ETV Bharat / state

ಡಿಕೆಶಿಗೆ ನೀರಾವರಿ ಇಲಾಖೆ ನಿರ್ವಹಣೆಗಿಂತ ಕಾಂಗ್ರೆಸ್ ಹೈಕಮಾಂಡ್ ಏಜೆಂಟ್ ಕೆಲಸವೇ ಹೆಚ್ಚಾಗಿದೆ: ಆರ್.ಅಶೋಕ್ - TB Dam Gate Cut - TB DAM GATE CUT

ತುಂಗಭದ್ರಾ ಜಲಾಶಯದ 19ನೇ ಗೇಟ್ ಚೈನ್ ಲಿಂಕ್ ಮುರಿದಿರುವ ಬಗ್ಗೆ ಪ್ರತಿಪಕ್ಷ ನಾಯಕ ಆರ್.ಅಶೋಕ್ ಅವರು ನೀರಾವರಿ ಸಚಿವ ಡಿ.ಕೆ.ಶಿವಕುಮಾರ್ ವಿರುದ್ಧ ಕಿಡಿಕಾರಿದ್ದಾರೆ.

ಆರ್.ಅಶೋಕ್, ಡಿಕೆ ಶಿವಕುಮಾರ್
ಆರ್.ಅಶೋಕ್, ಡಿಕೆ ಶಿವಕುಮಾರ್ (ETV Bharat)
author img

By ETV Bharat Karnataka Team

Published : Aug 11, 2024, 5:28 PM IST

ಬೆಂಗಳೂರು: ನೀರಾವರಿ ಸಚಿವರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರಿಗೆ ತಮ್ಮ ಇಲಾಖೆಗಳ ನಿರ್ವಹಣೆಗಿಂತ ಕಾಂಗ್ರೆಸ್ ಹೈಕಮಾಂಡ್ ಏಜೆಂಟ್ ಕೆಲಸವೇ ಹೆಚ್ಚಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ವಾಗ್ದಾಳಿ ನಡೆಸಿದ್ದಾರೆ.

ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಪೋಸ್ಟ್ ಮಾಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರದ ದಿವ್ಯ ನಿರ್ಲಕ್ಷ್ಯದಿಂದ ತುಂಗಭದ್ರಾ ಅಣೆಕಟ್ಟಿನ 19ನೇ ಗೇಟ್‌ ಚೈನ್‌ ಲಿಂಕ್ ಮುರಿದು ಬಿದ್ದಿದೆ. ಡ್ಯಾಂನ ಹೊರ ಹರಿವು ಏರಿಕೆಯಾಗಿ ಅಪಾರ ಪ್ರಮಾಣದ ನೀರು ಪೋಲಾಗುತ್ತಿರುವುದರಿಂದ ನದಿ ಪಾತ್ರದ ರೈತರನ್ನು ಚಿಂತೆಗೀಡು ಮಾಡಿದೆ. ಪ್ರಜೆಗಳ ಹಿತಕ್ಕಿಂತ, ಪಕ್ಷದ ಹಿತವೇ ಆದ್ಯತೆಯಾಗಿದೆ. ಭ್ರಷ್ಟಾಚಾರ, ರಾಜಕೀಯ ಮೇಲಾಟ, ಬಣ ಬಡಿದಾಟ, ಪಕ್ಕದ ರಾಜ್ಯಗಳ ಚುನಾವಣೆಗೆ ಹಣ ಹೊಂದಿಸುವಲ್ಲಿ ಬ್ಯುಸಿಯಾಗಿರುವ ಉಪಮುಖ್ಯಮಂತ್ರಿಗಳಿಗೆ ಇಲಾಖೆಯ ಕರ್ತವ್ಯ ನಿರ್ವಹಿಸಲು ಪಾಪ ಸಮಯ ಎಲ್ಲಿದೆ ಎಂದು ಲೇವಡಿ ಮಾಡಿದ್ದಾರೆ.

ಕಳೆದ ವರ್ಷವೆಲ್ಲ ಬರಗಾಲದಿಂದ ತತ್ತರಿಸಿದ್ದ ರೈತರು ಈ ವರ್ಷ ಉತ್ತಮ ಮಳೆಯಾಗಿ ಜಲಾಶಯ ಭರ್ತಿಯಾಗಿರುವುದರಿಂದ ಎರಡು ಬೆಳೆ ತೆಗೆಯಬಹುದು ಎಂದು ನಿಟ್ಟುಸಿರು ಬಿಡುತ್ತಿರುವಾಗಲೇ ರಾಜ್ಯ ಕಾಂಗ್ರೆಸ್ ಸರ್ಕಾರದ ನಿರ್ಲಕ್ಷ್ಯದಿಂದ ಈಗ ಬಿತ್ತನೆಯಾಗಿರುವ ಒಂದು ಬೆಳೆಯುೂ ಸಹ ಕೈತಪ್ಪಬಹುದು ಎಂಬ ಆತಂಕದಲ್ಲಿದ್ದಾರೆ ಎಂದಿದ್ದಾರೆ.

ಆರ್ ಅಶೋಕ್ ಪೋಸ್ಟ್
ಆರ್ ಅಶೋಕ್ ಪೋಸ್ಟ್ (ಸಾಮಾಜಿಕ ಜಾಲತಾಣ)

ಕಾಲಕಾಲಕ್ಕೆ ಜಲಾಶಯದ ತಾಂತ್ರಿಕ ಸಮಿತಿಯ ಸಭೆ ಮಾಡಿ ಡ್ಯಾಂನ ಸುರಕ್ಷತೆ, ನಿರ್ವಹಣೆ ಬಗ್ಗೆ ಗಮನ ಹರಿಸದಿದ್ದರೆ ಇವತ್ತು ಇಂತಹ ಪರಿಸ್ಥಿತಿ ಬರುತ್ತಿರಲಿಲ್ಲ. ಕಳೆದ ವರ್ಷ ಬರಗಾಲದಿಂದ ಜಲಾಶಯ ಖಾಲಿಯಾಗಿದ್ದಾಗ ಡ್ಯಾಂನ ದುರಸ್ತಿ ಕಾರ್ಯ ಮಾಡಲು ಸಮಯವೂ ಇತ್ತು, ಅವಕಾಶವೂ ಇತ್ತು. ಆದರೆ ಸಿಎಂ ಕುರ್ಚಿ ಮೇಲೆ ಟವಲ್ ಹಾಕೋದರಲ್ಲೇ ಸದಾಕಾಲ ಬ್ಯುಸಿಯಾಗಿರುವ ಡಿಸಿಎಂ ಸಾಹೇಬರಿಗೆ ಡ್ಯಾಂ ರಿಪೇರಿ ಮಾಡಿಸಲು ಸಮಯ ಎಲ್ಲಿದೆ? ಆಸಕ್ತಿ ಎಲ್ಲಿದೆ ಎಂದು ವ್ಯಂಗ್ಯವಾಡಿದ್ದಾರೆ.

ಸಿಎಂ ಸಿದ್ದರಾಮಯ್ಯನವರೇ, ನಿಮ್ಮ ಅಧಿಕಾರದ ತೆವಲಿಗೆ ರೈತರ ಬದುಕಿನ ಜೊತೆ ಇನ್ನೆಷ್ಟು ದಿನ ಹೀಗೆ ಚೆಲ್ಲಾಟವಾಡುತ್ತೀರಿ?. ಉತ್ತಮ ಮಳೆಯಾಗಿದ್ದರೂ ನಿಮ್ಮ ದುರಾಡಳಿತದಿಂದ ಇವತ್ತು ನಾಡಿನ ರೈತರು ಕಣ್ಣೀರಿಡುವ ಪರಿಸ್ಥಿತಿ ಬಂದಿದೆ. ನಿಮ್ಮ ದುರಾಡಳಿತದಿಂದ ಕನ್ನಡಿಗರಿಗೆ ಆದಷ್ಟು ಬೇಗ ಮುಕ್ತಿ ಬೇಕಿದೆ. ನಾಡಿನ ಅನ್ನದಾತರ ಶಾಪ ತಟ್ಟುವ ಮುನ್ನ ರಾಜೀನಾಮೆ ಕೊಟ್ಟು ತೊಲಗಿ ಎಂದು ಪ್ರತಿಪಕ್ಷ ನಾಯಕ ಆರ್​ ಅಶೋಕ್​ ಒತ್ತಾಯಿಸಿದ್ದಾರೆ.

ತುಂಗಭದ್ರಾ ಡ್ಯಾಂ ಗೇಟ್​ ಚೈನ್ ಲಿಂಕ್ ಕಟ್: ತುಂಗಭದ್ರಾ ಜಲಾಶಯದ 19ನೇ ಗೇಟ್​ ಚೈನ್ ಲಿಂಕ್ ಶನಿವಾರ ತಡರಾತ್ರಿ ಕಟ್​ ಆಗಿದೆ. ಇದರಿಂದ ಈ ಗೇಟ್​ವೊಂದರಲ್ಲೇ 35 ಸಾವಿರ ಕ್ಯೂಸೆಕ್​ ನೀರು ಹೊರಹೋಗುತ್ತಿದೆ. ಜೊತೆಗೆ 60 ಟಿಎಂಸಿ ನೀರು ಖಾಲಿ ಮಾಡುವ ಅನಿವಾರ್ಯತೆ ಎದುರಾಗಿದೆ. ಇದರಿಂದ ನದಿಪಾತ್ರದ ಜನರು ಆತಂಕಕ್ಕೀಡಾಗಿದ್ದಾರೆ.

ಇದನ್ನೂ ಓದಿ: ತುಂಗಭದ್ರಾ ಜಲಾಶಯ ಗೇಟ್​ ಪರಿಶೀಲಿಸಿದ ಡಿಸಿಎಂ ಡಿ ಕೆ ಶಿವಕುಮಾರ್ - DCM DK Shivakumar

ETV Bharat Logo

Copyright © 2025 Ushodaya Enterprises Pvt. Ltd., All Rights Reserved.