ETV Bharat / state

ಮಂಗಳೂರು: ಅತ್ಯಾಚಾರ ಆರೋಪ ಪ್ರಕರಣ, ಸಾಕ್ಷ್ಯಾಧಾರ ಕೊರತೆಯಿಂದ ಆರೋಪಿ ಖುಲಾಸೆ - Rape Case

ಅತ್ಯಾಚಾರ ಆರೋಪ ಪ್ರಕರಣದ ಆರೋಪಿ ಉಮೇಶ್ ಸಾಲ್ಯಾನ್ ಎಂಬಾತನನ್ನು ಖುಲಾಸೆಗೊಳಿಸಿ ಕೋರ್ಟ್​ ಆದೇಶ ನೀಡಿದೆ. ಸಾಕ್ಷ್ಯಾಧಾರ ಕೊರತೆಯಿಂದ ಆರೋಪಿಯನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ.

RAPE CASE
ಸಾಂದರ್ಭಿಕ ಚಿತ್ರ (ETV Bharat)
author img

By ETV Bharat Karnataka Team

Published : Sep 3, 2024, 12:27 PM IST

ಮಂಗಳೂರು: ಅತ್ಯಾಚಾರ ಆರೋಪ ಪ್ರಕರಣದಲ್ಲಿ ಬಂಧಿತನಾಗಿದ್ದ ವ್ಯಕ್ತಿಯನ್ನು ಮಂಗಳೂರಿನ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಖುಲಾಸೆಗೊಳಿಸಿ ಆದೇಶ ನೀಡಿದೆ. ಉಮೇಶ್ ಸಾಲ್ಯಾನ್ ಅತ್ಯಾಚಾರ ಆರೋಪ ಪ್ರಕರಣದಿಂದ ಖುಲಾಸೆಗೊಂಡಿರುವ ವ್ಯಕ್ತಿ.

ವೃತ್ತಿಯಲ್ಲಿ ಚಾಲಕನಾಗಿದ್ದ ಉಮೇಶ್, 2019ರಲ್ಲಿ ಬಸ್​ನಲ್ಲಿಯೇ ಯುವತಿಯನ್ನು ಪರಿಚಯಿಸಿಕೊಂಡು ಆತ್ಮೀಯತೆ ಗಳಿಸಿಕೊಂಡಿದ್ದ. ಕೆಲವು ದಿನಗಳ ಬಳಿಕ ತನ್ನ ತಂದೆಯ ಶಸ್ತ್ರಚಿಕಿತ್ಸೆಗೆ ಹಣ ಬೇಕೆಂದು ಯುವತಿಯಿಂದ 1 ಲಕ್ಷ ರೂ. ಪಡೆದುಕೊಂಡಿದ್ದ. ಅಲ್ಲದೇ ಈ ಹಣವನ್ನು ಎರಡು ತಿಂಗಳಲ್ಲಿ ಪುನಃ ಕೊಡುವುದಾಗಿಯೂ ಭರವಸೆ ನೀಡಿದ್ದ ಎಂದು ಆರೋಪಿಸಲಾಗಿತ್ತು.

ಆದರೆ, ಕೆಲವು ದಿನಗಳ ಬಳಿಕ ಯುವತಿಯು ಹಣ ಕೇಳಿದಾಗ ಆರೋಪಿಯು ಹಣ ಕೊಡದೇ ಸತಾಯಿಸಿದ್ದನು. 2019 ನವೆಂಬರ್ 20ರಂದು ಹಣ ಕೊಡುವುದಾಗಿ ಹೇಳಿ ಯುವತಿಯನ್ನು ತನ್ನ ಮನೆಗೆ ಕರೆಸಿಕೊಂಡು ಅತ್ಯಾಚಾರ ಮಾಡಿದ್ದನು. ಅಲ್ಲದೇ ಮದುವೆಯಾಗುತ್ತೇನೆಂದು ನಂಬಿಸಿ ಯುವತಿಯನ್ನು ನಿರಂತರವಾಗಿ ಅತ್ಯಾಚಾರ ಮಾಡಿರುವುದಾಗಿ ದೂರಲಾಗಿತ್ತು. ಇದರಿಂದ ಯುವತಿ ಗರ್ಭಿಣಿ ಆಗಿದ್ದು, ನಂತರದ ದಿನಗಳಲ್ಲಿ ಆರೋಪಿಯು ಯುವತಿಯನ್ನು ಮದುವೆಯಾಗಲು ಒಪ್ಪಿರಲಿಲ್ಲ. ಬಳಿಕ 2020ರ ಆಗಸ್ಟ್​ 4ರಂದು ಯುವತಿ ಹೆಣ್ಣು ಮಗುವಿಗೆ ಜನ್ಮ ನೀಡಿದ್ದಳು. ಈ ಬಗ್ಗೆ ಯುವತಿಯು ಬಜ್ಪೆ ಪೊಲೀಸ್ ಠಾಣೆಯಲ್ಲಿ ನೀಡಿದ ದೂರು ಆಧರಿಸಿ ಆರೋಪಿಯ ವಿರುದ್ಧ ಎಫ್​ಐಆರ್​ ದಾಖಲು ಮಾಡಿಕೊಳ್ಳಲಾಗಿತ್ತು.

ಈ ಪ್ರಕರಣದಲ್ಲಿ ಬಜ್ಜೆ ಪೊಲೀಸರು ಆರೋಪಿ ಉಮೇಶ್ ಸಾಲ್ಯಾನ್ ವಿರುದ್ಧ ತನಿಖೆ ನಡೆಸಿ, ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಈ ಅತ್ಯಾಚಾರ ಪ್ರಕರಣದಲ್ಲಿ ವಿಚಾರಣೆ ನಡೆಸಿದ 6ನೇ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾದೀಶರಾದ ಕಾಂತರಾಜು ಎಸ್.ವಿ. ಅವರು ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ಸಾಕ್ಷ್ಯಾಧಾರಗಳ ಕೊರತೆಯಿದೆ ಎಂದು ಆರೋಪಿ ಉಮೇಶನನ್ನು ಖುಲಾಸೆಗೊಳಿಸಿ ಆದೇಶ ನೀಡಿದ್ದಾರೆ.

ಆರೋಪಿಯ ಪರವಾಗಿ ಮಂಗಳೂರಿನ ವಕೀಲರಾದ ಬಿ. ಅರುಣ ಬಂಗೇರ ಮತ್ತು ರಿಹಾನ್​ ಪರ್ವೀನ್ ಅವರು ವಾದಿಸಿದ್ದರು.

ಇದನ್ನೂ ಓದಿ: ವಿವಾಹವಾಗುವುದಾಗಿ ನಂಬಿಸಿ ಯುವತಿ ಮೇಲೆ ಅತ್ಯಾಚಾರ: ಅಪರಾಧಿಗೆ 10 ವರ್ಷ ಜೈಲು ಶಿಕ್ಷೆ - Young Woman Rape Case

ETV Bharat Logo

Copyright © 2024 Ushodaya Enterprises Pvt. Ltd., All Rights Reserved.