ETV Bharat / state

ಕಾಲುವೆಗಳಿಂದ ಅಕ್ರಮ ನೀರು ಬಳಕೆ ತಡೆಗೆ ಟಾಸ್ಕ್ ಫೋರ್ಸ್ ರಚನೆ: ಡಿಸಿಎಂ ಡಿ.ಕೆ.ಶಿವಕುಮಾರ್ - ILLEGAL WATER LIFTING FROM CANAL

ಬೇರೆಯವರನ್ನು ಮೆಚ್ಚಿಸಲು ಕೆಲಸ ಮಾಡಬೇಕಿಲ್ಲ. ನಿಮ್ಮ ಆತ್ಮಸಾಕ್ಷಿ ಮೆಚ್ಚಿಸಲು ಕೆಲಸ ಮಾಡಿ. ಶಾಸಕರ ಒತ್ತಡಕ್ಕೆ ಮಣಿಯಬೇಡಿ ಎಂದು ನೀರಾವರಿ ಇಲಾಖೆ ಅಧಿಕಾರಿಗಳಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಕರೆ ನೀಡಿದರು.

d k shivakumar
ಡಿ.ಕೆ.ಶಿವಕುಮಾರ್ (ETV Bharat)
author img

By ETV Bharat Karnataka Team

Published : Nov 25, 2024, 10:47 PM IST

ಬೆಂಗಳೂರು: ''ಕಾಲುವೆಗಳಿಂದ ಅಕ್ರಮವಾಗಿ ನೀರನ್ನು ಎತ್ತುವುದನ್ನು ತಡೆಯಲು ನೀರಾವರಿ ಇಲಾಖೆ ಅಧಿಕಾರಿಗಳ ಜೊತೆಗೆ ಪಂಪ್ ಸೆಟ್​​ಗಳಿಗೆ ವಿದ್ಯುತ್ ಪೂರೈಸುವ ಇಂಧನ ಇಲಾಖೆ ಅಧಿಕಾರಿಗಳನ್ನು ಒಳಗೊಂಡಂತೆ ಟಾಸ್ಕ್ ಫೋರ್ಸ್ ರಚಿಸಲಾಗುವುದು'' ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ತಿಳಿಸಿದರು.

ವಿಕಾಸಸೌಧದಲ್ಲಿ ಏರ್ಪಡಿಸಲಾಗಿದ್ದ ಕರ್ನಾಟಕ ನೀರಾವರಿ (ತಿದ್ದುಪಡಿ) ಅಧಿನಿಯಮ ಕುರಿತ ಅಧಿಕಾರಿಗಳು ಹಾಗೂ ಇಂಜಿನಿಯರ್​ಗಳ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು. ''ಮುಂದಿನ ದಿನಗಳಲ್ಲಿ ನಿಮ್ಮ ಮೇಲೆ ರಾಜಕೀಯ ಒತ್ತಡಗಳು ಎದುರಾಗಲಿದೆ ಎಂದು ನನಗೆ ಗೊತ್ತಿದೆ. ಹೀಗಾಗಿ, ಈ ತಿದ್ದುಪಡಿಯ ಸಾಧಕ ಬಾಧಕಗಳನ್ನು ಈ ಕಾರ್ಯಾಗಾರದಲ್ಲಿ ಚರ್ಚೆ ಮಾಡಿ'' ಎಂದರು.‌

''ಕಾಲುವೆಗಳಿಂದ ಅಕ್ರಮವಾಗಿ ನೀರು ಎತ್ತದಂತೆ ರೈತರಲ್ಲಿ ಅರಿವು ಮೂಡಿಸಬೇಕು. ಹಂತ - ಹಂತವಾಗಿ ಕರ್ನಾಟಕ ನೀರಾವರಿ (ತಿದ್ದುಪಡಿ) ಅಧಿನಿಯಮ 2024 ಅನ್ನು ಜಾರಿಗೊಳಿಸಿ'' ಎಂದು ನಿರಾವರಿ ಇಲಾಖೆ ಇಂಜಿನಿಯರ್ ಗಳಿಗೆ ಸಲಹೆ ನೀಡಿದ ಅವರು, ''ಸಚಿವರಾದ ಹೆಚ್.ಕೆ.ಪಾಟೀಲ್ ಅವರು ನೀರು ಬಳಕೆದಾರರ ಸಹಕಾರ ಸಂಘ ಆರಂಭಿಸಿದ್ದು, ಅದು ಸರಿಯಾದ ರೀತಿಯಲ್ಲಿ ಕಾರ್ಯನಿರ್ವಹಿಸುತ್ತಿಲ್ಲ. ಅದನ್ನು ಬಲಪಡಿಸಬೇಕಿದೆ. ಮುಂದಿನ ದಿನಗಳಲ್ಲಿ ಚರ್ಚಿಸಿ ಬಜೆಟ್​​ನಲ್ಲಿ ಹಣ ಮೀಸಲಿಟ್ಟು, ವಾಲ್ಮಿ (ಜಲ ಮತ್ತು ನೆಲ ನಿರ್ವಹಣೆ ಸಂಸ್ಥೆ) ನೇತೃತ್ವದಲ್ಲಿ ಈ ಸಹಕಾರ ಸಂಘಗಳಿಗೆ ಜವಾಬ್ದಾರಿ ನೀಡಲಾಗುವುದು. ಈ ಸಂಘಗಳ ಸ್ವರೂಪದ ಜವಾಬ್ದಾರಿ ನಿಮಗೆ ನೀಡುತ್ತಿದ್ದೇವೆ. ಕೆರೆ ತುಂಬಿಸುವ ಯೋಜನೆಗಳಿಗೆ ಬಹಳಷ್ಟು ವೆಚ್ಚ ಮಾಡಲಾಗಿದೆ. ಕುಡಿಯುವ ಉದ್ದೇಶಕ್ಕೆ ತುಂಬಿಸುವ ನೀರನ್ನು ನೀರಾವರಿಗೆ ಬಳಸಿದರೆ ಈ ಯೋಜನೆ ಉದ್ದೇಶವೇನು? ಈ ಬಗ್ಗೆಯೂ ವ್ಯಾಪಕ ಚರ್ಚೆಯಾಗಬೇಕು'' ಎಂದರು.

ಜಾಣ್ಮೆಯಿಂದ ತಿದ್ದುಪಡಿ ಜಾರಿಗೆ ತನ್ನಿ: ''ಈ ತಿದ್ದುಪಡಿ ಬಂದಿದೆ ಎಂದು ಏಕಾಏಕಿ ನೀವು ನುಗ್ಗಬೇಡಿ. ಕಾನೂನು ಇದೆ ಎಂದು ರೈತರಿಗೆ ಕಿರುಕುಳ ನೀಡಬೇಡಿ. ಹಂತ - ಹಂತವಾಗಿ ಜಾರಿಗೊಳಿಸಿ. ಅಕ್ರಮವಾಗಿ ಕಾಲುವೆಗಳಲ್ಲಿ ಮೋಟರ್ ಇಟ್ಟಿರುವ ರೈತರಿಗೆ ತಮ್ಮ ತಪ್ಪಿನ ಬಗ್ಗೆ ಈಗಿನಿಂದಲೇ ತಿಳಿಸಿ. ನೀರು ಬಳಕೆದಾರರ ಸಹಕಾರ ಸಂಘದ ಮೂಲಕ ಈ ಜಾಗೃತಿ ಮೂಡಿಸಿ. ಈ ವಿಚಾರದಲ್ಲಿ ನಿಮಗೆ ಇನ್ನಷ್ಟು ಸಶಕ್ತೀಕರಣ ಅಗತ್ಯವಿದ್ದಲ್ಲಿ, ಅದನ್ನು ಚರ್ಚಿಸಿ ಸಲಹೆ ನೀಡಿ. ಈ ವಿಚಾರದಲ್ಲಿ ರೈತರ ಸಹಕಾರ ಬಹಳ ಮುಖ್ಯ'' ಎಂದು ತಿಳಿಸಿದರು.

ಕೊನೆ ಹಂತದವರೆಗೂ ನೀರು ತಲುಪಬೇಕು: ''ಕರ್ನಾಟಕ ನೀರಾವರಿ (ತಿದ್ದುಪಡಿ) ಅಧಿನಿಯಮ 2024ರಲ್ಲಿ ಬಹಳ ಮಹತ್ತರ ತಿದ್ದುಪಡಿ ತರಲಾಗಿದೆ. ಈ ಕುರಿತು ಇನ್ನಷ್ಟು ಚರ್ಚೆ ನಡೆಯಲಿದ್ದು, ಜನರನ್ನು ಎತ್ತಿಕಟ್ಟುವ ಪ್ರಯತ್ನ ನಡೆಯಲಿದೆ. ರೈತರನ್ನು ಉಳಿಸುವುದು ನಮ್ಮ ಉದ್ದೇಶ. ಒಬ್ಬರಿಗೆ ಒಂದು ಕಾನೂನು ಮತ್ತೊಬ್ಬರಿಗೆ ಬೇರೆ ಕಾನೂನು ಮಾಡಲು ಸಾಧ್ಯವಿಲ್ಲ. ಈ ತಿದ್ದುಪಡಿ ಮೂಲಕ ಉಪ ಆಯುಕ್ತರ ಅಧಿಕಾರವನ್ನು ಸೂಪರಿಂಟೆಂಡೆಂಟ್​ ಇಂಜಿನಿಯರ್​​ಗೆ ನೀಡಿದ್ದೇವೆ. ಈ ವಿಚಾರವನ್ನು ನೀವು ಗಮನದಲ್ಲಿಟ್ಟುಕೊಳ್ಳಬೇಕು'' ಎಂದು ಹೇಳಿದರು.

''ಎತ್ತಿನಹೊಳೆ ಯೋಜನೆಗೆ ನಾವು 25 ಸಾವಿರ ಕೋಟಿ ವೆಚ್ಚ ಮಾಡಿದ್ದೇವೆ. ಇಷ್ಟು ಹಣ ಖರ್ಚು ಮಾಡಿ ಕೋಲಾರ, ಚಿಕ್ಕಬಳ್ಳಾಪುರಕ್ಕೆ ನೀರು ಒದಗಿಸದಿದ್ದರೆ ಹೇಗೆ? ಈ ಯೋಜನೆಯಲ್ಲಿ 3 ತಿಂಗಳಲ್ಲಿ ಸಿಗುವ ನೀರು ಕೇವಲ 24 ಟಿಎಂಸಿಯಷ್ಟು ಮಾತ್ರ. ಮುಂದಿನ ದಿನಗಳಲ್ಲಿ ಇದಕ್ಕೆ ಬೇರೆ ಯೋಜನೆ ಹಾಕಿ ವ್ಯರ್ಥವಾಗಿ ಹರಿಯುತ್ತಿರುವ ನೀರನ್ನು ಬಳಸಿಕೊಳ್ಳುವ ಉದ್ದೇಶ ಹೊಂದಿದ್ದೇವೆ. ಕೋಲಾರ, ಚಿಕ್ಕಬಳ್ಳಾಪುರ ಹಾಗೂ ಬೆಂಗಳೂರು ಗ್ರಾಮಾಂತರ ಭಾಗದ ಜನರಿಗೆ ನೀರನ್ನು ಹೇಗೆ ಬಳಸಿಕೊಳ್ಳಬೇಕು ಎಂಬ ಅರಿವಿದೆ. ಕಾರಣ ಈ ಭಾಗದಲ್ಲಿ 2 ಸಾವಿರ ಅಡಿ ಕೊಳವೆ ಬಾವಿ ಕೊರೆಸಿ ನೀರು ತೆಗೆದು ತರಕಾರಿ, ರೇಷ್ಮೆ ಕೃಷಿ ಮಾಡುತ್ತಿದ್ದಾರೆ. ನೀರು ಹೆಚ್ಚಾಗಿ ಸಿಗುತ್ತಿರುವ ಭಾಗಗಳ ಜನರಿಗೆ ನೀರಿನ ಬಳಕೆ ಬಗ್ಗೆ ಹೆಚ್ಚು ಅರಿವಿಲ್ಲ. ಹೀಗಾಗಿ, ಈ ತಿದ್ದುಪಡಿ ತರಲಾಗಿದೆ'' ಎಂದರು.

ಶಾಸಕರ ಒತ್ತಡಕ್ಕೆ ಮಣಿಯಬೇಡಿ: ''ಶಾಸಕರು ಹೇಳಿದರು ಎಂಬ ಕಾರಣಕ್ಕೆ ಯೋಜನೆಗಳನ್ನು ನೀವುಗಳು ಕೂಡ ಬರೆದು ಕೊಡುತ್ತಿದ್ದೀರಿ. 5 ಕೋಟಿ ವರೆಗೂ ಯೋಜನೆಗಳಿಗೆ ನೀವೇ ಅನುಮತಿ ನೀಡಬಹುದು ಎಂಬ ಕಾರಣಕ್ಕೆ 4.99 ಕೋಟಿ ಎಂದು ಯೋಜನೆ ಅಂದಾಜು ಬರೆದು ಕೊಡುತ್ತಿದ್ದೀರಿ. ಈ ರೀತಿ ಅಂದಾಜು ಮಾಡಲು ನಿಮಗೆ ಹೇಳಿದವರು ಯಾರು?. ಯಡಿಯೂರಪ್ಪ ಹಾಗೂ ಬೊಮ್ಮಾಯಿ ಅವರ ಕಾಲದಲ್ಲಿ ಎಲ್ಲವನ್ನು ಹಾಳು ಮಾಡಲಾಗಿದೆ''.

''21 ಸಾವಿರ ಕೋಟಿ ಘೋಷಣೆ ಮಾಡಿದ್ದು, ಅದರಲ್ಲಿ 16 ಸಾವಿರ ಕೋಟಿ ನೀಡಲಾಗಿದೆ. 5 ಸಾವಿರ ಕೋಟಿ ಹಣವನ್ನು ಕೇಂದ್ರ ಸರ್ಕಾರ ಹಿಡಿದಿಟ್ಟುಕೊಂಡಿದೆ. ಆದರೆ 1 ಲಕ್ಷ ಕೋಟಿ ರೂ. ಮೊತ್ತದ ಕೆಲಸ ನಡೆಯುತ್ತಿದೆ. ಇಂತಹ ಪರಿಸ್ಥಿತಿಯಲ್ಲಿ ಗುತ್ತಿಗೆದಾರರಿಗೆ ಬಿಲ್ ಪಾವತಿ ಮಾಡಲು ಹೇಗೆ ಸಾಧ್ಯ? ಹೊಸ ಯೋಜನೆ ಹೇಗೆ ಕೈಗೊಳ್ಳಬೇಕು? ನೀವುಗಳು ಅಂದಾಜು ಮಾಡುವಾಗ ಲೆಕ್ಕಾಚಾರ ಇರಬೇಕು. ನಾಳೆ ಹೆಚ್ಚುಕಮ್ಮಿಯಾದರೆ, ಈ ಯೋಜನೆ ಅಂದಾಜು ಮಾಡಿಕೊಟ್ಟ ನಿಮ್ಮ ಮೇಲೆ ಕಠಿಣ ಕ್ರಮ ಕೈಗೊಳ್ಳಬೇಕಾಗುತ್ತದೆ'' ಎಂದು ಎಚ್ಚರಿಕೆ ನೀಡಿದರು.

ಇದನ್ನೂ ಓದಿ: ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸ ಅಧಿಸೂಚನೆಗೆ ತಡೆ

ETV Bharat Logo

Copyright © 2025 Ushodaya Enterprises Pvt. Ltd., All Rights Reserved.