ಕೈ ತಪ್ಪಿದ ಬಿಜೆಪಿ ಟಿಕೆಟ್: ಕೊಪ್ಪಳದಲ್ಲಿ ಸಂಸದ ಸಂಗಣ್ಣ ಕರಡಿ ಸ್ವಾಭಿಮಾನಿ ಸಮಾವೇಶ - MP SANGANNA KARADI - MP SANGANNA KARADI
ಕೊಪ್ಪಳದ ಶಿವಶಾಂತಮಂಗಲ ಭವನದಲ್ಲಿ ಸಂಸದ ಸಂಗಣ್ಣ ಕರಡಿ ಸ್ವಾಭಿಮಾನಿ ಸಮಾವೇಶ ಹಮ್ಮಿಕೊಂಡಿದ್ದಾರೆ.


Published : Mar 21, 2024, 1:18 PM IST
|Updated : Mar 21, 2024, 3:54 PM IST
ಕೊಪ್ಪಳ: ಹಾಲಿ ಸಂಸದ ಸಂಗಣ್ಣ ಕರಡಿಯವರಿಗೆ ಕೊಪ್ಪಳ ಲೋಕಸಭಾ ಟಿಕೆಟ್ ಕೈ ತಪ್ಪಿದ್ದು ಕೊಪ್ಪಳ ಬಿಜೆಪಿಯಲ್ಲಿ ಬಂಡಾಯದ ಗಾಳಿ ಬೀಸಿದೆ. ಕೊಪ್ಪಳದ ಶಿವಶಾಂತಮಂಗಲ ಭವನದಲ್ಲಿ ಗುರುವಾರ ಸಂಸದ ಸಂಗಣ್ಣ ಕರಡಿ ಸ್ವಾಭಿಮಾನಿ ಸಮಾವೇಶ ಹಮ್ಮಿಕೊಂಡಿದ್ದಾರೆ.
ಈ ಸಮಾವೇಶದ ಉದ್ದೇಶ ಕುರಿತು ಸಂಸದ ಸಂಗಣ್ಣ ಕರಡಿ ಮಾಹಿತಿ ನೀಡಿದ್ದು, 'ಸಮಾವೇಶಕ್ಕೆ ಒಟ್ಟು 8 ವಿಧಾನಸಭಾ ಕ್ಷೇತ್ರದ ಬೆಂಬಲಿಗರು ಆಗಮಿಸುತ್ತಿದ್ದಾರೆ. ನನಗೆ ಟಿಕೆಟ್ ತಪ್ಪಿರುವ ಬಗ್ಗೆ ಬೆಂಬಲಿಗರು ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ. ಈ ಸಮಾವೇಶದಲ್ಲಿ ಬೆಂಬಲಿಗರು ನೀಡುವ ಸಲಹೆ ಪಡೆಯುತ್ತೇನೆ. ಬೆಂಬಲಿಗರ ಸಭೆಯಲ್ಲಿ ಬರುವ ಅಭಿಪ್ರಾಯ ಕ್ರೋಢೀಕರಿಸಿ ತೀರ್ಮಾನ ತೆಗೆದುಕೊಳ್ಳಲಾಗುವುದು ಎಂದು ತಿಳಿಸಿದರು.
ಹಾಗೇ, ನಿನ್ನೆಯಿಂದ ಬಿಜೆಪಿಯ ರಾಜ್ಯ ನಾಯಕರಾದ ಯಡಿಯೂರಪ್ಪ ಸೇರಿದಂತೆ ಹಲವು ಮುಖಂಡರು ಫೋನ್ ಮಾಡಿ ಮಾತನಾಡುತ್ತಿದ್ದಾರೆ. ಸದ್ಯ ರಾಜ್ಯದ ಟಿಕೆಟ್ ವಂಚಿತರ ವಿಚಾರಗಳನ್ನು ಹೈಕಮಾಂಡ್ ಗಮನಕ್ಕೆ ತರುವ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಹೈಕಮಾಂಡ್ಗೆ ನಮ್ಮ ಬೆಂಬಲಿಗರು ಅಭಿಪ್ರಾಯ ತಿಳಿಸಲಿದ್ದಾರೆ ಎಂದರು.
ರಾಜ್ಯದಲ್ಲಿ ಹಲವು ಬಿಜೆಪಿ ಮುಖಂಡರಿಗೆ ಟಿಕೆಟ್ ತಪ್ಪಿರುವ ಕುರಿತ ಪ್ರಶ್ನೆಗೆ ಪ್ರತ್ರಿಕ್ರಿಯಿಸಿದ ಅವರು, ಈ ಬಗ್ಗೆ ನಾನು ಪ್ರತಿಕ್ರಿಯಿಸುವಷ್ಟು ದೊಡ್ಡವನಲ್ಲ. ನಾನು ಒಂದು ಪಾರ್ಲಿಮೆಂಟ್ ಕ್ಷೇತ್ರದ ಸದಸ್ಯ ಅಷ್ಟೇ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಬೆಂಬಲಿಗರ ಅಭಿಪ್ರಾಯ ಬಹಳ ಮುಖ್ಯ. ನಾನು ಪಕ್ಷೇತರವಾಗಿ ನಿಲ್ಲುವ ಕುರಿತು ಈಗಲೇ ಹೇಳುವುದಿಲ್ಲ ಎಂದು ಸಂಸದ ಸಂಗಣ್ಣ ಕರಡಿ ಸ್ಪಷ್ಟಪಡಿಸಿದರು.
ಇದನ್ನೂ ಓದಿ: 'ಮೋದಿ ಕಾರ್ಯಕ್ರಮಕ್ಕೆ ಸೌಜನ್ಯಕ್ಕೂ ಆಹ್ವಾನಿಸಲಿಲ್ಲ': ಬಿಎಸ್‌ವೈ ವಿರುದ್ಧ ರೇಣುಕಾಚಾರ್ಯ ಅಸಮಾಧಾನ - M P RENUKACHARYA