ETV Bharat / state

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಊಹಾಪೋಹ: ಸುರ್ಜೇವಾಲಾ - Surjewala pressmeet - SURJEWALA PRESSMEET

ಮುಂದಿನ 5 ವರ್ಷ ಯಾವುದೇ ಕಾರಣಕ್ಕೂ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ ಎಂದು ಸುರ್ಜೇವಾಲಾ ಹೇಳಿದ್ದಾರೆ.

ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಊಹಾಪೋಹ: ಸುರ್ಜೇವಾಲಾ

author img

By ETV Bharat Karnataka Team

Published : Apr 21, 2024, 5:41 PM IST

ಮೈಸೂರು: ಚುನಾವಣೆ ನಂತರ ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಎಂಬುದು ಕೇವಲ ಊಹಾಪೋಹ. ಇದನ್ನು ನಂಬಬೇಡಿ, ಇದರ ಬಗ್ಗೆ ಸಚಿವರು ನೀಡಿರುವ ಹೇಳಿಕೆ ಅವರ ವೈಯಕ್ತಿಕ ಎಂದು ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲಾ ಹೇಳಿದ್ದಾರೆ.

ನಗರದ ಖಾಸಗಿ ಹೋಟೆಲ್​ನಲ್ಲಿ ನಡೆದ ಮಾಧ್ಯಮಗೋಷ್ಟಿಯಲ್ಲಿ ಮಾತನಾಡಿದ ಅವರು, ಚುನಾವಣೆಯ ನಂತರ ಕಾಂಗ್ರೆಸ್​ನವರು ಗ್ಯಾರಂಟಿ ಯೋಜನೆಯನ್ನು ನಿಲ್ಲಿಸುತ್ತಾರೆ ಎಂದು ಬಿಜೆಪಿ ನಾಯಕರು ಅಪಪ್ರಚಾರ ಮಾಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಮುಂದಿನ 5 ವರ್ಷ ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ. ಜೊತೆಗೆ ಜೂನ್ 4ರ ನಂತರ ಕೇಂದ್ರದಲ್ಲಿ ಕಾಂಗ್ರೆಸ್ ಸರ್ಕಾರ ಬರಲಿದ್ದು ಮೋದಿ ಸರ್ಕಾರ ಅಂತ್ಯವಾಗಲಿದೆ. ನಮ್ಮ ಸರ್ಕಾರ ಮಹಿಳೆಯರಿಗೆ ಮಹಾಲಕ್ಷ್ಮಿ ಯೋಜನೆ ಮೂಲಕ 1 ಲಕ್ಷ ರೂ. ಆರ್ಥಿಕ ನೆರವು ನೀಡಲಿದೆ. ಇದರಲ್ಲಿ ಕರ್ನಾಟಕ ರಾಜ್ಯದ 2 ಸಾವಿರ ರೂ. ಜೊತೆಗೆ, ಕೇಂದ್ರದ 8 ಸಾವಿರ ಹಣ ಸೇರಿ 10 ಸಾವಿರ ಹಣ ಸಿಗಲಿದೆ. ರಾಜ್ಯದ ಜನರಿಗೆ ಡಬಲ್ ಧಮಾಕ ಎಂದರು.

ಮಾಧ್ಯಮಗೋಷ್ಟಿಯಲ್ಲಿ ಸುರ್ಜೇವಾಲಾ ಸೇರಿದಂತೆ ಕಾಂಗ್ರೆಸ್ ನಾಯಕರು ಖಾಲಿ ಚೊಂಬು ಪ್ರದರ್ಶನ ಮಾಡಿದರು. ಈ ಸಂದರ್ಭದಲ್ಲಿ ಸುರ್ಜೇವಾಲಾ ಮೋದಿ ಮಾಡಲ್ ಎಂದರೆ ಖಾಲಿ ಚೊಂಬು, ಚೊಂಬು ಅವರ ಮಾಡಲ್. ಕರ್ನಾಟಕಕ್ಕೆ ಬರಗಾಲದಲ್ಲಿ ಪರಿಹಾರ ಕೊಡಲಿಲ್ಲ. ಪರಿಹಾರ ಕೇಳಿದರೆ ಯಾವುದೇ ಪ್ರತಿಕ್ರಿಯೆ ಇಲ್ಲ. ನಾವು ಕೇಳುತ್ತಿರುವುದು ನಮ್ಮ ಹಕ್ಕನ್ನು ಭಿಕ್ಷೆಯನ್ನಲ್ಲ ಎಂದು ವಾಗ್ದಾಳಿ ನಡೆಸಿದರು.

ಬಿಜೆಪಿಗೆ 400 ಸೀಟ್ ಬಂದರೆ ಸಂವಿಧಾನ ಬದಲಾಯಿಸುವ ಮಾತನ್ನು ಕೆಲವು ನಾಯಕರು ಆಡುತ್ತಿದ್ದಾರೆ. ಈ ಬಗ್ಗೆ ಯಾವುದೇ ಕ್ರಮ ಏಕೆ ಕೈಗೊಳ್ಳಲಿಲ್ಲ?. ಕೇಂದ್ರ ಚುನಾವಣಾ ಆಯೋಗಕ್ಕೆ ಆಯುಕ್ತರನ್ನ ನೇಮಕ ಮಾಡಲು ಸಮಿತಿ ಇದೆ. ಆ ಸಮಿತಿಯಲ್ಲಿ ಮೋದಿ ಅವರು ಸಹ ಇದ್ದಾರೆ. ಇವರು ಹೇಳಿದಂತೆ ಚುನಾವಣಾ ಆಯೋಗ ನಟಿಸುತ್ತಿದೆ ಎಂದು ಟೀಕಿಸಿದರು.

ಇದನ್ನೂ ಓದಿ: ಈ ಲೋಕಸಭಾ ಚುನಾವಣೆಯಲ್ಲಿ 27 ಸೀಟ್​ಗಳನ್ನು ಬಿಜೆಪಿ ಗೆಲ್ಲಲಿದೆ: ಆರ್ ಅಶೋಕ್ - Lok Sabha Election 2024

ETV Bharat Logo

Copyright © 2025 Ushodaya Enterprises Pvt. Ltd., All Rights Reserved.