಿಕ್ಷೆ ವಿಧಿಸಬಹುದಾಗಿದೆ. ಆದ್ದರಿಂದ ತನಿಖೆಯ ಅವಧಿ 90 ದಿನಗಳಾಗಿದ್ದು, ಈ ಅವಧಿಯಲ್ಲಿ ಅಪರಾಧಿಗಳನ್ನು ವಶಕ್ಕೆ ಪಡೆದುಕೊಳ್ಳಬಹುದಾಗಿದೆ. ಹೀಗಾಗಿ ಆರೋಪಿಗಳ ವಶಕ್ಕೆ ನೀಡಬೇಕು ಎಂದು ಕೋರಿದ್ದರು.

ಇದನ್ನೂ ಓದಿ: ಮೊಯ್ದೀನ್ ಬಾವ ಸಹೋದರನ ಆತ್ಮಹತ್ಯೆ ಹಿಂದೆ ಹನಿಟ್ರ್ಯಾಪ್‌ ಆರೋಪ: ಪೊಲೀಸ್ ಕಮಿಷನರ್ ಮಾಹಿತಿ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.