ETV Bharat / state

ಅಕ್ರಮವಾಗಿ ಸಾಗುವಾನಿ ಮರ ಮಾರಾಟ ಆರೋಪ: ಮೂವರು ಅರಣ್ಯ ಇಲಾಖೆ ಸಿಬ್ಬಂದಿ ಅಮಾನತು

ಅರಣ್ಯ ಇಲಾಖೆಗೆ ಸೇರಿದ ಎರಡು ಮರಗಳನ್ನು ಅಕ್ರಮವಾಗಿ ಮಾರಾಟ ಮಾಡಿರುವ ಆರೋಪದಲ್ಲಿ ಮೂವರು ಅರಣ್ಯ ಇಲಾಖೆ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ ಎಂದು ಡಿಸಿಎಫ್ ಆಶೀಶ್ ರೆಡ್ಡಿ ತಿಳಿಸಿದ್ದಾರೆ.

ಮೂವರು ಅರಣ್ಯ ಇಲಾಖೆ ಸಿಬ್ಬಂದಿಯ ಅಮಾನತು
ಮೂವರು ಅರಣ್ಯ ಇಲಾಖೆ ಸಿಬ್ಬಂದಿಯ ಅಮಾನತು (ETV Bharat)
author img

By ETV Bharat Karnataka Team

Published : 3 hours ago

ದಾವಣಗೆರೆ: ಅಕ್ರಮವಾಗಿ ಸಾಗುವಾನಿ ಮರ ಮಾರಾಟ ಆರೋಪದ ಬೆನ್ನಲ್ಲೇ ಇಬ್ಬರು ಅರಣ್ಯ ಇಲಾಖೆ ಸಿಬ್ಬಂದಿ ಅಮಾನತು ಮಾಡಲಾಗಿದೆ.

ಅಮ್ಮನಗುಡ್ಡ ದೇವಸ್ಥಾನದ ಬಳಿ ರಸ್ತೆ ಬದಿಯಲ್ಲಿದ್ದ ಎರಡು ಸಾಗುವಾನಿ ಮರಗಳನ್ನು ಮಾರಾಟ ಮಾಡಲಾಗಿದೆ ಎಂದು ಆರೋಪಿಸಲಾಗಿತ್ತು. ಅರಣ್ಯ ಇಲಾಖೆಗೆ ಸೇರಿದ ಎರಡು ಮರಗಳನ್ನು ಅಕ್ರಮವಾಗಿ ಮಾರಾಟ ಮಾಡಿದ ಆರೋಪದ ಮೇಲೆ ಉಪ ಅರಣ್ಯಾಧಿಕಾರಿ ಹಾಗೂ ಇಬ್ಬರು ಗಸ್ತು ಅರಣ್ಯ ರಕ್ಷಕರನ್ನು ಅಮಾನತು ಮಾಡಲಾಗಿದೆ.

ಈ ವರ್ಷ ಜುಲೈ 7ರಂದು ಅಮ್ಮನಗುಡ್ಡ ದೇವಸ್ಥಾನದ ಬಳಿ ರಸ್ತೆ ಬದಿಯಲ್ಲಿದ್ದ ಎರಡು ಸಾಗುವಾನಿ ಮರಗಳು ಮಳೆ ಗಾಳಿಗೆ ಬಿದ್ದು ಹೋಗಿದ್ದವು. ನಂತರ ಅರಣ್ಯ ಇಲಾಖೆಯ ಸಿಬ್ಬಂದಿ ಮರಗಳನ್ನು ಕಡಿದು ಡಿಪೋಗೆ ಸಾಗಿಸಲಾಗಿತ್ತು. ಬಳಿಕ ಮಾರಾಟ ಮಾಡಿದ್ದಾರೆಂದು ರೈತ ಸಂಘದವರು ಅರಣ್ಯ ಇಲಾಖೆ ಮೇಲಧಿಕಾರಿಗಳಿಗೆ ದೂರು ಸಲ್ಲಿಸಿದ್ದರು. ಜೋಳದಹಾಳ್ ಉಪವಲಯ ಅರಣ್ಯಾಧಿಕಾರಿ ಗಿರೀಶ್, ಮಾವಿನಕಟ್ಟೆ ಶಾಂತಿಸಾಗರ ವಲಯದ ಗಸ್ತು ಅರಣ್ಯ ರಕ್ಷಕರಾದ ರಾಮು ಮತ್ತು ಜಯರಾಂ ಈ ಪ್ರಕರಣದಲ್ಲಿ ಭಾಗಿಯಾಗಿ ಅಕ್ರಮವಾಗಿ ಮರವನ್ನು ಮಾರಾಟ ಮಾಡಿರುವುದು ಮೇಲಧಿಕಾರಿಗಳ ತನಿಖೆಯಲ್ಲಿ ದೃಢಪಟ್ಟಿದೆ. ಈ ಹಿನ್ನೆಲೆಯಲ್ಲಿ ಮೂವರು ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ಅಮಾನತು ಮಾಡಲಾಗಿದೆ ಎಂದು ಡಿಸಿಎಫ್ ಆಶೀಶ್ ರೆಡ್ಡಿ ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

3.15 ಲಕ್ಷ ಮೌಲ್ಯದ ಶ್ರೀಗಂಧದ ಮರ ಕಳ್ಳನ ಬಂಧನ: ಶ್ರೀಗಂಧದ ಮರಗಳನ್ನು ಕಳ್ಳತನ ಮಾಡುತ್ತಿದ್ದ ಕಳ್ಳನನ್ನು ಪೊಲೀಸರು ಬಂಧಿಸಿ ಒಟ್ಟು 3.15 ಲಕ್ಷ ಮೌಲ್ಯದ ಶ್ರೀಗಂಧ ವಶಕ್ಕೆ ಪಡೆದಿದ್ದಾರೆ. ‌ಚನ್ನಗಿರಿ ಪೊಲೀಸ್​ ಠಾಣೆಯ ವ್ಯಾಪ್ತಿಯಲ್ಲಿ ಶ್ರೀಗಂಧ ಮರ ಕಳ್ಳತನ ಪ್ರಕರಣಗಳು ದಾಖಲಾಗಿದ್ದವು. ಈ ಪ್ರಕರಣಗಳನ್ನು ಪತ್ತೆ ಮಾಡಲು ಒಂದು ತಂಡವನ್ನು ರಚನೆ ಮಾಡಲಾಗಿತ್ತು. ಈ ಪೊಲೀಸ್​ ತಂಡವು ಪ್ರಕರಣವನ್ನು ಭೇದಿಸಿ ಆರೋಪಿ ಸಲ್ಮಾನ್ ಖಾನ್ (25) ಎಂಬಾತನನ್ನು ಬಂಧಿಸಿದ್ದಾರೆ.

ಎಳನೀರು ಕೀಳುವ ಕೆಲಸ ಮಾಡುತ್ತಿದ್ದಾ ಸಲ್ಮಾನ್ ಖಾನ್ ಮೂಲತಃ ಚನ್ನಗಿರಿ ತಾಲ್ಲೂಕಿನ ಕೆರೆಬಿಳಚಿ ಕ್ಯಾಂಪ್ ನಿವಾಸಿ ಆಗಿದ್ದಾನೆ. ಈತನನ್ನು ಪೊಲೀಸರು ಬಂಧಿಸಿ ಆರೋಪಿಯಿಂದ 3,15,000 ರೂಪಾಯಿ ಬೆಲೆ ಬಾಳುವ 45 ಕೆಜಿ ಶ್ರೀಗಂಧದ ಮರದ ತುಂಡುಗಳು ಮತ್ತು ಚಕ್ಕೆಗಳನ್ನು ಹಾಗೂ ಕೃತ್ಯಕ್ಕೆ ಬಳಸಿದ ಒಂದು ಗರಗಸವನ್ನು ವಶಕ್ಕೆ ಪಡೆದಿದ್ದಾರೆ.

ಆರೋಪಿತನ ಪತ್ತೆಯಿಂದ ಸಂತೇಬೆನ್ನೂರು ಪೊಲೀಸ್ ಠಾಣಾ ಸರಹದ್ದಿನ ಕಾಶೀಪುರ ಕ್ಯಾಂಪಿನ ಅಡಿಕೆ ತೋಟದಲ್ಲಿದ್ದ ಶ್ರೀಗಂಧದ ಮರ ಕಳುವಾದ ಪ್ರಕರಣ, ಚನ್ನಗಿರಿ ಪೊಲೀಸ್ ಠಾಣಾ ಸರಹದ್ದಿನ ಚನ್ನಗಿರಿ ಟೌನ್ ಕೋರ್ಟ್ ಮುಂಭಾಗದ ಆವರಣದಲ್ಲಿದ್ದ ಶ್ರೀಗಂಧದ ಮರ ಕಳುವಾದ ಪ್ರಕರಣ ಒಟ್ಟು 02 ಶ್ರೀಗಂಧದ ಮರ ಕಳ್ಳತನ ಪ್ರಕರಣಗಳಲ್ಲಿ ಇವರು ಭಾಗಿಯಾಗಿದ್ದರು ಎಂದು ತನಿಖೆಯಲ್ಲಿ ತಿಳಿದು ಬಂದಿದೆ ಎಂದು ಪೋಲಿಸ್ ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಇದನ್ನೂ ಓದಿ: ಸಿಸಿಬಿ ಕಾರ್ಯಾಚರಣೆ: 30 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಕೊಲೆ ಆರೋಪಿ ಕೊನೆಗೂ ಸಿಕ್ಕಿಬಿದ್ದ

ETV Bharat Logo

Copyright © 2024 Ushodaya Enterprises Pvt. Ltd., All Rights Reserved.