ಬೆಂಗಳೂರು : ಅಸಹಜ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಆರೋಪಿಯಾಗಿರುವ ವಿಧಾನಪರಿಷತ್ ಸದಸ್ಯ ಡಾ. ಸೂರಜ್ ರೇವಣ್ಣ ಅವರಿಗೆ ಜುಲೈ 18ರ ವರೆಗೆ ನ್ಯಾಯಾಂಗ ಬಂಧನ ವಿಧಿಸಿ ನಗರದ 42ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.
ಎಸ್ಐಟಿ ಕಸ್ಟಡಿ ಅಂತ್ಯವಾದ ಹಿನ್ನೆಲೆಯಲ್ಲಿ ಸೂರಜ್ ರೇವಣ್ಣರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದೇ ವೇಳೆ ಜಾಮೀನು ಕೋರಿ ಸೂರಜ್ ರೇವಣ್ಣ ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನ ನ್ಯಾಯಾಲಯ ನಾಳೆಗೆ ಮುಂದೂಡಿದೆ. ಅಲ್ಲದೆ, ನಾಳೆ ಆಕ್ಷೇಪಣೆ ಸಲ್ಲಿಸುವಂತೆ ಎಸ್ಐಟಿ ಪರ ವಕೀಲರಿಗೆ ಸೂಚಿಸಿದೆ.
ಜೂನ್ 23 ರಂದು ಸೂರಜ್ ರೇವಣ್ಣ ಅವರನ್ನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದ ನ್ಯಾಯಾಧೀಶರ ಮುಂದೆ ಹಾಜರುಪಡಿಸಿದ್ದ ಎಸ್ಐಟಿ ಅಧಿಕಾರಿಗಳು, ಏಳು ದಿನಗಳ ಕಾಲ ಕಸ್ಟಡಿಗೆ ಪಡೆದಿದ್ದರು. ಬಳಿಕ ಎಸ್ಐಟಿಯ ಮನವಿಯ ಮೇರೆಗೆ ಕಸ್ಟಡಿಯನ್ನ 2 ದಿನಗಳ ಕಾಲ ವಿಸ್ತರಿಸಿ ಜುಲೈ 1ರಂದು ಜನಪ್ರತಿನಿಧಿಗಳ ನ್ಯಾಯಾಲಯ ಆದೇಶಿಸಿತ್ತು.
ಇದನ್ನೂ ಓದಿ : ಅಸಹಜ ಲೈಂಗಿಕ ದೌರ್ಜನ್ಯ: ಸೂರಜ್ ರೇವಣ್ಣ ಎಸ್ಐಟಿ ಕಸ್ಟಡಿ ಅವಧಿ ಇಂದು ಅಂತ್ಯ - Suraj Revanna