ETV Bharat / state

ಶಾಸಕ ರಾಜಾ ವೆಂಕಟಪ್ಪ ನಾಯಕ ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ: ಅಧಿವೇಶನ ಮತ್ತೊಂದು ದಿನ ವಿಸ್ತರಣೆ - ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಹೃದಯಾಘಾತದಿಂದ ಇಂದು ನಿಧನರಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಬಜೆಟ್ ಅಧಿವೇಶನದ ಕಲಾಪವನ್ನು ಮತ್ತೊಮ್ಮೆ ಮುಂದೂಡಿಕೆ ಮಾಡಲಾಗುತ್ತಿದೆ.

Etv Bharat
Etv Bharat
author img

By ETV Bharat Karnataka Team

Published : Feb 25, 2024, 4:50 PM IST

ಬೆಂಗಳೂರು: ಒಂದು ದಿನದ ಮಟ್ಟಿಗೆ ಮುಂದೂಡಿಕೆಯಾಗಿದ್ದ ಬಜೆಟ್ ಅಧಿವೇಶನ ಮತ್ತೊಮ್ಮೆ ಮುಂದೂಡಿಕೆಯಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಹಾಗಾಗಿ ಸೋಮವಾರ ಮುಗಿಯಬೇಕಿದ್ದ ವಿಧಾನ ಮಂಡಲ ಅಧಿವೇಶನ ಬುಧವಾರ ಮುಗಿಯಲಿದೆ.

ಫೆ.23 ರ ಶುಕ್ರವಾರ ಮುಗಿಯಬೇಕಿದ್ದ ವಿಧಾನ ಮಂಡಲ ಅಧಿವೇಶನವನ್ನು ಕಲಾಪ ಸಲಹಾ ಸಮಿತಿಯಲ್ಲಿ ಚರ್ಚಿಸಿ ಸೋಮವಾರ ಒಂದು ದಿನ ಕಲಾಪ ನಡೆಸುವ ಕುರಿತು ನಿರ್ಧಾರ ಮಾಡಲಾಗಿತ್ತು. ಆದರೆ ಸುರಪುರ ಹಾಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಹೃದಯಾಘಾತದಿಂದ ನಿಧನರಾಗಿರುವ ಹಿನ್ನೆಲೆಯಲ್ಲಿ ಸೋಮವಾರದ ಕಲಾಪ ಸಂತಾಪಕ್ಕೆ ಸೀಮಿತವಾಗಲಿದೆ. ಹಾಗಾಗಿ ಮರುದಿನ ಕಲಾಪ ನಡೆಸಬೇಕಿದೆ. ಆದರೆ ಮಂಗಳವಾರ ರಾಜ್ಯಸಭೆ ಚುನಾವಣೆಗೆ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಬುಧವಾರ ಕಲಾಪ ನಡೆಸಲಾಗುತ್ತದೆ.

ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಹಿತಿ ನೀಡಿದರು. ಸೋಮವಾರದ ಕಲಾಪದಲ್ಲಿ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ಸಂತಾಪ ಸೂಚಿಸಲಾಗುತ್ತದೆ. ಕಲಾಪ ನಡೆಯುವಾಗ ಹಾಲಿ ಶಾಸಕ ನಿಧನರಾದ ಹಿನ್ನೆಲೆಯಲ್ಲಿ ಸಂತಾಪದ ನಂತರ ಅಂದು ಕಲಾಪ ನಡೆಸುವುದಿಲ್ಲ. ಅದರಂತೆ ಸಂತಾಪದ ನಂತರ ಕಲಾಪವನ್ನು ಮುಂದೂಡಲಾಗುತ್ತದೆ. ಮಂಗಳವಾರ ರಾಜ್ಯಸಭೆ ಚುನಾವಣೆ ಇದ್ದು, ಬುಧವಾರ ಕಲಾಪ ನಡೆಸಲಾಗುತ್ತದೆ ಎಂದು ಸಿಎಂ ತಿಳಿಸಿದರು.

ಕಲಾಪ ಮುಂದುವರಿಕೆ ಸಂಬಂಧ ಸೋಮವಾರ ಮತ್ತೆ ಕಲಾಪ ಸಲಹಾ ಸಮಿತಿ ಸಭೆ ನಡೆಸಿ ಕಲಾಪದ ದಿನಾಂಕ ವಿಸ್ತರಣೆ ಕುರಿತು ನಿರ್ಧಾರ ಕೈಗೊಳ್ಳಲಾಗುತ್ತದೆ.

ಅಂತಿಮ ದರ್ಶನ ಪಡೆದ ಸಿಎಂ: ಸಿಎಂ ಸಿದ್ದರಾಮಯ್ಯ ಅವರು ಮಣಿಪಾಲ್ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾದ ಶಾಸಕ ರಾಜಾ ವೆಂಕಟಪ್ಪ ಅವರ ಪಾರ್ಥಿವ ಶರೀರದ ದರ್ಶನ ಪಡೆದು ಅಂತಿಮ ನಮನ ಸಲ್ಲಿಸಿದರು. ಈ ವೇಳೆ ಮಾತನಾಡಿದ ಸಿಎಂ ಸಿದ್ದರಾಮಯ್ಯ, ರಾಜಾ ವೆಂಕಟಪ್ಪ ನಾಯಕ ಬಹಳ ಸಂಭಾವಿತ ರಾಜಕಾರಣಿ. ಕ್ಷೇತ್ರದ ಅಭಿವೃದ್ಧಿ, ಜನರ ಸಮಸ್ಯೆಗಳ ಬಗ್ಗೆ ಹೆಚ್ಚೆಚ್ಚು ಕಾಳಜಿ ವಹಿಸಿದ್ದರು. ಸೋತಾಗಲೂ ಜನರ ನಡುವೆಯೇ ಇದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ವೇರ್ ಹೌಸಿಂಗ್ ಕಾರ್ಪೊರೇಷನ್ ಅಧ್ಯಕ್ಷರಾಗಿ ಕೆಲಸ ಮಾಡಲು ಸಾಧ್ಯವಾಗಲಿಲ್ಲ ಎನ್ನುವ ಬೇಸರ ನನಗಿದೆ. ಮೊನ್ನೆ ಸ್ವಲ್ಪ ಗುಣಮುಖರಾಗುತ್ತಿದ್ದರು. ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎನ್ನುವ ನಿರೀಕ್ಷೆ ಇರಲಿಲ್ಲ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದು ಸಂತಾಪ ಸೂಚಿಸಿದರು.

ಶಾಸಕನ ನಿಧನದ ಹಿನ್ನೆಲೆಯಲ್ಲಿ ಸೋಮವಾರದ ಅಧಿವೇಶನವನ್ನು ಸಂತಾಪ ಸೂಚಕವಾಗಿ ಒಂದು ದಿನ ಮುಂದೂಡಲಾಗುವುದು. ಮಂಗಳವಾರ ರಾಜ್ಯಸಭಾ ಚುನಾವಣೆ ಇರುವುದರಿಂದ ಬುಧವಾರಕ್ಕೆ ಅಧಿವೇಶನ ಮುಂದೂಡಬೇಕಾಗುತ್ತದೆ ಎಂದು ಸಿಎಂ ತಿಳಿಸಿದರು.

ಡಿಸಿಎಂ ಡಿ.ಕೆ. ಶಿವಕುಮಾರ್ ಸಂತಾಪ: ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ನಿಧನಕ್ಕೆ ಡಿಸಿಎಂ ಡಿ.ಕೆ.ಶಿವಕುಮಾರ್ ಸಂತಾಪ ಸೂಚಿಸಿದ್ದಾರೆ. "ರಾಜಾ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಕೇಳಿ ಬೇಸರವಾಗಿದೆ. ಪಕ್ಷದ ನಿಷ್ಠಾವಂತ ನಾಯಕರಾದ ಇವರು ಕೆಲ ದಿನಗಳ ಹಿಂದಷ್ಟೇ ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಅವರ ಆತ್ಮಕ್ಕೆ ಶಾಂತಿ ಸಿಗಲಿ. ಈ ಅಗಲಿಕೆಯ ನೋವನ್ನು ಭರಿಸುವ ಶಕ್ತಿಯನ್ನು ಅವರ ಕುಟುಂಬ ಸದಸ್ಯರು ಹಾಗೂ ಅಭಿಮಾನಿಗಳಿಗೆ ಕರುಣಿಸುವಂತೆ ಭಗವಂತನಲ್ಲಿ ಪ್ರಾರ್ಥಿಸುತ್ತೇನೆ" ಎಂದು ಶೋಕ ಸಂದೇಶದಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಸುರಪುರ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ನಿಧನ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.