ETV Bharat / state

ಪ್ರತಿಷ್ಠಿತ ಹೊಟೇಲ್‌ಗಳಲ್ಲಿ ರೂಮ್ ಪಡೆದು ವಂಚನೆ: ತಮಿಳುನಾಡಿನ ಆರೋಪಿ ಸೆರೆ - TAMIL NADU ACCUSED ARRESTED

ದೆಹಲಿ, ಮಹಾರಾಷ್ಟ್ರ ಥಾಣೆ, ಕೇರಳದ ಕೊಲ್ಲಂ ಸೇರಿದಂತೆ ಹಲವು ರಾಜ್ಯಗಳಲ್ಲಿನ ಐಶಾರಾಮಿ ಹೋಟೆಲ್​ಗಳನ್ನು ಗುರಿಯಾಗಿಸಿಕೊಂಡು, ಅಲ್ಲಿ ರೂಮ್ ಪಡೆದು ಬಿಲ್ ಪಾವತಿಸದೇ ಪರಾರಿಯಾಗಿ ವಂಚಿಸುತ್ತಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

Manipal Police Station
ಮಣಿಪಾಲ ಪೊಲೀಸ್​ ಠಾಣೆ (ETV Bharat)
author img

By ETV Bharat Karnataka Team

Published : Dec 11, 2024, 2:41 PM IST

ಉಡುಪಿ: ದೇಶದ ವಿವಿಧ ರಾಜ್ಯಗಳಲ್ಲಿನ ಪ್ರತಿಷ್ಠಿತ ಫೈವ್ ಸ್ಟಾರ್ ಹೊಟೇಲ್‌ಗಳನ್ನು ಗುರಿಯಾಗಿಸಿಕೊಂಡು ವಂಚಿಸುತ್ತಿದ್ದ ತಮಿಳುನಾಡು ಮೂಲದ ಆರೋಪಿಯನ್ನು ಮಣಿಪಾಲ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ತಮಿಳುನಾಡು ರಾಜ್ಯದ ತೂತುಕುಡಿಯ ಬಿಮ್ಸೆಂಟ್ ಜಾನ್(67) ಬಂಧಿತ ಆರೋಪಿ. ಈತ ಡಿ.7ರಂದು ಮಣಿಪಾಲದ ಪ್ರತಿಷ್ಠಿತ ಹೊಟೇಲ್‌ನಲ್ಲಿ ತನಗೆ ಕಾನ್ಫರೆನ್ಸ್ ಮೀಟಿಂಗ್ ಇದೆ ಎಂಬುದಾಗಿ ಹೇಳಿ ರೂಮ್ ಪಡೆದುಕೊಂಡಿದ್ದನು. ಮುಂಗಡ ಹಣವನ್ನು ಡಿ.9ರಂದು ಕೊಡುವುದಾಗಿ ಡಿ.12ರಂದು ರೂಮ್ ಚೆಕ್‌ಔಟ್ ಮಾಡುತ್ತೇನೆ ಎಂದು ಹೇಳಿ ಹೊಟೇಲ್ ಮ್ಯಾನೇಜರ್​​​ನನ್ನು ನಂಬಿಸಿ ರೂಮ್‌ನಲ್ಲಿ ಉಳಿದುಕೊಂಡಿದ್ದನು. ಬಳಿಕ ಹೊಟೆಲ್‌ನಲ್ಲಿಯೇ ಊಟ ತಿಂಡಿ ಮಾಡಿ ಒಟ್ಟು 39,298 ರೂ. ಬಿಲ್ ಮಾಡಿ ಹಣ ಕೊಡದೇ ಪರಾರಿಯಾಗಿ ನಂಬಿಸಿ ಮೋಸ ಮಾಡಿರುವುದಾಗಿ ಮಣಿಪಾಲ್​ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.

ಜಿಲ್ಲಾ ಪೋಲಿಸ್ ವರಿಷ್ಠಾಧಿಕಾರಿ ಡಾ.ಕೆ. ಅರುಣ್ ಕುಮಾರ್ (ETV Bharat)

ಈ ಬಗ್ಗೆ ಜಿಲ್ಲಾ ಪೊಲೀಸ್​​ ವರಿಷ್ಠಾಧಿಕಾರಿ ಡಾ.ಕೆ. ಅರುಣ್ ಕುಮಾರ್ ಮಾಹಿತಿ ನೀಡಿ, "ಪ್ರಕರಣದ ಬಗ್ಗೆ ಕಾರ್ಯಾಚರಣೆ ನಡೆಸಿದ ಮಣಿಪಾಲ ಪೊಲೀಸ್ ನಿರೀಕ್ಷಕ ದೇವರಾಜ್ ನೇತೃತ್ವದ ತಂಡ ಆರೋಪಿ ಜಾನ್​​ ನನ್ನು ಮಣಿಪಾಲದಲ್ಲಿ ಡಿ.9ರಂದು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈತ ಇದೇ ರೀತಿ ದೆಹಲಿ, ಮಹಾರಾಷ್ಟ್ರ ಥಾಣೆ, ಕೇರಳದ ಕೊಲ್ಲಂ ಸೇರಿದಂತೆ ಹಲವು ರಾಜ್ಯಗಳಲ್ಲಿನ ಪ್ರತಿಷ್ಠಿತ ಫೈವ್ ಸ್ಟಾರ್ ಹೊಟೇಲ್‌ಗಳಲ್ಲಿ ರೂಮ್ ಪಡೆದುಕೊಂಡು ಸಾವಿರಾರು ರೂಪಾಯಿ ಬಿಲ್ ಮಾಡಿ, ಬಳಿಕ ಹಣ ಪಾವತಿಸದೇ ಪರಾರಿಯಾಗಿ ವಂಚಿಸುತ್ತಿದ್ದನು. ಪದವೀಧರನಾಗಿರುವ ಈತನ ವಿರುದ್ಧ ದೇಶದ ನಾನಾ ಪೊಲೀಸ್ ಠಾಣೆಗಳಲ್ಲಿ ಒಟ್ಟು 49 ಪ್ರಕರಣಗಳು ದಾಖಲಾಗಿವೆ. ಪ್ರಸ್ತುತ ಮಣಿಪಾಲ ಪೊಲೀಸರು ಆರೋಪಿಯನ್ನು ಇಂದು ಉಡುಪಿ ನ್ಯಾಯಾಲಯಕ್ಕೆ ಹಾಜರು ಪಡಿಸಿದ್ದಾರೆ. ಕೋರ್ಟ್​​​ ಆರೋಪಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ ವಿಧಿಸಿ ಆದೇಶ ಹೊರಡಿಸಿದೆ ಎಂದು ತಿಳಿಸಿದರು.

ಇದನ್ನೂ ಓದಿ: ಲಕ್ಕಿಡಿಪ್​ ಘೋಷಿಸಿ ಡ್ರಾ ಮಾಡದೆ ವಂಚನೆ ಆರೋಪ: ಪ್ರತಿಷ್ಟಿತ ಮಳಿಗೆಗೆ ₹1 ಲಕ್ಷ ದಂಡ, ಗ್ರಾಹಕನಿಗೆ ₹30 ಸಾವಿರ ಪರಿಹಾರ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.