ತುಮಕೂರು: ಶಿಕ್ಷಕರೊಬ್ಬರನ್ನು ಭೀಕರವಾಗಿ ಕೊಲೆ ಮಾಡಿರುವ ಘಟನೆ ಜಿಲ್ಲೆಯ ಕುಣಿಗಲ್ ತಾಲೂಕಿನ ಹೇರೂರು ಗ್ರಾಮದಲ್ಲಿ ನಡೆದಿದೆ. ಮರಿಯಪ್ಪ (47) ಕೊಲೆಯಾದ ಶಿಕ್ಷಕ.
ಕುಣಿಗಲ್ ತಾಲೂಕಿನ ಕಸಬಾ ಹೋಬಳಿಯ ಕುಳ್ಳಿನಂಜಯ್ಯಪಾಳ್ಯದ ನಿವಾಸಿಯಾಗಿದ್ದ ಮರಿಯಪ್ಪ, ಮೋದೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅತಿಥಿ ಶಿಕ್ಷಕರಾಗಿ ಕೆಲಸ ನಿರ್ವಹಿಸುತ್ತಿದ್ದರು. ಇಂದು ಬೆಳಗ್ಗೆ ಶಾಲೆಗೆ ತೆರಳುತ್ತಿದ್ದಾಗ ದುಷ್ಕರ್ಮಿಗಳು ದಾಳಿ ಮಾಡಿ ಭೀಕರವಾಗಿ ಕೊಲೆ ಮಾಡಿದ್ದಾರೆ.
ಸುದ್ದಿ ತಿಳಿದು ಘಟನಾ ಸ್ಥಳಕ್ಕೆ ಎಎಸ್ಪಿ ಮರಿಯಪ್ಪ, ಕುಣಿಗಲ್ ಡಿವೈಎಸ್ಪಿ ಓಂಪ್ರಕಾಶ್ ಹಾಗೂ ಇನ್ಸ್ಪೆಕ್ಟರ್ ನವೀನ್ ಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ವೈಯಕ್ತಿಕ ದ್ವೇಷದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಘಟನೆ ಸಂಬಂಧ ಕುಣಿಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇದನ್ನೂ ಓದಿ: ಧಾರವಾಡ; ಐದು ದಿನಗಳಲ್ಲಿ ಐದು ಕೊಲೆ ಪ್ರಕರಣ: ರಾತ್ರಿ ಗಸ್ತು ಹೆಚ್ಚಿಸಿದ ಪೊಲೀಸ್ ಇಲಾಖೆ