ETV Bharat / state

ತೈಲ ತೆರಿಗೆ ಹೆಚ್ಚಳ ವಿರೋಧಿಸಿ ಬಿಜೆಪಿಯಿಂದ ಸೈಕಲ್ ಜಾಥಾ: ಬಿ.ವೈ. ವಿಜಯೇಂದ್ರ ಸೇರಿ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ - BJP protest - BJP PROTEST

ತೈಲದ ಮೇಲಿನ ತೆರಿಗೆ ಹೆಚ್ಚಳ ವಿರೋಧಿಸಿ ಪ್ರತಿಭಟನೆ ನಡೆಸಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಪ್ರತಿಭಟನಾನಿರತ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

ಬಿಜೆಪಿಯಿಂದ ಸೈಕಲ್ ಜಾಥಾ
ಬಿಜೆಪಿಯಿಂದ ಸೈಕಲ್ ಜಾಥಾ (ETV Bharat)
author img

By ETV Bharat Karnataka Team

Published : Jun 20, 2024, 1:24 PM IST

Updated : Jun 20, 2024, 3:26 PM IST

ತೈಲ ತೆರಿಗೆ ಹೆಚ್ಚಳಕ್ಕೆ ಪ್ರತಿಭಟನೆ ನಡೆಸಿದ್ದ ಬಿಜೆಪಿ ನಾಯಕರು ಪೊಲೀಸರ ವಶಕ್ಕೆ (ETV Bharat)

ಬೆಂಗಳೂರು: "ರಾಜ್ಯ ಸರ್ಕಾರ ಮತ್ತು ಮುಖ್ಯಮಂತ್ರಿಗಳು ಪೆಟ್ರೋಲ್ ​ ​- ಡೀಸೆಲ್​ ಬೆಲೆ ಏರಿಕೆ ಮಾಡಿರುವ ಭಂಡತನದ ನಿರ್ಧಾರವನ್ನು ಕೈಬಿಡಬೇಕು" ಎಂದು ಆಗ್ರಹಿಸಿ ಸೈಕಲ್ ಜಾಥಾ ಮೂಲಕ ಬಿಜೆಪಿ ಪ್ರತಿಭಟನೆ ನಡೆಸಿತು. ಈ ವೇಳೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಸೇರಿದಂತೆ ಪ್ರತಿಭಟನಾನಿರತ ಬಿಜೆಪಿ ನಾಯಕರನ್ನು ಪೊಲೀಸರು ವಶಕ್ಕೆ ಪಡೆದರು.

ತೈಲದ ಮೇಲಿನ ತೆರಿಗೆ ಹೆಚ್ಚಳ ವಿರೋಧಿಸಿ ಬಿಜೆಪಿ ಕಚೇರಿಯಿಂದ ವಿಧಾನಸೌಧದವರೆಗೆ ಸೈಕಲ್ ಜಾಥಾ ಮೂಲಕ ಬಿಜೆಪಿ ಪ್ರತಿಭಟನೆ ನಡೆಸಿತು. ವಿಧಾನಸೌಧ ಮುತ್ತಿಗೆ ಯತ್ನ ನಡೆಸಲಾಯಿತು. ಜಗನ್ನಾಥ ಭವನದಿಂದ ವಿಧಾನಸೌಧಕ್ಕೆ ತೆರಳುವ ಸೈಕಲ್ ಜಾಥಾದ ಆರಂಭದ ಸಂದರ್ಭದಲ್ಲಿ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ, "ಜನರಿಗೆ ಹೊರೆ ಆಗುವ ಈ ನಿರ್ಧಾರವನ್ನು ತಕ್ಷಣ ಕೈಬಿಡಬೇಕು. ಬೆಲೆ ಹೆಚ್ಚಳ ವಾಪಸ್​ ಪಡೆಯುವವರೆಗೂ ಬಿಜೆಪಿ ಹೋರಾಟ ಮುಂದುವರೆಯಲಿದೆ. ಬಿಜೆಪಿಯು ಈ ಸರ್ಕಾರದ ನಿರ್ಧಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸುತ್ತಿದೆ. ಮುಖ್ಯಮಂತ್ರಿಗಳು ತಮ್ಮ ನಿರ್ಧಾರದಿಂದ ಹಿಂದೆ ಸರಿಯುವವರೆಗೆ ಈ ಹೋರಾಟದಿಂದ ನಾವು ವಿಮುಖರಾಗುವುದಿಲ್ಲ" ಎಂದು ಎಚ್ಚರಿಕೆ ನೀಡಿದರು.

ನಂತರ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ಮಾಜಿ ಉಪ ಮುಖ್ಯಮಂತ್ರಿ ಡಾ.ಅಶ್ವತ್ಥನಾರಾಯಣ್, ವಿಧಾನಪರಿಷತ್ ಸದಸ್ಯರಾದ ಸಿ.ಟಿ.ರವಿ, ಛಲವಾದಿ ನಾರಾಯಣಸ್ವಾಮಿ ಮೊದಲಾದ ಪ್ರಮುಖರು ಸೈಕಲ್ ಜಾಥಾ ನಡೆಸಿದರು. ಬೆಂಗಳೂರು ಬಿಜೆಪಿಯ 3 ಜಿಲ್ಲೆಗಳೂ ಸೇರಿ ಈ ಜಾಥಾ ಏರ್ಪಡಿಸಿದ್ದವು. "ಇಳಿಸಿ ಇಳಿಸಿ ತೈಲಬೆಲೆ ಇಳಿಸಿ, ತೊಲಗಿಸಿ ತೊಲಗಿಸಿ ರಾಜ್ಯ ಸರಕಾರ ತೊಲಗಿಸಿ", "ಬೇಕೇ ಬೇಕು ನ್ಯಾಯ ಬೇಕು, ಬೆಲೆ ಏರಿಕೆ ಮಾಡಿದ ರಾಜ್ಯ ಸರಕಾರಕ್ಕೆ ಧಿಕ್ಕಾರ", "ಅಯ್ಯಯ್ಯೋ ಅನ್ಯಾಯ" ಮೊದಲಾದ ಘೋಷಣೆಗಳನ್ನು ಕೂಗುತ್ತ ಸೈಕಲ್​ ಜಾಥಾ ನಡೆಸಲಾಯಿತು.

ಮಾಜಿ ಸಚಿವರು, ಸಂಸದರು, ಶಾಸಕರು, ವಿಧಾನಪರಿಷತ್​ ಸದಸ್ಯರು, ಬಿಬಿಎಂಪಿ ಮಾಜಿ ಸದಸ್ಯರು, ಬಿಜೆಪಿ ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಸಪ್ತಗಿರಿ ಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಸಿ.ಕೆ. ರಾಮಮೂರ್ತಿ ಮತ್ತು ಪಕ್ಷದ ಪದಾಧಿಕಾರಿಗಳು, ಕಾರ್ಯಕರ್ತರು ಸೈಕಲ್​ ಜಾಥಾದಲ್ಲಿ ಭಾಗವಹಿಸಿದ್ದರು.

ಸೈಕಲ್​ ಜಾಥಾ ಪ್ರತಿಭಟನೆ ಸ್ವಲ್ಪ ದೂರ ಸಾಗುತ್ತಿದ್ದಂತೆ ತಡೆದು ನಿಲ್ಲಿಸಿದ ಪೊಲೀಸರು ಬಿ.ವೈ. ವಿಜಯೇಂದ್ರ ಸೇರಿದಂತೆ ಸೈಕಲ್​ ಜಾಥಾದಲ್ಲಿ ಭಾಗವಹಿಸಿದವರನ್ನು ವಶಕ್ಕೆ ಪಡೆದರು.

ಇದನ್ನೂ ಓದಿ: ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ: ವಿಧಾನಸೌಧ ಮುತ್ತಿಗೆಗೆ ಯತ್ನಿಸಿದ ಜೆಡಿಎಸ್ ಮುಖಂಡರು ವಶಕ್ಕೆ - JDS Leaders Protest

Last Updated : Jun 20, 2024, 3:26 PM IST
ETV Bharat Logo

Copyright © 2025 Ushodaya Enterprises Pvt. Ltd., All Rights Reserved.