ETV Bharat / state

ಬೆಂಗಳೂರು: ಪಿಜಿಯ 4ನೇ‌ ಮಹಡಿಯಿಂದ ಜಿಗಿದು ತಮಿಳುನಾಡಿನ ಯುವಕ ಆತ್ಮಹತ್ಯೆ - YOUTH COMMITS SUICIDE

ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದ ತಮಿಳುನಾಡಿನ ಯುವಕನೊಬ್ಬ ಬೆಂಗಳೂರಿನಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ.

LOVE FAILURE
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : Oct 16, 2024, 10:32 PM IST

ಬೆಂಗಳೂರು: ಯುವಕನೊಬ್ಬ ಪೇಯಿಂಗ್ ಗೆಸ್ಟ್​ನ (ಪಿಜಿ) ನಾಲ್ಕನೇ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಪರಪ್ಪನ ಅಗ್ರಹಾರ ಠಾಣೆ ವ್ಯಾಪ್ತಿಯಲ್ಲಿ ಕಳೆದ ರಾತ್ರಿ ನಡೆದಿದೆ. ತಮಿಳುನಾಡಿನ ವಿಷ್ಣು(28) ಆತ್ಮಹತ್ಯೆ ಮಾಡಿಕೊಂಡ ಯುವಕ.

ನಾಲ್ಕು ತಿಂಗಳ ಹಿಂದೆ ಉದ್ಯೋಗ ಅರಸಿ ಬೆಂಗಳೂರಿಗೆ ಬಂದಿದ್ದ ವಿಷ್ಣು, ಕೋನಪ್ಪನ ಅಗ್ರಹಾರ ಸಮೀಪದ ಪಿಜಿಯಲ್ಲಿ ವಾಸವಾಗಿದ್ದ. ಕೆಲವು ದಿನಗಳ ಹಿಂದಷ್ಟೇ ಬಿಪಿಒ ಕಂಪನಿಯೊಂದರಲ್ಲಿ ಈತನಿಗೆ ಉದ್ಯೋಗ ಸಿಕ್ಕಿತ್ತು. ಈ ವಿಚಾರವನ್ನು ತನ್ನ ಸ್ನೇಹಿತರು ಹಾಗೂ ಸಂಬಂಧಿಕರಿಗೆ ತಿಳಿಸಿದ್ದ.

ಆದರೆ, ನಿನ್ನೆ ತಡರಾತ್ರಿ 1.30ರ ಸುಮಾರಿಗೆ ಪಿಜಿಯ ನಾಲ್ಕನೇ ಮಹಡಿಯಿಂದ ಜಿಗಿದಿದ್ದಾನೆ. ಜೋರಾಗಿ ಶಬ್ಧ ಕೇಳಿ ಸ್ಥಳೀಯರು ಬಂದು ನೋಡಿದಾಗ ಆತ್ಮಹತ್ಯೆ ಮಾಡಿರುವುದು ಗೊತ್ತಾಗಿದೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಪೊಲೀಸರು ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ.

ಪ್ರೇಮ ವೈಫಲ್ಯ ಶಂಕೆ: ಬುಧವಾರ ಮರಣೋತ್ತರ ಪರೀಕ್ಷೆ ಮುಗಿಸಿ ಕುಟುಂಬ ಸದಸ್ಯರಿಗೆ ಮೃತದೇಹ ಹಸ್ತಾಂತರಿಸಲಾಗಿದೆ. ಘಟನಾ ಸ್ಥಳದಲ್ಲಿ ಯಾವುದೇ ಡೆತ್‌ನೋಟ್ ಸಿಕ್ಕಿಲ್ಲ. ಸ್ನೇಹಿತರ ಮಾಹಿತಿ ಪ್ರಕಾರ, ಪ್ರೇಮ ವೈಫಲ್ಯ ಎಂದು ಹೇಳಲಾಗಿದೆ. ಪ್ರಕರಣದ ತನಿಖೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು: ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.