ಮೈಸೂರು: ಕೇಂದ್ರ ಗೃಹ ಹಾಗೂ ಸಹಕಾರ ಸಚಿವ ಅಮಿತ್ ಶಾ ಇಂದು ನಸುಕಿನ ಜಾವ 2.40ರ ಸುಮಾರಿಗೆ ಮೈಸೂರು ವಿಮಾನ ನಿಲ್ದಾಣಕ್ಕೆ ಆಗಮಿಸಿದರು.

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ, ಸಂಸದ ಪ್ರತಾಪ ಸಿಂಹ, ಶಾಸಕರಾದ ಶ್ರೀವತ್ಸ, ಮಾಜಿ ಶಾಸಕರಾದ ನಾಗೇಂದ್ರ, ಹರ್ಷವರ್ಧನ್, ಜಿಲ್ಲಾಧಿಕಾರಿ ಡಾ.ರಾಜೇಂದ್ರ, ನಗರ ಪೊಲೀಸ್ ಆಯುಕ್ತ ರಮೇಶ್, ಪೊಲೀಸ್ ವರಿಷ್ಠಾಧಿಕಾರಿ ಸೀಮಾ ಲಾಟ್ಕರ್ ಸೇರಿದಂತೆ ಅನೇಕರು ಉಪಸ್ಥಿತರಿದ್ದು ಬರಮಾಡಿಕೊಂಡರು.

ಇದನ್ನೂ ಓದಿ: ಮೈಸೂರಿಗೆ ಅಮಿತ್ ಶಾ ಭೇಟಿ: ಸುತ್ತೂರು, ಚಾಮುಂಡಿ ಬೆಟ್ಟದಲ್ಲಿ ಬಿಗಿ ಭದ್ರತೆ