ETV Bharat / state

ಟೆಕ್ಕಿ ಅತುಲ್ ಆತ್ಮಹತ್ಯೆಗೆ ಪ್ರಚೋದನೆ ಆರೋಪ: ಪ್ರಕರಣ ರದ್ದು ಕೋರಿದ್ದ ಅರ್ಜಿ ಹಿಂಪಡೆದ ಪತ್ನಿ - TECHIE ATUL SHUBHASH DEATH CASE

ಟೆಕ್ಕಿ ಅತುಲ್ ಸುಭಾಷ್ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪ ಪ್ರಕರಣ ರದ್ದು ಕೋರಿ ಹೈಕೋರ್ಟ್​ಗೆ ಸಲ್ಲಿಸಿದ್ದ ಅರ್ಜಿಯನ್ನು ಪತ್ನಿ ನಿಖಿತಾ ಸಿಂಘಾನಿಯಾ ಹಾಗೂ ಇತರರು ಹಿಂಪಡೆದಿದ್ದಾರೆ.

techie-atul-shubhash-wife-withdraws-petition-seeking-dismiss-the-case
ಹೈಕೋರ್ಟ್ (ETV Bharat)
author img

By ETV Bharat Karnataka Team

Published : Feb 21, 2025, 6:12 PM IST

ಬೆಂಗಳೂರು: ದೇಶಾದ್ಯಂತ ಭಾರೀ ಸದ್ದು ಮಾಡಿದ್ದ ಟೆಕ್ಕಿ ಅತುಲ್ ಶುಭಾಷ್ ಅವರ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಆರೋಪದಲ್ಲಿ ದಾಖಲಾಗಿದ್ದ ಪ್ರಕರಣ ರದ್ದು ಕೋರಿ ಆತನ ಪತ್ನಿ ನಿಖಿತಾ ಸಿಂಘಾನಿಯಾ ಮತ್ತವರ ತಾಯಿ ಹಾಗೂ ಸಹೋದರ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ.

ತಮ್ಮ ವಿರುದ್ಧದ ಪ್ರಕರಣ ರದ್ದು ಕೋರಿ ಸಿಂಘಾನಿಯಾ ಮತ್ತಿತರರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಆರ್.ಕೃಷ್ಣ ಕುಮಾರ್ ಅವರಿದ್ದ ನ್ಯಾಯಪೀಠಕ್ಕೆ ಅರ್ಜಿದಾರರ ಪರ ವಕೀಲರು ಪ್ರಕರಣ ಹಿಂಪಡೆಯುವುದಾಗಿ ಮೆಮೋ ಸಲ್ಲಿಸಿದರು. ಇದನ್ನು ದಾಖಲಿಸಿಕೊಂಡ ಕೋರ್ಟ್ ಅರ್ಜಿ ವಜಾಗೊಳಿಸಿ ಆದೇಶಿಸಿತು.

ಆದರೆ, ಪ್ರಕರಣದ ಮತ್ತೋರ್ವ ಆರೋಪಿ ನಿಖಿತಾ ಸಿಂಘಾನಿಯಾ ಅವರ ಚಿಕ್ಕಪ್ಪ ಸುಶೀಲ್ ಕುಮಾರ್ ಸಿಂಘಾನಿಯಾ ಸಲ್ಲಿಸಿದ್ದ ಅರ್ಜಿಯ ಸಂಬಂಧ ಅತುಲ್ ಸುಭಾಷ್ ಸಹೋದರ ಬಿಕಾಸ್ ಕುಮಾರ್​ಗೆ (ದೂರುದಾರ) ನೋಟಿಸ್ ಜಾರಿ ಮಾಡಿದ್ದು, ಮುಂದಿನ ವಿಚಾರಣೆವರೆಗೂ ಪ್ರಕರಣದ ತನಿಖೆಗೆ ತಡೆಯಾಜ್ಞೆ ನೀಡಿ, ವಿಚಾರಣೆಯನ್ನು ಫೆಬ್ರುವರಿ 26ಕ್ಕೆ ಮುಂದೂಡಿದೆ.

ನಿಖಿತಾ ಸಿಂಘಾನಿಯಾ ಅವರ ಚಿಕ್ಕಪ್ಪ ಸುಶೀಲ್ ಕುಮಾರ್ ಪರ ವಕೀಲರು, ''ಅರ್ಜಿದಾರರಿಗೆ 70 ವರ್ಷ ವಯಸ್ಸಾಗಿದೆ. ಡೆತ್ ನೋಟ್​​​ನಲ್ಲಿ ನಮ್ಮ ಕಕ್ಷಿದಾರರ ಹೆಸರಿದೆ ಎಂಬ ಕಾರಣಕ್ಕೆ ದೂರಿನಲ್ಲಿ ಅವರ ಹೆಸರನ್ನು ಸೇರಿಸಿರುವುದು ಸಾಮಾನ್ಯವಾಗಿದೆ. ಆದರೆ, ಅರ್ಜಿದಾರರ ವಿರುದ್ಧ ಯಾವುದೇ ಆರೋಪ ಮಾಡಿಲ್ಲ. ಎಲ್ಲ ಆರೋಪಗಳು ಮೃತರ ಪತ್ನಿ ಮತ್ತು ಕುಟುಂಬದವರ ವಿರುದ್ಧವಿದೆ'' ಎಂದು ಪೀಠಕ್ಕೆ ವಿವರಿಸಿದರು.

ದಾಖಲೆಗಳನ್ನು ಪರಿಶೀಲಿಸಿದ ಪೀಠ, ಅರ್ಜಿದಾರರ ಸುಶೀಲ್ ಕುಮಾರ್ ಸಿಂಘಾನಿಯಾ ವಿರುದ್ಧ ಯಾವುದೇ ಆರೋಪಗಳನ್ನು ಮಾಡಿಲ್ಲ ಎಂದು ಅಭಿಪ್ರಾಯಪಟ್ಟು, ವಿಚಾರಣೆಗೆ ಮಧ್ಯಂತರ ತಡೆಯಾಜ್ಞೆ ನೀಡಿ ಆದೇಶಿಸಿತು.

ವಿಚಾರಣೆ ವೇಳೆ ಸರ್ಕಾರಿ ಪರ ವಕೀಲರು, ''ಶೀಘ್ರದಲ್ಲಿಯೇ ಪ್ರಕರಣ ಸಂಬಂಧ ಆರೋಪ ಪಟ್ಟಿಯನ್ನು ವಿಚಾರಣಾ ನ್ಯಾಯಾಲಯಕ್ಕೆ ಸಲ್ಲಿಸಲಾಗುವುದು'' ಎಂದು ಪೀಠಕ್ಕೆ ತಿಳಿಸಿದರು.

ಪ್ರಕರಣವೇನು?: ಬೆಂಗಳೂರಿನಲ್ಲಿ ನೆಲೆಸಿದ್ದ ಉತ್ತರ ಪ್ರದೇಶದ ಟೆಕ್ಕಿ ಅತುಲ್ ಸುಭಾಷ್ (34) ಹಲವು ಪುಟಗಳ ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದರು. ಜೊತೆಗೆ, ಉತ್ತರ ಪ್ರದೇಶದ ಜೌನ್ಪುರ ಜಿಲ್ಲೆಯ ಕೌಟುಂಬಿಕ ನ್ಯಾಯಾಲಯದಲ್ಲಿ ವಿಚ್ಚೇದನ ಅರ್ಜಿ, ಜೀವನಾಂಶ, ಮಕ್ಕಳು ವಶಕ್ಕೆ ಪಡೆಯುವ ಕುರಿತು ನಿಖಿತಾ ಸಿಂಘಾನಿಯಾ ಕುಟುಂಬದವರ ವಿರುದ್ಧ ಆರೋಪ ಮಾಡಿದ್ದರು. ಈ ಬಗ್ಗೆ ಸುಭಾಷ್ ಸಹೋದರ ಬಿಕಾಸ್ ಕುಮಾರ್ ನಗರದ ಮಾರತ್‌ಹಳ್ಳಿ ಪೊಲೀಸ್​​​ ಠಾಣೆಗೆ ದೂರು ದಾಖಲಿಸಿದ್ದರು. ಈ ಸಂಬಂಧ ಎಲ್ಲ ಆರೋಪಿಗಳಿಗೆ ವಿಚಾರಣಾ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶಿಸಿತ್ತು.

ಇದನ್ನೂ ಓದಿ: ಟೆಕ್ಕಿ ಅತುಲ್​ ಸುಭಾಷ್​ ಪುತ್ರ ಯಾರ ಸುಪರ್ದಿಗೆ? ವಿಚಾರಣೆಯಲ್ಲಿ ಸುಪ್ರೀಂಕೋರ್ಟ್​ ಹೇಳಿದ್ದೇನು?

ಇದನ್ನೂ ಓದಿ: ಶಾಸಕರು, ಎಂಎಲ್​ಸಿಗಳಿಗೆ ಸಂಪುಟ ದರ್ಜೆ ಸ್ಥಾನಮಾನ: ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್

ETV Bharat Logo

Copyright © 2025 Ushodaya Enterprises Pvt. Ltd., All Rights Reserved.