ETV Bharat / state

'ಗಂಡಸ್ತನದಿಂದ ರಾಜಕೀಯ ಮಾಡಬೇಕು, ನನ್ನನ್ನು ಕೆಣಕಬೇಡ': ಡಿಕೆಶಿ ವಿರುದ್ಧ ಗುಡುಗಿದ ಹೆಚ್‌ಡಿಕೆ - DKS VS HDK - DKS VS HDK

ಮೈಸೂರಲ್ಲಿ ನಡೆದ ಕಾಂಗ್ರೆಸ್ ಜನಾಂದೋಲನ ಸಮಾವೇಶದಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ ಬೆನ್ನಲ್ಲೇ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಡಿಕೆಶಿ, ಹೆಚ್​ಡಿಕೆ ವಾಕ್ಸಮರ
ಡಿಕೆಶಿ, ಹೆಚ್​ಡಿಕೆ ವಾಕ್ಸಮರ (ETV Bharat)
author img

By ETV Bharat Karnataka Team

Published : Aug 9, 2024, 9:15 PM IST

ಬೆಂಗಳೂರು/ನವದೆಹಲಿ: ಡಿ.ಕೆ.ಶಿವಕುಮಾರ್​​ಗೆ ವ್ಯಕ್ತಿತ್ವ ಎನ್ನುವುದು ಇದೆಯಾ? ಅವರದ್ದು ಒಂದು ನಾಲಿಗೆನಾ.. ಆತ ಮನುಷ್ಯನಾ? ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ತೀವ್ರವಾಗಿ ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ ವ್ಯಕ್ತಪಡಿಸಿದರು.

'ಮೊದಲು ನೆಟ್ಟಗೆ ಬದುಕು, ನನ್ನನ್ನು ಕೆಣಕಬೇಡ': ನವದೆಹಲಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಹೆಚ್​ಡಿಕೆ, ಧೈರ್ಯ ಎನ್ನುವುದು ಇದ್ದರೆ ಗಂಡಸ್ತನದಿಂದ ರಾಜಕೀಯ ಮಾಡಬೇಕು. ಸಂಪುಸಕ ಮಾಡುವ ಕೆಲಸ ಮಾಡುತ್ತಿದ್ದಾನೆ. ನನ್ನನ್ನು ಪ್ರಶ್ನೆ ಮಾಡುತ್ತಾನೆ. ಯಾರ ಮಗನನ್ನು ಬೆಳೆಸಬೇಕು ಎಂದು ಜನ ನಿರ್ಧಾರ ಮಾಡುತ್ತಾರೆ. ಒಳ್ಳೆಯದು, ಕೆಟ್ಟದು ಏನು ಎನ್ನುವುದು ಜನರಿಗೆ ಗೊತ್ತಿದೆ. ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಜನರೇ ನಿರ್ಧಾರ ಮಾಡುತ್ತಾರೆ. ಮೊದಲು ನೆಟ್ಟಗೆ ಬದುಕು. ನನ್ನನ್ನು ಕೆಣಕಬೇಡ ಶಿವಕುಮಾರ್..ಹುಷಾರು!" ಎಂದು ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

'ರೇವಣ್ಣನ ಕುಟುಂಬ ಮುಗಿಸಲು ಮಾಡಿರುವ ತಂತ್ರ ಗೊತ್ತಿದೆ': "ನಿನ್ನ ಯೋಗ್ಯತೆ, ಹಣೆಬರಹ ನನಗೆ ಬಹಳ ಚೆನ್ನಾಗಿ ಗೊತ್ತಿದೆ. ನನ್ನಲ್ಲಿರುವ ಮಾಹಿತಿ ತೆಗೆದಿಟ್ಟರೆ ನೀನು ಬದುಕಲು ಕಷ್ಟವಾಗುತ್ತದೆ. ನಮ್ಮ ಕುಟುಂಬದ ವಿರುದ್ಧ ನೀನು ಏನೆಲ್ಲಾ ಸಂಚು ಮಾಡಿದೆ, ರೇವಣ್ಣ ಕುಟುಂಬ ಮುಗಿಸಲು ಏನು ಕುತಂತ್ರ ಮಾಡಿದೆ ಎನ್ನುವುದು ನನಗೆ ಗೊತ್ತಿದೆ " ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.

"ನನ್ನದು ಪಾರಾದರ್ಶಕ ಆಡಳಿತ. ಒಂದು ಕಪ್ಪು ಚುಕ್ಕೆ ಇಲ್ಲ ಎಂದು ಸಿದ್ದರಾಮಯ್ಯ ಹೇಳುತ್ತಾರೆ. ರೀಡು ಹೆಸರಿನಲ್ಲಿ ಲೂಟಿ ಹೊಡೆದಿದ್ದೀರಿ. ಕೆಂಪಣ್ಣ ವರದಿ ಏನಾಯಿತು? ಸದನ ಸಮಿತಿ ವರದಿ ಎಲ್ಲಿ ಇಟ್ಕೊಂಡಿದ್ದೀರಿ?. ಇವತ್ತು ಕಿರು ಹೊತ್ತಿಗೆ ಬಿಡುಗಡೆ ಮಾಡಿದ್ದಾರೆ. ಎ.ಕೆ.ಸುಬ್ಬಯ್ಯ ಕಾಲದಿಂದಲೂ ದೇವೇಗೌಡರನ್ನು ಮುಗಿಸಲು ಯತ್ನ ಮಾಡಲಾಯಿತು. ಯಾವ ಸಂಚು ಮಾಡಿ ಬಿಡುಗಡೆ ಮಾಡಿದ್ದೀಯಾ ಪೊಣ್ಣನ್ನ? ಎಂದು ಕಿಡಿಕಾರಿದರು.

ಇದನ್ನೂ ಓದಿ: 'ಯಾವ ಪಾದಯಾತ್ರೆಗಳೂ ನನ್ನನ್ನು ಅಲುಗಾಡಿಸಲು ಸಾಧ್ಯವಿಲ್ಲ': ಜನಾಂದೋಲನ ಸಮಾವೇಶದಲ್ಲಿ ಘರ್ಜಿಸಿದ ಸಿಎಂ ಸಿದ್ದರಾಮಯ್ಯ - CM Siddaramaiah

"ನಿವೇಶನ ಕೊಡಿ ಎಂದು 37,000 ರೂಪಾಯಿ ದುಡ್ಡು ಕಟ್ಟಿದ್ದೇನೆ. ನನಗೆ ಈವರೆಗೆ ನಿವೇಶನ ಕೊಟ್ಟಿಲ್ಲ. ನಾನು ಮೈಸೂರಿನಲ್ಲಿದ್ದಾಗ ಸಿನಿಮಾ ನಿರ್ಮಾಣ, ಸಿನಿಮಾ ಹಂಚಿಕೆ ಮಾಡುತ್ತಿದ್ದಾಗ ಹಣ ಕಟ್ಟಿದ್ದೆ. ಸತ್ಯ ಸಂಗತಿ ಮುಚ್ಚಿಟ್ಟು ಮೈಸೂರಲ್ಲಿ ಬೋರ್ಡ್, ಫ್ಲೆಕ್ಸ್ ಹಾಕಿಕೊಂಡಿದ್ದಾರೆ. ಅದನ್ನು ನಿಮ್ಮ ಶಾಸಕರು ಕೊರಳಿಗೆ ಹಾಕಿಕೊಳ್ಳಲಿ. ಆ ಪ್ರಕರಣದಲ್ಲಿ ಏನು ಇಲ್ಲ ಎಂದು ಲೋಕಾಯುಕ್ತ, ಸಿಐಡಿ ಅವರು ಹೇಳಿದ್ದಾರೆ. ಈ ಬೋರ್ಡ್ ಕಾಂಗ್ರೆಸ್ ಸ್ವಂತದ್ದಲ್ಲ ಬಿಜೆಪಿಯಿಂದ ಎರವಲು ತೆಗೆದುಕೊಂಡಿದ್ದಾರೆ. ಕಾಂಗ್ರೆಸ್ ಪಕ್ಷದ್ದು ಏನೂ ಇಲ್ಲ" ಎಂದು ಸಚಿವರು ಟೀಕಾಪ್ರಹಾರ ನಡೆಸಿದರು.

"ಇವತ್ತು ಜನಾಂದೋಲನ ಸಮಾವೇಶ ನಡೆಸಿದ ಕಾಂಗ್ರೆಸ್ ನಾಯಕರಿಗೆ ನಾಚಿಕೆ ಆಗಬೇಕು. ವಿರೋಧ ಪಕ್ಷದಲ್ಲಿದ್ದಾಗ ಬೊಗಳೆ ಬಿಟ್ಟರು. ಸಾಕ್ಷಿಗಳಿಲ್ಲದೇ ಅವರು ಬಿಜೆಪಿ ಸರ್ಕಾರದ ವಿರುದ್ಧ ಆರೋಪ ಮಾಡಿದ್ದರು. ವಿರೋಧ ಪಕ್ಷ ಸ್ಥಾನದ ಘನತೆ ಮರೆತು ಅತ್ಯಂತ ನಿಷ್ಕೃಷ್ಠವಾಗಿ ವರ್ತಿಸಿದ್ದಾರೆ. ವಿಧಾನಸಭೆಯಲ್ಲಿ ನಮ್ಮ ಶಾಸಕರು ಕಡಿಮೆ ಇದ್ದರೂ ದಾಖಲೆ ಸಮೇತ ಹೋರಾಟ ಮಾಡಿದ್ದೆವು. ದಾಖಲೆ ಸಮೇತ ಮಾತನಾಡಿದೆವು, ಅದರಲ್ಲೇನು ನಾಚಿಕೆ ಇಲ್ಲ" ಎಂದು ಅವರು ಹೇಳಿದರು.

"ನಾನು ಸಿಎಂ ಆಗಿದ್ದಾಗ ಒಂದು ಅಕ್ರಮ ನಡೆದಿದ್ದರೆ ದಾಖಲೆ ನೀಡಲಿ. ಇವರೇನಾದರೂ ದಾಖಲೆ ನೀಡಿದ್ದರಾ? ನಾನು ವಿರೋಧ ಪಕ್ಷದ ನಾಯಕನಿದ್ದಾಗ ಬಿಜೆಪಿ ವಿರುದ್ಧವೂ ಹೋರಾಟ ಮಾಡಿದ್ದೆ. ಈಗ ಏನೋ ಹೊಸದು ಅಂತ ಬಂದಿದ್ದಾರೆ. ನನ್ನ ಮೇಲೆ ಯಾವ ಆಪಾದನೆಯೂ ಇಲ್ಲ" ಎಂದು ಅವರು ಸ್ಪಷ್ಟ ಮಾತುಗಳಲ್ಲಿ ಹೇಳಿದರು.

ರಾಜ್ಯ ಸರ್ಕಾರ ಕೆಡವಲು ಪ್ರಯತ್ನ ನಡೆಯುತ್ತಿರುವ ಆರೋಪದ ಬಗ್ಗೆ ಉತ್ತರಿಸಿದ ಅವರು, ಸಂಚು ನಡೆಯುತ್ತಿದೆ ಎಂದು ಯಾರು ಹೇಳಿದರು? ಅವರಿಗೇನು ಕನಸು ಬಿದ್ದಿತ್ತಾ? ಅಥವಾ ಅಜ್ಜಯ್ಯ ಹೇಳಿದರಾ? ಯಾರು ಹೇಳಿದ್ರಂತೆ ಅವರಿಗೆ? ಎಂದು ಸಚಿವರು ವ್ಯಂಗ್ಯವಾಡಿದರು.

ಇದನ್ನೂ ಓದಿ: ಈ ಬಂಡೆ ಸಿದ್ದರಾಮಯ್ಯ ಜೊತೆಗಿದೆ; 10 ತಿಂಗಳಲ್ಲ, 10 ವರ್ಷ ನಮ್ಮ ಸರ್ಕಾರವನ್ನು ಮುಟ್ಟಲಾಗದು: ಡಿಕೆಶಿ - D K Shivakumar

ETV Bharat Logo

Copyright © 2024 Ushodaya Enterprises Pvt. Ltd., All Rights Reserved.