ಬೆಂಗಳೂರು: ವಿಧಾನಪರಿಷತ್‌ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ಇಂದು ನಡೆದ ಉಪಚುನಾವಣೆಯು ಶಾಂತಿಯುತವಾಗಿ ನಡೆದಿದ್ದು, ಶೇ.87ರಷ್ಟು ಮತದಾನವಾಗಿದೆ. ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಇಂದು ಬೆಳಗ್ಗೆ 8 ಗಂಟೆಯಿಂದ ಸಂಜೆ 4 ಗಂಟೆಯವರೆಗೆ ಮತದಾನ ನಡೆಯಿತು. ಕೆಲವೆಡೆ ಸಣ್ಣಪುಟ್ಟ ಲೋಪದೋಷಗಳನ್ನು ಹೊರತುಪಡಿಸಿದರೆ, ಯಾವುದೇ ಸಮಸ್ಯೆಗಳಿಲ್ಲದೆ ಮತದಾನ ಪ್ರಕ್ರಿಯೆ ಮುಗಿದಿದೆ. ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ ಜಿಲ್ಲೆ ವ್ಯಾಪ್ತಿಯ ಶಿಕ್ಷಕರು ತಮ್ಮ ಮತ ಚಲಾಯಿಸಿದರು.
ಕಾಂಗ್ರೆಸ್ ಅಭ್ಯರ್ಥಿಯಾಗಿ ಪುಟ್ಟಣ್ಣ, ಎನ್‌ಡಿಎ ಅಭ್ಯರ್ಥಿಯಾಗಿ ಎ.ಪಿ.ರಂಗನಾಥ್ ಸೇರಿದಂತೆ 9 ಮಂದಿ ಕಣದಲ್ಲಿದ್ದಾರೆ. 7,128 ಪುರುಷರು, 12,024 ಮಹಿಳೆಯರು ಸೇರಿದಂತೆ ಒಟ್ಟು 19,152 ಮತದಾರರಿದ್ದಾರೆ. ಈ ಪೈಕಿ 6,500 ಸಾವಿರಕ್ಕೂ ಹೆಚ್ಚು ಪುರುಷರು, 10 ಸಾವಿರಕ್ಕೂ ಹೆಚ್ಚು ಮಹಿಳೆಯರು ಸೇರಿ 16,500ಕ್ಕೂ ಹೆಚ್ಚು ಮತದಾರರು ತಮ್ಮ ಹಕ್ಕು ಚಲಾಯಿಸಿದರು.
ಇದೇ ತಿಂಗಳ 20ರಂದು ಮತ ಎಣಿಕೆ ನಡೆಯಲಿದೆ. ಮುಖ್ಯ ಚುನಾವಣಾಧಿಕಾರಿ ಕಚೇರಿ ಸಕಲ ಸಿದ್ಧತೆ ಮಾಡಿಕೊಂಡಿದೆ.
ಇದನ್ನೂ ಓದಿ: ಫೆ. 16ರಂದು ಬೆಂಗಳೂರು ಶಿಕ್ಷಕರ ಕ್ಷೇತ್ರದ ಚುನಾವಣೆ: 20ಕ್ಕೆ ಮತ ಎಣಿಕೆ