ETV Bharat / state

ರಾಜ್ಯದ ರೈತರಿಗೆ ಕೇಂದ್ರದಿಂದ ಸಿಹಿ ಸುದ್ದಿ: ಉದ್ದು, ಸೋಯಾಬಿನ್​ ಬೆಂಬಲ ಬೆಲೆಯಲ್ಲಿ ಖರೀದಿಗೆ ಅನುಮತಿ - Support price buying center

ರಾಜ್ಯದಲ್ಲಿ ಉದ್ದು ಮತ್ತು ಸೋಯಾಬಿನ್ ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ ಎಂದು ಕೇಂದ್ರ ಸಚಿವ ​ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ.

ಕೇಂದ್ರ ಸಚಿವ ​ಪ್ರಹ್ಲಾದ್ ಜೋಶಿ
ಕೇಂದ್ರ ಸಚಿವ ​ಪ್ರಹ್ಲಾದ್ ಜೋಶಿ (ETV Bharat)
author img

By ETV Bharat Karnataka Team

Published : Aug 30, 2024, 11:26 AM IST

ನವದೆಹಲಿ/ಹುಬ್ಬಳ್ಳಿ: "ರಾಜ್ಯದಲ್ಲಿ ಮತ್ತೆರೆಡು ಬೆಳೆಗಳನ್ನು ಬೆಂಬಲ ಬೆಲೆಯಲ್ಲಿ ಖರೀದಿಸಲು ಕೇಂದ್ರ ಸರ್ಕಾರ ಅನುಮತಿ ನೀಡಿದೆ" ಎಂದು ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ತಿಳಿಸಿದ್ದಾರೆ. ರಾಜ್ಯದಲ್ಲಿ ಹೆಸರು, ಸೂರ್ಯಕಾಂತಿ ಜತೆಗೆ ಈಗ ಉದ್ದು ಮತ್ತು ಸೋಯಾಬಿನ್​ ಅನ್ನೂ ಬೆಂಬಲ ಬೆಲೆಯಲ್ಲಿ ಖರೀದಿಸುವಂತೆ ರಾಜ್ಯ ಸರ್ಕಾರಕ್ಕೆ ಕೇಂದ್ರ ನಿರ್ದೇಶಿಸಿದೆ ಎಂದು ಹೇಳಿದ್ದಾರೆ.

ಸಚಿವ ಪ್ರಹ್ಲಾದ್ ಜೋಶಿ ಮಾಹಿತಿ: "ಹೆಸರು ಮತ್ತು ಸೂರ್ಯಕಾಂತಿ"ಗೆ ಬೆಂಬಲ ಬೆಲೆ ಘೋಷಿಸಿ ರಾಜ್ಯದಲ್ಲಿ ಖರೀದಿ ಕೇಂದ್ರ ತೆರೆಯುತ್ತಿದ್ದಂತೆಯೇ ಕೇಂದ್ರ ಕೃಷಿ ಸಚಿವಾಲಯ ಇದೀಗ "ಉದ್ದು ಮತ್ತು ಸೋಯಾಬೀನ್​"ಗೂ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಅನುಮತಿ ನೀಡಿದೆ. ಕರ್ನಾಟಕದಲ್ಲಿ 2024-25ರ ಮುಂಗಾರು ಹಂಗಾಮಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ 19,760 ಮೆಟ್ರಿಕ್​ ಟನ್​ ಉದ್ದು ಹಾಗೂ 1,03,315 ಮೆಟ್ರಿಕ್​ ಟನ್​ ಸೋಯಾಬಿನ್ ಖರೀದಿಗೆ ಕೇಂದ್ರ ಸರ್ಕಾರ ಅಸ್ತು ಎಂದಿದೆ".

"ಮುಕ್ತ ಮಾರುಕಟ್ಟೆಯಲ್ಲಿ ಈ ಬೆಳೆಗಳಿಗೆ ಬೆಲೆ ಕಡಿಮೆ ಇರುವುದರಿಂದ msp ಅಡಿ ಖರೀದಿಸಿ ರೈತರಿಗೆ ಅನುಕೂಲ ಕಲ್ಪಿಸುವ ಉದ್ದೇಶದಿಂದ ಕೇಂದ್ರ ಸರ್ಕಾರ ಈ ಕ್ರಮ ಕೈಗೊಂಡಿದೆ. ರಾಜ್ಯದಲ್ಲಿ 90 ದಿನಗಳ ಅವಧಿಗೆ ಖರೀದಿ ಕೇಂದ್ರ ತೆರೆದು ಬೆಂಬಲ ಬೆಲೆ ಯೋಜನೆಯಡಿ ಉದ್ದು ಮತ್ತು ಸೋಯಾಬೀನ್​​ ಖರೀದಿಸುವಂತೆ ಕೇಂದ್ರ ಕೃಷಿ ಸಚಿವಾಲಯ ರಾಜ್ಯ ಸರ್ಕಾರಕ್ಕೆ ನಿನ್ನೆಯೇ (ಆ.29) ಆದೇಶ ಹೊರಡಿಸಿದೆ".

"ಉದ್ದಿನ ಕಾಳು 7,400 ರೂ. ಮತ್ತು ಸೋಯಾಬಿನ್​ಗೆ 4,892 ರೂ. ಬೆಂಬಲ ಬೆಲೆಯನ್ನು ಕೇಂದ್ರ ಸರ್ಕಾರ ನಿಗದಿಪಡಿಸಿದೆ. ಕಳೆದ ವರ್ಷ 6,950 ರೂ. ಇದ್ದ ಉದ್ದಿನ ಬೆಂಬಲ ಬೆಲೆ ಪ್ರಸಕ್ತ ಮುಂಗಾರು ಹಂಗಾಮಿನಲ್ಲಿ 450 ರೂ. ಹೆಚ್ಚಳ ಕಂಡಿದೆ. 4,600 ದರವಿದ್ದ ಸೋಯಾಬಿನ್ ಬೆಂಬಲ ಬೆಲೆ ಈಗ 292 ರೂ. ಹೆಚ್ಚಳವಾಗಿದೆ" ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ತಕ್ಷಣ ಖರೀದಿ ಕೇಂದ್ರ ತೆರೆಯಲು ಒತ್ತಾಯ: ರಾಜ್ಯ ಸರ್ಕಾರ ತಕ್ಷಣವೇ ರಾಜ್ಯಾದ್ಯಂತ ಬೆಂಬಲ ಬೆಲೆ ಖರೀದಿ ಕೇಂದ್ರಗಳನ್ನು ಆರಂಭಿಸಿ ಹೆಸರು, ಸೂರ್ಯಕಾಂತಿ ಜತೆಗೆ ಉದ್ದು ಮತ್ತು ಸೋಯಾಬಿನ್ ಖರೀದಿ ಪ್ರಕ್ರಿಯೆಗೆ ಚಾಲನೆ ನೀಡಬೇಕೆಂದು ಸಚಿವರು ರಾಜ್ಯ ಸರ್ಕಾರವನ್ನು ಒತ್ತಾಯಿಸಿದ್ದಾರೆ.

ರಾಜ್ಯದ ರೈತರ ಸಂಕಷ್ಟಕ್ಕೆ ಪ್ರಧಾನಿ ಸ್ಪಂದನೆ: ರಾಜ್ಯದ ರೈತರ ಸಮಸ್ಯೆಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಕೃಷಿ ಸಚಿವ ಶಿವರಾಜ್ ಸಿಂಗ್ ಚೌಹಾಣ್​ ನಿರಂತರ ಸ್ಪಂದಿಸುತ್ತಲೇ ಬಂದಿದ್ದಾರೆ. ಇದೀಗ ನಾಲ್ಕು ಬೆಳೆಗಳಿಗೆ ಬೆಂಬಲ ಬೆಳೆ ಖರೀದಿ ಕೇಂದ್ರ ತೆರೆಯಲು ಅನುಮತಿ ನೀಡಿದ್ದಾರೆ ಎಂದ ಪ್ರಹ್ಲಾದ್​ ಜೋಶಿ ಅವರಿಗೆ ಧನ್ಯವಾದ ತಿಳಿಸಿದರು.

ಇದನ್ನೂ ಓದಿ: ಹುಬ್ಬಳ್ಳಿ: ಹೆಸರುಕಾಳು ದರ ಏರಿಕೆ, ರೈತರ ಮೊಗದಲ್ಲಿ ಮೂಡಿದ ಮಂದಹಾಸ - green gram price hike

ETV Bharat Logo

Copyright © 2024 Ushodaya Enterprises Pvt. Ltd., All Rights Reserved.