ವಿಜಯಪುರ: ಚಾಲಕನ ನಿಯಂತ್ರಣ ತಪ್ಪಿದ ಕಾರು, ಮರಕ್ಕೆ ಡಿಕ್ಕಿ ಹೊಡೆದು ಪಲ್ಟಿಯಾದ ಪರಿಣಾಮ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಮೂವರು ಮೃತಪಟ್ಟ ಘಟನೆ ವಿಜಯಪುರ ತಾಲೂಕಿನ ಕನ್ನಾಳ ಕ್ರಾಸ್ ಬಳಿ ರಾಷ್ಟ್ರೀಯ ಹೆದ್ದಾರಿ 50ರಲ್ಲಿ ನಡೆದಿದೆ.
ಅಭಿಷೇಕ್ ಸಾವಂತ್ (34), ವಿಜಯಕುಮಾರ್ ಔರಂಗಾಬಾದ್ (45), ರಾಜು ಗೆಣ್ಣೂರ (30) ಮೃತರು. ಘಟನೆಯಲ್ಲಿ ಇಬ್ಬರು ಗಾಯಗೊಂಡಿದ್ದು, ಅವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.
ಕಾರ್ಯ ನಿಮಿತ್ತ ಕಾರಿನಲ್ಲಿ ಐವರು ಸೊಲ್ಲಾಪುರಕ್ಕೆ ಹೋಗಿದ್ದು, ವಾಪಸ್ ಬರುವಾಗ ಈ ದುರ್ಘಟನೆ ಸಂಭವಿಸಿದೆ. ಸುದ್ದಿ ತಿಳಿದು ಸ್ಥಳಕ್ಕೆ ವಿಜಯಪುರ ಗ್ರಾಮೀಣ ಠಾಣೆ ಪೊಲೀಸರು ಭೇಟಿ ಪರಿಶೀಲನೆ ನಡೆಸಿದರು. ಸದ್ಯ ಮೂವರ ಮೃತದೇಹಗಳನ್ನು ವಿಜಯಪುರ ಜಿಲ್ಲಾಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ವಿಜಯಪುರ ಗ್ರಾಮೀಣ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಇದನ್ನೂ ಓದಿ: ರಾಯಚೂರು ಬಳಿ ಬಸ್-ಟ್ರ್ಯಾಕ್ಟರ್ ಅಪಘಾತ; ನವವಿವಾಹಿತೆ, ಗರ್ಭಿಣಿ ಸಾವು, 18 ಮಂದಿಗೆ ಗಾಯ - BUS AND TRACTOR ACCIDENT