ETV Bharat / state

ಮೈಸೂರು: ದಸರಾಗೆ ರಾಜಮಾತೆಯನ್ನು ಆಹ್ವಾನಿಸಿದ ಜಿಲ್ಲಾಡಳಿತ - Dasara invitation to Rajamata

author img

By ETV Bharat Karnataka Team

Published : 2 hours ago

ದಸರಾ ಮಹೋತ್ಸವಕ್ಕೆ ರಾಜ್ಯ ಸರ್ಕಾರದ ಪರವಾಗಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್​ ಸಿ ಮಹದೇವಪ್ಪ ಅವರು ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್​​ ಅವರಿಗೆ ಅಧಿಕೃತ ಆಹ್ವಾನ ನೀಡಿದರು.

the-district-administration-invited-rajamata-for-dasara
ದಸರಾಗೆ ರಾಜಮಾತೆಯನ್ನು ಆಹ್ವಾನಿಸಿದ ಜಿಲ್ಲಾಡಳಿತ (ETV Bharat)

ಮೈಸೂರು : ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಹಿನ್ನೆಲೆ ರಾಜ್ಯ ಸರ್ಕಾರದ ಪರವಾಗಿ ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಹೆಚ್. ಸಿ ಮಹದೇವಪ್ಪ ಅವರು ಮೈಸೂರು ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರಿಗೆ ಅಧಿಕೃತ ಆಹ್ವಾನ ನೀಡಿದರು.

ಭಾನುವಾರ ಅರಮನೆಯಲ್ಲಿರುವ ನಿವಾಸದಲ್ಲಿ ರಾಜವಂಶಸ್ಥರಾದ ಪ್ರಮೋದಾದೇವಿ ಒಡೆಯರ್ ಅವರನ್ನು ಭೇಟಿಯಾಗಿ ಸಾಂಪ್ರದಾಯಿಕವಾಗಿ ಫಲತಾಂಬೂಲ ನೀಡಿ, ದಸರಾ ಉತ್ಸವಕ್ಕೆ ಆತ್ಮೀಯವಾಗಿ ಆಹ್ವಾನಿಸಿ, ಸರ್ಕಾರದಿಂದ ಪ್ರತಿವರ್ಷ ನೀಡಲಾಗುವ ಗೌರವಧನದ ಚೆಕ್ ನೀಡಿದರು.

ಈ ವೇಳೆ ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪಂಚಾಯತ್ ಸಿಇಒ ಕೆ. ಎಂ ಗಾಯಿತ್ರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ, ಅಪರ ಜಿಲ್ಲಾಧಿಕಾರಿ ಪಿ. ಶಿವರಾಜು, ಅರಮನೆ ಮಂಡಳಿ ಉಪನಿರ್ದೇಶಕ ಸುಬ್ರಹ್ಮಣ್ಯ, ಅರಮನೆ ಎಸಿಪಿ ಚಂದ್ರಶೇಖರ್ ಸೇರಿದಂತೆ ಮುಂತಾದವರು ಹಾಜರಿದ್ದರು.

ಯುವ ದಸರಾ ಸ್ಥಳ‌ ಪರಿಶೀಲನೆ : ಸಚಿವ ಮಹದೇವಪ್ಪ ಅವರು ನಗರದ ಹೊರವಲಯದ ಉತ್ತನಹಳ್ಳಿ ಸಮೀಪದಲ್ಲಿ ನಡೆಯುವ ಯುವ ದಸರಾ ಕಾರ್ಯಕ್ರಮ ಸ್ಥಳವನ್ನು ಪರಿಶೀಲಿಸಿದರು.

DR H C MAHADEVAPPA
ಯುವ ದಸರಾ ಕಾರ್ಯಕ್ರಮ ಸ್ಥಳ ಪರಿಶೀಲಿಸಿದ ಜಿಲ್ಲಾ ಉಸ್ತುವಾರಿ ಸಚಿವ ಡಾ ಹೆಚ್​ ಸಿ ಮಹದೇವಪ್ಪ (ETV Bharat)

ಕಾರ್ಯಕ್ರಮದ ಆಯೋಜನೆ ಕುರಿತು ಅಧಿಕಾರಿಗಳೊಂದಿಗೆ ಚರ್ಚಿಸಿದ ಸಚಿವರು, ನಾಡಹಬ್ಬ ದಸರಾ ಮಹೋತ್ಸವದಲ್ಲಿ ನಡೆಯುವ ಆಕರ್ಷಕ ಕಾರ್ಯಕ್ರಮಗಳಲ್ಲಿ "ಯುವ ದಸರಾ" ಪ್ರಮುಖವಾಗಿದ್ದು, ಮೈಸೂರು ನಗರ ಸೇರಿದಂತೆ ಸುತ್ತಮುತ್ತಲಿನ ಜಿಲ್ಲೆಗಳಿಂದ ಜನರು ಕಾರ್ಯಕ್ರಮ ವೀಕ್ಷಣೆಗೆ ಆಗಮಿಸುತ್ತಾರೆ. ಹೀಗಾಗಿ ಅಗತ್ಯ ಸೌಲಭ್ಯವನ್ನು ಕಲ್ಪಿಸುವಂತೆ ಸೂಚಿಸಿದರು.

ಯುವ ದಸರಾಗೆ ಸಹಸ್ರಾರು ಸಂಖ್ಯೆಯಲ್ಲಿ ಯುವಜನರು ಆಗಮಿಸಿ ಸಂಭ್ರಮಿಸುತ್ತಾರೆ. ಈ ಕಾರ್ಯಕ್ರಮಕ್ಕೆ ಹೆಚ್ಚಿನ ಸಂಖ್ಯೆಯಲ್ಲಿ ಜನರು ಬರುವುದರಿಂದ ಯಾವುದೇ ಅನಾನುಕೂಲ ಉಂಟಾಗದಂತೆ ಅಚ್ಚುಕಟ್ಟಾಗಿ ಎಲ್ಲಾ ವ್ಯವಸ್ಥೆಯನ್ನು ರೂಪಿಸಬೇಕು ಎಂದು ಸಲಹೆ ನೀಡಿದರು.

ಸೂಚನಾ ಫಲಕ ಅಳವಡಿಸಿ ಮಾರ್ಗದರ್ಶನ: ಸಾರ್ವಜನಿಕರಿಗೆ ಅನುಕೂಲವಾಗುವಂತೆ ದಾರಿಯುದ್ದಕ್ಕೂ ಬೀದಿದೀಪದ ವ್ಯವಸ್ಥೆ ಮಾಡಬೇಕು. ವಾಹನ ಪಾರ್ಕಿಂಗ್ ಸ್ಥಳದಲ್ಲಿ ವ್ಯವಸ್ಥಿತವಾಗಿ ನಿಲ್ಲಿಸಲು ಸೂಚನಾ ಫಲಕ ಅಳವಡಿಸಿ ಮಾರ್ಗದರ್ಶನ ನೀಡಬೇಕು ಎಂದರು.

ಬಹುಮುಖ್ಯವಾಗಿ ಮಹಿಳೆಯರಿಗೆ ಹೆಚ್ಚಿನ ಭದ್ರತೆ ಒದಗಿಸಬೇಕು. ರಾತ್ರಿ ವೇಳೆ ಕಾರ್ಯಕ್ರಮ ನಡೆಯುವುದರಿಂದ ಎಲ್ಲಾ ಬಗೆಯ ಅಗತ್ಯ ಮುಂಜಾಗ್ರತ ಕ್ರಮ ಅನುಸರಿಸಬೇಕು ಎಂದು ಸೂಚನೆ ನೀಡಿದರು.

ಈ ಸಂದರ್ಭದಲ್ಲಿ ಹಿರಿಯ ಐಪಿಎಸ್ ಅಧಿಕಾರಿ ಬೋರಲಿಂಗಯ್ಯ, ಜಿಲ್ಲಾಧಿಕಾರಿ ಜಿ. ಲಕ್ಷ್ಮೀಕಾಂತ ರೆಡ್ಡಿ, ಜಿಲ್ಲಾ ಪಂಚಾಯತ್ ಸಿಇಒ ಕೆ. ಎಂ ಗಾಯಿತ್ರಿ, ನಗರ ಪೊಲೀಸ್ ಆಯುಕ್ತೆ ಸೀಮಾ ಲಾಟ್ಕರ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ವಿಷ್ಣುವರ್ಧನ, ಉಪ ವಿಭಾಗಧಿಕಾರಿ ಕೆ. ಆರ್ ರಕ್ಷಿತ್ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ : ಭಾವನೆಗೆ ಧಕ್ಕೆಯಾಗದಂತೆ ಮಹಿಷಾ ದಸರಾ ಆಚರಣೆ ಮಾಡಿದರೆ ಸಂತೋಷ: ಸಂಸದ ಯದುವೀರ್ - YADUVEER WODIYAR

ETV Bharat Logo

Copyright © 2024 Ushodaya Enterprises Pvt. Ltd., All Rights Reserved.