ETV Bharat / state

ಪೀಣ್ಯ 100 ಫೀಟ್ ರಸ್ತೆಯಲ್ಲಿ ವಾಹನ ಸಂಚಾರ, ನಿಲುಗಡೆಗೆ ತಾತ್ಕಾಲಿಕ‌ ನಿರ್ಬಂಧ - RESTRICTIONS FOR VEHICLE

ವೈಟ್​ ಟಾಪಿಂಗ್ ಕಾಮಗಾರಿ ನಡೆಯಲಿರುವ ಹಿನ್ನೆಲೆ ಪೀಣ್ಯ 100 ಫೀಟ್​ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.

vehicle-traffic
ವಾಹನ ಸಂಚಾರ (ETV Bharat (ಸಾಂದರ್ಭಿಕ ಚಿತ್ರ))
author img

By ETV Bharat Karnataka Team

Published : Feb 1, 2025, 3:49 PM IST

ಬೆಂಗಳೂರು : ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ ವತಿಯಿಂದ ವೈಟ್ ಟಾಪಿಂಗ್ ಕಾಮಗಾರಿ ನಡೆಯಲಿರುವ ಹಿನ್ನೆಲೆಯಲ್ಲಿ ಪೀಣ್ಯ 100 ಫೀಟ್ ರಸ್ತೆಯಲ್ಲಿನ ಪೀಣ್ಯ ಇಂಡಸ್ಟ್ರಿಯಲ್ ಅಸೋಸಿಯೇಷನ್ ಜಂಕ್ಷನ್​ನಿಂದ ಜಾಲಹಳ್ಳಿ ಕ್ರಾಸ್ ಜಂಕ್ಷನ್​ವರೆಗಿನ 200 ಮೀಟರ್ ರಸ್ತೆಯಲ್ಲಿ ವಾಹನ ಸಂಚಾರಕ್ಕೆ ತಾತ್ಕಾಲಿಕ ನಿರ್ಬಂಧ ವಿಧಿಸಲಾಗಿದೆ.

(ಫೆಬ್ರವರಿ 1) ಇಂದಿನಿಂದ ವೈಟ್ ಟಾಪಿಂಗ್ ಕಾಮಗಾರಿ ಪೂರ್ಣಗೊಳ್ಳುವವರೆಗೆ ರಸ್ತೆಯಲ್ಲಿ ವಾಹನ ಸಂಚಾರ ಹಾಗೂ ನಿಲುಗಡೆಗೆ ನಿರ್ಬಂಧಿಸಲಾಗಿದೆ ಎಂದು ಬೆಂಗಳೂರು ಸಂಚಾರಿ ಪೊಲೀಸರು ಮಾಹಿತಿ ನೀಡಿದ್ದಾರೆ.

ಪರ್ಯಾಯ ಮಾರ್ಗ : ಪೀಣ್ಯ 100 ಫೀಟ್ ರಸ್ತೆಯ ಮೂಲಕ ಜಾಲಹಳ್ಳಿ ಕ್ರಾಸ್ ಜಂಕ್ಷನ್​ ಕಡೆಗೆ ಹೋಗುವ ವಾಹನಗಳು ಪೀಣ್ಯ ಇಂಡಸ್ಟ್ರಿಯಲ್ ಅಸೋಸಿಯೇಷನ್ ಜಂಕ್ಷನ್​ನಲ್ಲಿ ಬಲಕ್ಕೆ ಚಲಿಸಿ, ರಸ್ತೆಯ ಮತ್ತೊಂದು ಬದಿಯ ಮೂಲಕ ದ್ವಿಮುಖ ಸಂಚಾರ ರಸ್ತೆಯ ಮೂಲಕ ಸಾಗಬಹುದು. ಎಲ್ಲಾ ಮಾದರಿಯ ಸರಕು-ಸಾಗಣೆ ವಾಹನಗಳು ಟಿವಿಎಸ್ ಕ್ರಾಸ್ ಜಂಕ್ಷನ್​ನಿಂದ ಪೀಣ್ಯ ಪೊಲೀಸ್ ಠಾಣೆ ರಸ್ತೆಯ ಮೂಲಕ ಸಾಗಿ, ಪೀಣ್ಯ ಪೊಲೀಸ್ ಠಾಣೆ ಜಂಕ್ಷನ್​ನಲ್ಲಿ ತುಮಕೂರು ರಸ್ತೆಯ ಮೂಲಕ ಸಾಗಬಹುದು.

ವಾಹನ ನಿಲುಗಡೆ ನಿಷೇಧ : ಪೀಣ್ಯ ಪೊಲೀಸ್ ಠಾಣೆ ರಸ್ತೆ, ಪೀಣ್ಯ 100 ಅಡಿ ರಸ್ತೆ (ಜಾಲಹಳ್ಳಿ ಕ್ರಾಸ್​ನಿಂದ ಟಿವಿಎಸ್ ಕ್ರಾಸ್​ವರೆಗೆ) ಹಾಗೂ ಪೀಣ್ಯ 1ನೇ ಕ್ರಾಸ್ ರಸ್ತೆಯಲ್ಲಿ ಎಲ್ಲಾ ರೀತಿಯ ವಾಹನಗಳ ನಿಲುಗಡೆಯನ್ನು ಕಾಮಗಾರಿ ಪೂರ್ಣಗೊಳ್ಳುವವರೆಗೆ, ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ.

ಇದನ್ನೂ ಓದಿ : ದುಬಾರಿ ಅರಮನೆ ಮೈದಾನ ರಸ್ತೆ ಅಗಲೀಕರಣ ಬದಲು ಪರ್ಯಾಯ ಸುರಂಗ ರಸ್ತೆ ಮಾರ್ಗದತ್ತ ಸರ್ಕಾರದ ಚಿತ್ತ! - NEW TUNNEL ROAD PLANNING

ETV Bharat Logo

Copyright © 2025 Ushodaya Enterprises Pvt. Ltd., All Rights Reserved.