ETV Bharat / state

ಬಿರು ಬಿಸಿಲಿನ ತಾಪಕ್ಕೆ ರಾಜ್ಯದಲ್ಲಿ ಮೊದಲ ಬಲಿ?: ಕೆಲಸ ಮಾಡುತ್ತಿರುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವು - Temperature rise

author img

By ANI

Published : Apr 1, 2024, 7:58 AM IST

ಬಿರುಬಿಸಿಲಿನ ತಾಪಕ್ಕೆ ರಾಜ್ಯದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಶಂಕೆ ವ್ಯಕ್ತವಾಗಿದೆ. ಕೆಲಸ ಮಾಡುತ್ತಿರುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವನ್ನಪ್ಪಿದ್ದಾರೆ. ಮರಣೋತ್ತರ ಪರೀಕ್ಷೆಯ ವರದಿ ಬಂದ ಬಳಿಕ ನೈಜ ಮಾಹಿತಿ ತಿಳಿಯಲಿದೆ.

Kalaburagi  summer  40 degrees Celsius
ಬಿರುಬಿಸಿಲಿನ ತಾಪಕ್ಕೆ ರಾಜ್ಯದಲ್ಲಿ ಮೊದಲ ಬಲಿ? ಕೆಲಸ ಮಾಡುತ್ತಿರುವಾಗಲೇ ಕುಸಿದು ಬಿದ್ದು ವ್ಯಕ್ತಿ ಸಾವು

ಕಲಬುರಗಿ: ಬೇಸಿಗೆ ಆರಂಭದಲ್ಲೇ ದೇಶದ ಇತರ ಭಾಗಗಳೊಂದಿಗೆ ದಕ್ಷಿಣ ಭಾರತದಲ್ಲಿ ತಾಪಮಾನ ಗಗನಕ್ಕೇರುತ್ತಿದೆ. ಭಾನುವಾರ ಕರ್ನಾಟಕದ ಕಲಬುರಗಿಯಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ಮಾಹಿತಿ ನೀಡಿದ ಕಲಬುರಗಿ ಜಿಲ್ಲಾ ವಿಪತ್ತು ವೃತ್ತಿಪರ ಉಪ ಆಯುಕ್ತ ಉಮೇಶ್ ಅವರು, "ಮಾರ್ಚ್ 31 ರಂದು ಕಲಬುರಗಿಯಲ್ಲಿ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ'' ಎಂದು ತಿಳಿಸಿದರು.

ರಣ ಬಿಸಿಲಿಗೆ ವ್ಯಕ್ತಿ ಸಾವು?: ಸುಡುವ ಬಿಸಿಲಿಗೆ ಬೆದರಿ ಜನರು ಮನೆಯಿಂದ ಹೊರಗೆ ಬರುವುದಕ್ಕೆ ಹೆದರುತ್ತಿದ್ದಾರೆ. ಹೆಚ್ಚಾಗಿರುವ ಬಿಸಿಲಿನ ತಾಪದ ಕುರಿತು ಜನರಿಗೆ ಎಚ್ಚರವಹಿಸುವಂತೆ ಹವಾಮಾನ ಇಲಾಖೆ ಸೂಚನೆ ನೀಡಿದೆ. ಕಲಬುರಗಿಯಲ್ಲಿ ಉರಿ ಬಿಸಿಲಿಗೆ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಅನುಮಾನ ಮೂಡಿದೆ. ನರೇಗಾ ಕೂಲಿ ಕೆಲಸ ಮಾಡುವಾಗ ವ್ಯಕ್ತಿಯೊಬ್ಬರು ಇದ್ದಕ್ಕಿದ್ದಂತೆ ಕುಸಿದು ಬಿದ್ದು ಸಾವನ್ನಪ್ಪಿದ್ದು, ಬಿಸಿಲಿನ ತಾಪದಿಂದ ಅಥವಾ ಹೃದಯಾಘಾತದಿಂದ ಸಾವನ್ನಪ್ಪಿರುವ ಕುರಿತು ಮೃತ ವ್ಯಕ್ತಿಯ ಪತ್ನಿ ಶಂಕೆ ವ್ಯಕ್ತಪಡಿಸಿದ್ದಾರೆ.

ಕಲಬುರಗಿ ಜಿಲ್ಲೆಯ ಆಳಂದ ತಾಲೂಕಿನ ದಣ್ಣೂರ ಗ್ರಾಮದಲ್ಲಿ ದುರ್ಘಟನೆ ನಡೆದಿದೆ. ಶರಣಪ್ಪ ಸಮಗಾರ (42) ಎಂಬುವರು ನರೇಗಾ ಕೆಲಸ ಮಾಡುತ್ತಿರುವ ವೇಳೆಯಲ್ಲಿ ಕುಸಿದು ಬಿದ್ದು ಸಾವನ್ನಪ್ಪಿದ್ದಾರೆ. ಬಿಸಿಲಿನ ಹೊಡೆತಕ್ಕೆ ಶರಣಪ್ಪನ ಮೃತಪಟ್ಟಿದ್ದಾರಾ? ಅಥವಾ ಹೃದಯಾಘಾತದಿಂದ ಸಾವನ್ನಪ್ಪಿದ್ದಾರಾ? ಎನ್ನುವ ಕುರಿತಂತೆ ಅನುಮಾನ ಮೂಡಿದೆ. ಶರಣಪ್ಪ ಸಮಗಾರ ಮರಣೋತ್ತರ ಪರೀಕ್ಷೆ ವರದಿ ಬಂದ ನಂತರ ಸಂಪೂರ್ಣ ಮಾಹಿತಿ ಬಹಿರಂಗವಾಗಲಿದೆ. ಈ ಸಂಬಂಧ ಕಲಬುರಗಿ ಜಿಲ್ಲೆಯ ನರೋಣಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಬಿಸಿಲಿನ ಆರ್ಭಟ ಆರಂಭ: ಈ ಬಾರಿ ರಾಜ್ಯದ ಎರಡು ಜಿಲ್ಲೆಗಳಲ್ಲಿ ಉಷ್ಣಾಂಶ 40 ಡಿಗ್ರಿ ಸೆಲ್ಸಿಯಸ್ ಗಡಿ ದಾಟಿದೆ. ಬಾಗಲಕೋಟೆ 40.6 ಡಿಗ್ರಿ ಸೆಲ್ಸಿಯಸ್ ಹಾಗೂ ಕಲಬುರಗಿಯಲ್ಲಿ 40.9 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ಬೆಂಗಳೂರಲ್ಲಿ 1996ರ ಬಳಿಕ ಅತಿ ಹೆಚ್ಚು ತಾಪಮಾನ ಮಾರ್ಚ್​​ ತಿಂಗಳಲ್ಲೇ ದಾಖಲಾಗಿದೆ. 1996ರಲ್ಲಿ ಬೆಂಗಳೂರಲ್ಲಿ 37.3 ಡಿಗ್ರಿ ಸೆಲ್ಸಿಯಸ್​ ತಾಪಮಾನ ದಾಖಲಾಗಿತ್ತು. ಆದರೆ ಈ ಬಾರಿ (2024) ಮಾರ್ಚ್‍ನಲ್ಲಿ ಬೆಂಗಳೂರಿನಲ್ಲಿ 37 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದೆ.

ಇನ್ನೂ ಬೇಸಿಗೆಯ ಆರಂಭದಲ್ಲಿ ಉತ್ತರ ಕರ್ನಾಟಕದ ಕೆಲವು ಭಾಗದಲ್ಲಿ ದಾಖಲೆಯ ಉಷ್ಣಾಂಶ ದಾಖಲಾಗಿದೆ. ರಾಯಚೂರು, ಗದಗ, ಕೊಪ್ಪಳ, ಬಳ್ಳಾರಿ, ವಿಜಯಪುರ ಜಿಲ್ಲೆಗಳಲ್ಲಿ ಹೆಚ್ಚು ತಾಪಮಾನ ದಾಖಲಾಗಿದೆ. 1996ರಲ್ಲಿ ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಗರಿಷ್ಠ 44.6 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಏರಿಕೆಯಾಗಿತ್ತು. ಈ ಸಲ ಬೇಸಿಗೆ ಪ್ರಾರಂಭದಲ್ಲೇ, ಇದೇ ಮೊದಲ ಬಾರಿಗೆ ಉತ್ತರ ಕರ್ನಾಟಕ ಭಾಗದಲ್ಲಿ 40 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ಕಂಡು ಬಂದಿದೆ.

"ಬಿಸಿಲಿನ ಶಾಖವು ಸುಡುತ್ತಿದೆ. ಇಲ್ಲಿನ ಕಲಬುರಗಿಯಲ್ಲಿ ಈಗಾಗಲೇ ತಾಪಮಾನ 40 ಡಿಗ್ರಿ ಸೆಲ್ಸಿಯಸ್ ದಾಟಿದೆ. ಶಾಖದಿಂದ ನಮ್ಮನ್ನು ರಕ್ಷಿಸಿಕೊಳ್ಳಲು, ನಾವು ಮನೆಗೆ ಹೋಗುವ ದಾರಿಯಲ್ಲಿ ತಂಪು ಪಾನೀಯಗಳು ಮತ್ತು ಜ್ಯೂಸ್‌ಗಳನ್ನು ಸೇವಿಸುತ್ತಿದ್ದೇವೆ" ಎಂದು ಕಲಬುರಗಿಯ ನಿವಾಸಿ ಕೃತಿ ಹೇಳಿದ್ದಾರೆ.

ಜನರು ಈಗಾಗಲೇ ಬಿಸಿ ತಾಪದಿಂದ ತಪ್ಪಿಸಿಕೊಳ್ಳಲು ಪ್ರಾರಂಭಿಸಿದ್ದಾರೆ. ಬಟ್ಟೆಯಿಂದ ತಮ್ಮ ಮುಖ ಮುಚ್ಚಿಕೊಂಡು ಓಡಾಡುವುದು ಕಂಡು ಬರುತ್ತಿದೆ. ನಿಂಬೆ ರಸ ಸೇರಿದಂತೆ ವಿವಿಧ ತಂಪು ಪಾನೀಯಗಳತ್ತ ಮುಖಮಾಡಿದ್ದಾರೆ.

ಬಿಸಿಲಿನ ಎಫೆಕ್ಟ್​ನಿಂದ ತಡರಾತ್ರಿವರೆಗೆ ಪ್ರಚಾರ: ಇನ್ನೂ ಚುನಾವಣೆಗಳು ಸಮೀಪಿಸುತ್ತಿರುವ ಕಾರಣ, ರಾಜಕೀಯ ಪಕ್ಷಗಳು ತಮ್ಮ ಪ್ರಚಾರಗಳನ್ನು ನಡೆಸುವುದು ಕಷ್ಟಕರವಾಗಿದೆ. ಏಕೆಂದರೆ ಬಿಸಿಲಿನ ತಾಪದ ಹಿನ್ನೆಲೆ ಪಕ್ಷಗಳ ಕಾರ್ಯಕರ್ತರು ಪ್ರಚಾರದಲ್ಲಿ ಪಾಲ್ಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ. ಇನ್ನೂ ತಮಿಳುನಾಡಿನಲ್ಲಿ ಡಿಎಂಕೆ ಪಕ್ಷವು ಪ್ರಚಾರ ಸಭೆಯಲ್ಲಿ, ಜನಸಮೂಹಕ್ಕೆ ಕೂಲ್​ ವಾಟರ್ ಬಾಟಲಿಗಳು, ತಂಪಾದ ಮೊಸರು ಮತ್ತು ಕಲ್ಲಂಗಡಿಗಳನ್ನು ಹಂಚುವುದು ಕಂಡು ಬಂದಿದೆ. ಡಿಎಂಕೆ, ಎಐಎಡಿಎಂಕೆ ಮತ್ತು ಬಿಜೆಪಿಯಂತಹ ಎಲ್ಲ ಪಕ್ಷಗಳು ಚುನಾವಣೆಗೆ ಕೆಲವೇ ದಿನಗಳು ಉಳಿದಿರುವ ಕಾರಣ, ಸಂಜೆಯಿಂದ ತಡರಾತ್ರಿವರೆಗೆ ಪ್ರಚಾರಕ್ಕೆ ವೇಳಾಪಟ್ಟಿ ಸಿದ್ಧಪಡಿಸಿಕೊಂಡಿವೆ.

ಇದನ್ನೂ ಓದಿ: ವಾಟರ್ ಫಾರ್ ವಾಯ್ಸ್​​ಲೆಸ್: ಬೆಂಗಳೂರಲ್ಲಿ ಪ್ರಾಣಿ ಪಕ್ಷಿಗಳ ದಾಹ ನೀಗಿಸಲು ನೀರಿನ ತೊಟ್ಟಿ - Bengaluru water scarcity

ETV Bharat Logo

Copyright © 2024 Ushodaya Enterprises Pvt. Ltd., All Rights Reserved.